ಮಲಪ್ರಭಾ ತೀರದಲ್ಲಿ ಹೈ ಅಲರ್ಟ್​; ಬದಾಮಿಯ ನೆರೆಪೀಡಿತ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ

ಮಲಪ್ರಭಾ ನದಿ ಪ್ರವಾಹ ಹೆಚ್ಚಾದ ಹಿನ್ನೆಲೆ ಬದಾಮಿ ತಾಲೂಕಿನ ಚೊಳಚಗುಡ್ಡ ಜಲಾವೃತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬದಾಮಿ ಶಾಸಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬದಾಮಿಗೆ ಆಗಮಿಸಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ.

news18-kannada
Updated:October 22, 2019, 10:12 AM IST
ಮಲಪ್ರಭಾ ತೀರದಲ್ಲಿ ಹೈ ಅಲರ್ಟ್​; ಬದಾಮಿಯ ನೆರೆಪೀಡಿತ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ
ಮಲಪ್ರಭಾ ನದಿ ತೀರದಲ್ಲಿ ಪ್ರವಾಹ ಭೀತಿ
  • Share this:
ಬೆಳಗಾವಿ (ಅ. 22): 3 ತಿಂಗಳ ಹಿಂದೆ ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದ ಕೃಷ್ಣಾ ನದಿಯ ತಟದ ಊರುಗಳಲ್ಲಿ ಪ್ರವಾಹ ಉಂಟಾಗಿತ್ತು. ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಭಾಗದಲ್ಲಿ ಜನರು ಜಮೀನು, ಮನೆ ಕಳೆದುಕೊಂಡಿದ್ದರು. ಪ್ರವಾಹ ಪೀಡಿತರಿಗೆ ಸರ್ಕಾರದಿಂದ ಸರಿಯಾದ ಸಮಯದಲ್ಲಿ ಪರಿಹಾರ ಸಿಗದೆ ಜನರು ಪರದಾಡಿದ್ದರು. ಇನ್ನೇನು ಪರಿಸ್ಥಿತಿ ಸುಧಾರಿಸುತ್ತಿದೆ ಎನ್ನುವಷ್ಟರಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ರಾಜ್ಯದಲ್ಲಿ ಇನ್ನೂ 3ರಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ 15 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮಲಪ್ರಭಾ ನದಿಯಲ್ಲಿ ಹೆಚ್ಚಾದ ಪ್ರವಾಹದಿಂದ ಬಾದಾಮಿಯ 40 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಶಿವಯೋಗ ಮಂದಿರ ಬಳಿ ಸೇತುವೆ ಮುಳುಗಡೆಯಾಗಿದ್ದು, 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇದರಿಂದಾಗಿ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಚೊಳಚಗುಡ್ಡ ಸೇತುವೆ ಜಲಾವೃತವಾಗಿ ಸಂಚಾರ ಬಂದ್ ಆಗಿದೆ. ಗದಗ-ಬಾಗಲಕೋಟೆ ಸಂಪರ್ಕಿಸೋ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ಇದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ; ಆತಂಕದಲ್ಲಿ ಉತ್ತರ ಕರ್ನಾಟಕದ ಜನರು

ಮಲಪ್ರಭಾ ನದಿಯಿಂದ ಏಕಾಏಕಿ ನೀರು ಬಿಡುಗಡೆ ಮಾಡಿರುವುದರಿಂದ ಸವದತ್ತಿ, ರಾಮದುರ್ಗ ತಾಲೂಕಿನಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ನೀರು ಬಿಟ್ಟ ಮೇಲೆ ಊರು ಖಾಲಿ ಮಾಡಿ ಅಂತಾರೆ. ರಾತ್ರಿ ವೇಳೆ ನಾವು ಮನೆ ಖಾಲಿ ಮಾಡೋದು ಹೇಗೆ? ಎಂದು ಹಿರೇ ಹಂಪಿಹೋಳಿ, ಚಿಕ್ಕ ಹಂಪಿಹೋಳಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರವಾಹ ಹೊಡೆತಕ್ಕೆ ಸಿಕ್ಕಿ ಇನ್ನೂ ಚೇತರಿಸಿಕೊಳ್ಳುತ್ತಿದ್ದೇವೆ. ಮತ್ತೆ ಪರಿಹಾರ ಕೇಂದ್ರ ಸೇರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಲಪ್ರಭಾ ಡ್ಯಾಂ ಅಧಿಕಾರಿ, ಜಿಲ್ಲಾಡಳಿತ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

LIVE: ಇನ್ನೂ 4 ದಿನ ರಾಜ್ಯಾದ್ಯಂತ ಭಾರೀ ಮಳೆ; ಧಾರವಾಡದಲ್ಲಿ ವರುಣನ ಅಬ್ಬರಕ್ಕೆ ವೃದ್ಧೆ ಬಲಿ

ಮಲಪ್ರಭಾ ನದಿ ಪ್ರವಾಹ ಹೆಚ್ಚಾದ ಹಿನ್ನೆಲೆ ಬದಾಮಿ ತಾಲೂಕಿನ ಚೊಳಚಗುಡ್ಡ ಜಲಾವೃತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬದಾಮಿ ಶಾಸಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬದಾಮಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಬದಾಮಿ ಸಂಪರ್ಕ ರಸ್ತೆ ಜಲಾವೃತವಾಗಿದೆ. ಗೋವನಕೊಪ್ಪ, ಕೊಣ್ಣೂರ, ಸೇತುವೆ ಜಲಾವೃತವಾಗಿದ್ದು, ಬದಾಮಿಗೆ ಬರಲು ರಸ್ತೆ ಸಂಪರ್ಕ ಕಡಿತ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರಯಾಣದ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನಿಂದ ವಿಮಾನ ಮೂಲಕ ಹುಬ್ಬಳ್ಳಿಗೆ ಬಂದು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಬೆಳಗಾವಿಯಿಂದ ಬದಾಮಿ ಕ್ಷೇತ್ರಕ್ಕೆ ತೆರಳಿ ಪ್ರವಾಹ ಪೀಡಿತ ಕರ್ಲಕೊಪ್ಪ, ಹಾಗನೂರು, ಚೊಳಚಗುಡ್ಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮಲಪ್ರಭೆ, ಬೆಣ್ಣೆಹಳ್ಳ ಪ್ರವಾಹದಿಂದ ಗದಗ ಜಿಲ್ಲೆ ರೋಣ ತಾಲೂಕಿನಲ್ಲಿರುವ ಶಾಲೆಗೆ ಜ್ಞಾನಸಿಂಧು ಅಂಧ ಮಕ್ಕಳ ಶಾಲೆಗೆ ನೀರು ನುಗ್ಗಿದೆ. 87 ಅಂಧ ಮಕ್ಕಳಿಗೆ ಆಶ್ರಯವಾಗಿರುವ ಶಾಲೆಯಿಂದ ದೀಪಾವಳಿಗಾಗಿ ಮಕ್ಕಳು ಊರುಗಳಿಗೆ ತೆರಳಿದ್ದರು. ಮೊದಲ ಬಾರಿಗೆ ಪ್ರವಾಹ ಬಂದ ವೇಳೆ ಸ್ಥಳಾಂತರ ಮಾಡಲಾಗಿತ್ತು. ಇದೀಗ 3ನೇ ಬಾರಿಗೆ ಜ್ಞಾನಸಿಂಧು ಶಾಲೆ ಪ್ರವಾಹಕ್ಕೆ ತುತ್ತಾಗಿದೆ. ಮಲಪ್ರಭಾ ನದಿಯ ಪ್ರವಾಹದಿಂದ ಜಕನೂರು, ಬೂದಿಹಾಳ ಗ್ರಾಮಗಳು ಮುಳುಗಡೆಯಾಗಿವೆ. ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನನ ಜನರ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.ಗೋಕಾಕ್ ತಾಲೂಕಿನಾದ್ಯಂತ ಭಾರೀ ಮಳೆ ಹಿನ್ನೆಲೆ ಬೆಳಗಾವಿ-ಗೋಕಾಕ್ ಮಧ್ಯೆ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ಗೋಕಾಕ್ ಪಾಲ್ಸ್ ಸಮೀಪ ಕುಸಿಯುತ್ತಿರುವ ಗುಡ್ಡದಿಂದ ರಸ್ತೆ ಮೇಲೆ ಬಂದು ಬೀಳುತ್ತಿರುವ ಕಲ್ಲು -ಮಣ್ಣುಗಳಿಂದ ಸ್ಥಳೀಯ ಜನರಲ್ಲಿ ಆತಂಕ ಮನೆಮಾಡಿದೆ. ರಸ್ತೆಯ ಒಂದು ಭಾಗದಲ್ಲಿಯೇ ಜನರು ಆತಂಕದಿಂದ ಸಂಚಾರ ಮಾಡುವಂತಾಗಿದೆ.

(ವರದಿ: ಚಂದ್ರಕಾಂತ್ ಸುಗಂಧಿ)

First published:October 22, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ