ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿರುವ ನಷ್ಟಕ್ಕೆ ಪರಿಹಾರ ಒದಗಿಸಲಾಗುವುದು; ಸಚಿವ ಕೆ.ಗೋಪಾಲಯ್ಯ

ತಾಲ್ಲೂಕಿನಲ್ಲಿ ಅತಿವೃಷ್ಠಿಯಿಂದಾಗಿ ಒಬ್ಬ ವ್ಯಕ್ತಿ ಆಕಸ್ಮಿಕ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಧನ ನೀಡುವ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ನೆರೆ ಸಂತ್ರಸ್ತರನ್ನು ಭೇಟಿ ಮಾಡಿದ ಸಚಿವ ಕೆ.ಗೋಪಾಲಯ್ಯ

ನೆರೆ ಸಂತ್ರಸ್ತರನ್ನು ಭೇಟಿ ಮಾಡಿದ ಸಚಿವ ಕೆ.ಗೋಪಾಲಯ್ಯ

  • Share this:
ಹಾಸನ(ಆ.07): ಹಾಸನ  ಜಿಲ್ಲೆಯ ಸಕಲೇಶಪುರ ತಾಲ್ಲೂಕು ಸೇರಿದಂತೆ ಇತರೆ ತಾಲ್ಲೂಕುಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಅತಿವೃಷ್ಠಿಯಾಗಿದ್ದು, ಸಾಕಷ್ಟು ನಷ್ಟ ಸಂಭವಿಸಿದೆ. ಈ ನಿಟ್ಟಿನಲ್ಲಿ ಆಯಾ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ಸಕಲೇಶಪುರ ನಗರದ ಹೊಳೆಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಹೇಮಾವತಿ ನದಿಗೆ ಬಾಗಿಣ ಅರ್ಪಿಸಿ ನಂತರ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಸಾಕಷ್ಟು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಸುಮಾರು 196 ಮನೆಗಳು, 400 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ಒಂದು ಸಾವಿರಕ್ಕೂ ಹೆಚ್ಚು ಅಡಿಕೆ ಮರಗಳು, ಕಾಫಿ, ಮೆಣಸು ಏಲಕ್ಕಿ ಹಾಗೂ ಇತರೆ ಬೆಳೆಗಳು ನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ ಆಯಾ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ, ಮುಖ್ಯಂತ್ರಿಗಳಿಗೆ ಸಂಪೂರ್ಣ ಮಾಹಿತಿ ನೀಡುವ ಮೂಲಕ ಸೂಕ್ತ ಪರಿಹಾರ ಒದಗಿಸಲು ಪ್ರಯತ್ನಿಸುತ್ತೇನೆ ಎಂದರು.

Air India Air Craft Crash | ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾದ ಏರ್​ ಇಂಡಿಯಾ ವಿಮಾನ; ಪೈಲೆಟ್ ಸೇರಿ ಇಬ್ಬರು ಪ್ರಯಾಣಿಕರ ಸಾವು

ತಾಲ್ಲೂಕಿನಲ್ಲಿ ಅತಿವೃಷ್ಠಿಯಿಂದಾಗಿ ಒಬ್ಬ ವ್ಯಕ್ತಿ ಆಕಸ್ಮಿಕ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಧನ ನೀಡುವ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ ಜಿಲ್ಲೆಯ ಕೊಬ್ಬರಿ ಬೆಳೆಗಾರರಿಗೆ ಬೆಂಬಲ ಬೆಲೆಯ ಮೂಲಕ ಪ್ರತಿ ಕ್ವಿಂಟಾಲಿಗೆ ಹೆಚ್ಚುವರಿಯಾಗಿ ಒಂದು ಸಾವಿರ ರೂಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ ಅವರು ಮಾತನಾಡಿ ತಾಲ್ಲೂಕಿನಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದೆ, ಮರಗಳು ಬಿದ್ದುಹೋಗಿವೆ. ಅಲ್ಲದೆ ವಿದ್ಯುತ್ ಕಂಬಗಳು ಬಿದ್ದುಹೋಗಿದ್ದು, ಅವುಗಳ ತೆರವು ಹಾಗೂ ಮರು ಅಳವಡಿಕೆಗೆ ಮಾನವ ಸಂಪನ್ಮೂಲದ ಅಗತ್ಯವಿದೆ. ಹಾಗಾಗಿ ಆದಷ್ಟು ಬೇಗ ಮಾನವ ಸಂಪನ್ಮೂಲ ಒದಗಿಸಬೇಕು ಎಂದು ಸಚಿವರಲ್ಲಿ ಒತ್ತಾಯ ಮಾಡಿದರು.

ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುಮಾರು 25 ಕೋಟಿ ರೂ ನಷ್ಟವಾಗಿದೆ, ಅಲ್ಲದೆ ಕಟ್ಟಾಯ ಹೋಬಳಿ ಹಾಗೂ ಆಲೂರು ತಾಲ್ಲೂಕಿನಲ್ಲಿ ಸುಮಾರು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಹಾಳಾಗಿದ್ದು, ಸರ್ಕಾರ ಆದಷ್ಟು ಬೇಗ ಪರಿಹಾರ ಧನವನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕರಾದ ಹೆಚ್.ಎಂ. ವಿಶ್ವನಾಥ್ ಅವರು ಮಾತನಾಡಿ ಪಶ್ಚಿಮ ಘಟ್ಟಗಳಲ್ಲಿ ಅತಿವೃಷ್ಠಿ ಹಾಗೂ ಆನೆಗಳಿಂದ ಪ್ರತಿ ವರ್ಷವೂ ಸಾಕಷ್ಟು ಹಾನಿಯಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಫಿ, ಮೆಣಸು ಹಾಗೂ ಏಲಕ್ಕಿ ಬೆಳೆಯುವುದರಿಂದ, ಇದು ಕೇಂದ್ರ ಸರ್ಕಾರಕ್ಕೂ ಅನ್ವಯಿಸುತ್ತದೆ. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಈ ಸಮಸ್ಯೆಗೆ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
Published by:Latha CG
First published: