ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ; ಆತಂಕದಲ್ಲಿ ಉತ್ತರ ಕರ್ನಾಟಕದ ಜನರು

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೃಷ್ಣಾ ನದಿ ನೀರಿನ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೂಧಗಂಗಾ, ವೇದಗಂಗಾ ನದಿ ನೀರಿನಲ್ಲೂ ಏರಿಕೆಯಾಗಿದೆ. 1 ಲಕ್ಷ 55 ಸಾವಿರ ಕ್ಯೂಸೆಕ್ ಕೃಷ್ಣಾ ನದಿ ಒಳಹರಿವು ಉಂಟಾಗಿದೆ. ಹಿಪ್ಪರಗಿ ಬ್ಯಾರೇಜ್​ನಿಂದ 1.55 ಲಕ್ಷ ಕ್ಯೂಸೆಕ್ ಬಿಡುಗಡೆಯಾಗಿದೆ.

Sushma Chakre | news18-kannada
Updated:October 22, 2019, 9:51 AM IST
ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ; ಆತಂಕದಲ್ಲಿ ಉತ್ತರ ಕರ್ನಾಟಕದ ಜನರು
ಸಾಂದರ್ಭಿಕ ಚಿತ್ರ
  • Share this:
ಬೆಳಗಾವಿ (ಅ. 22): ಈ ವರ್ಷ ಮಳೆಗಾಲದಲ್ಲಿ ಉಂಟಾದ ಭಾರೀ ಪ್ರವಾಹದ ಹೊಡೆತದಿಂದ ಸುಧಾರಿಸಿಕೊಳ್ಳುವಷ್ಟರಲ್ಲಿ ಉತ್ತರ ಕರ್ನಾಟಕದ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಮತ್ತೆ ಭಾರೀ ಮಳೆಯಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಬೆಳಗಾವಿ, ವಿಜಯಪುರ, ಚಿಕ್ಕೋಡಿಯ ಜನರಲ್ಲಿ ಮತ್ತೆ ಆತಂಕ ಮನೆಮಾಡಿದೆ. 

ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2,31,120 ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಕೊಳ್ಳೂರು ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಸೇತುವೆ ರಾಯಚೂರು- ಯಾದಗಿರಿಗೆ ಸಂಪರ್ಕ ಕಲ್ಪಿಸುತ್ತದೆ. ಕೇವಲ ಮುಳುಗಡೆಗೆ 2 ಅಡಿ ಮಾತ್ರ ಬಾಕಿಯಿದೆ. ಇದರಿಂದ ನದಿ ತೀರದ ರೈತರಲ್ಲಿ ಆತಂಕ ಎದುರಾಗಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕೃಷ್ಣಾ ನದಿ ನೀರಿನ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೂಧಗಂಗಾ, ವೇದಗಂಗಾ ನದಿ ನೀರಿನಲ್ಲೂ ಏರಿಕೆಯಾಗಿದೆ. 1 ಲಕ್ಷ 55 ಸಾವಿರ ಕ್ಯೂಸೆಕ್ ಕೃಷ್ಣಾ ನದಿ ಒಳಹರಿವು ಉಂಟಾಗಿದೆ. ಹಿಪ್ಪರಗಿ ಬ್ಯಾರೇಜ್​ನಿಂದ 1.55 ಲಕ್ಷ ಕ್ಯೂಸೆಕ್ ಬಿಡುಗಡೆಯಾಗಿದೆ. ರಾಯಭಾಗ, ಚಿಕ್ಕೋಡಿಯ 7 ಸೇತುವೆ ಜಲಾವೃತವಾಗಿವೆ. ಕುಡಚಿ-ಉಗಾರ, ಕಲ್ಲೋಳ-ಯಡೂರ ಸೇತುವೆ ಜಲಾವೃತವಾಗಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಗಳಾದ ಕಾರದಗಾ-ಬೋಜ, ಭೋಜವಾಡಿ-ಕುನ್ನೂರ, ಜತ್ರಾಟ-ಭೀವಸಿ, ಮಲಿಕವಾಡ-ದತ್ತವಾಡ, ಸಿದ್ನಾಳ-ಅಕ್ಕೋಳ ಸೇತುವೆ ಸಂಪೂರ್ಣ ಜಲಾವೃತವಾಗಿವೆ. 14 ಗ್ರಾಮಗಳ ಸಂಪರ್ಕ ಸೇತುವೆಗಳು ಜಲಾವೃತವಾಗಿದ್ದು, ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ನದಿ ತೀರದಲ್ಲಿ ಬೆಳಗಾವಿ ಜಿಲ್ಲಾಡಳಿತದಿಂದ ಕಟ್ಟೆಚ್ಚರ ವಹಿಸಲಾಗಿದೆ.

Karnataka Rains LIVE: ಮಂಡ್ಯದಲ್ಲಿ ಭಾರೀ ಮಳೆ; ಮನೆ ಕುಸಿದು ಓರ್ವ ಸಾವು

ಕೊಚ್ಚಿಹೋದ ಯುವಕನ ಪತ್ತೆಗೆ ಕಾರ್ಯಾಚರಣೆ:

ನಾರಾಯಣಪುರದ ಬಸವಸಾಗರ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಗಿದೆ. ನದಿಗೆ 2.31 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದ್ದು, ಶೀಲಹಳ್ಳಿ, ಹೂವಿನ ಹೆಡಗಿ ಸೇತುವೆ ಮುಳುಗಡೆಯಾಗಿದೆ. ದೇವದುರ್ಗಾ-ಶಹಪುರ ನಡುವಿನ ಹೂವಿನ ಹೆಡಗಿಯಲ್ಲಿ ಕೊಚ್ಚಿಕೊಂಡು ಹೋದ ಯುವಕನಿಗಾಗಿ ಶೋಧ ನಡೆಸಲಾಗುತ್ತಿದೆ. ನದಿಯಲ್ಲಿ ಕೊಚ್ಚಿಕೊಂಡು ಹೋದ ಸಂತೋಷ್ ಅವರನ್ನು ಹುಡುಕುವ ಕಾರ್ಯಾಚರಣೆ ನಿನ್ನೆ ರಾತ್ರಿ ಕತ್ತಲೆಯಾದ ಹಿನ್ನೆಲೆಯಲ್ಲಿ ಸ್ಥಗಿತವಾಗಿತ್ತು. ಇಂದು ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ನಿನ್ನೆ ದನ ಮೇಯಿಸಲು ಹೋಗಿದ್ದ ಚಿಂಚೋಡಿಯ ಯುವಕ ನಾಪತ್ತೆಯಾಗಿದ್ದ. ನಿನ್ನೆ ಜಾಲಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.

Bangalore Rains: ಭಾರೀ ಮಳೆಗೆ ಬೆಂಗಳೂರು ತತ್ತರ; ಸಿಲಿಕಾನ್​ ಸಿಟಿಯಲ್ಲಿ ಯೆಲ್ಲೋ ಅಲರ್ಟ್​ ಘೋಷಣೆರಾಯಚೂರಿನ ದೇವದುರ್ಗ ತಾಲೂಕಿನಲ್ಲಿ 18 ಜನ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅವರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. 3 ಬೋಟ್ ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ನದಿಯಲ್ಲಿ ನೀರಿನ ರಭಸ ಹೆಚ್ಚಿರುವ ಕಾರಣ ಕಾರ್ಯಾಚರಣೆ ಕಷ್ಟವಾಗುತ್ತಿದೆ. ನಡುಗಡ್ಡೆಯಲ್ಲಿ ಇನ್ನಷ್ಟು ಕುರಿ ಕಾಯುವವರು ಸಿಲುಕಿರುವ ಅನುಮಾನ ವ್ಯಕ್ತವಾಗಿದೆ. ಸುಮಾರು 6ರಿಂದ 7 ಜನ ಕುರಿಗಾಹಿಗಳು ಹಾಗೂ 400 ಕುರಿಗಳು ನಡುಗಡ್ಡೆಯಲ್ಲಿ ಸಿಲುಕಿರುವ ಅನುಮಾನ ವ್ಯಕ್ತವಾಗಿದೆ. ಅವರನ್ನು ಜಿಲ್ಲಾಡಳಿತ ರಕ್ಷಣೆ ಮಾಡಲು ಮುಂದಾಗಿದೆ. ದೇವದುರ್ಗ ತಾಲ್ಲೂಕಿನ ಚಿಂಚೋಡಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಸಿಲುಕಿರುವ ಕುರಿಗಾಹಿಗಳನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಮಳೆಯಿಂದಾಗಿ 2 ದೇವಸ್ಥಾನ, ಸೇತುವೆ ಜಲಾವೃತವಾಗಿವೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ದೇವಸ್ಥಾನ ಮುಳುಗಡೆಯಾಗಿದೆ. ಕೃಷ್ಣಾ ನದಿ ಪಕ್ಕದ ದತ್ತ ದೇವಸ್ಥಾನ ಮುಳುಗಡೆಯಾಗಿದ್ದು, ಬಂಗಾಲಿ ಬಾಬಾ ದರ್ಗಾ ಸುತ್ತ ನೀರು ತುಂಬಿದೆ. ಕೃಷ್ಣಾ ನದಿಗೆ ಒಟ್ಟು 1 ಲಕ್ಷ 55 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವಿನ ಪ್ರಮಾಣ ಉಂಟಾಗಿದೆ. ಹಿಪ್ಪರಗಿ ಬ್ಯಾರೇಜ್ನಿಂದ 1 ಲಕ್ಷ 55 ಸಾವಿರ ಕ್ಯೂಸೆಕ್ಸ್ ನೀರು ಹೊರಕ್ಕೆ ಬಿಡಲಾಗಿದೆ. ರಾಯಭಾಗ ಹಾಗೂ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಜಲಾವೃತವಾಗಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುಡಚಿ-ಉಗಾರ ಸೇತುವೆ ಮುಳುಗಡೆಯಾಗಿದೆ. ಜಮಖಂಡಿ ಮೀರಜ ನಡುವಿನ ಅಂತರರಾಜ್ಯ ಮೇಲಿರುವ ಕುಡಚಿ ಸೇತುವೆ ಮುಳುಗಿದೆ.

 

(ವರದಿ: ಚಂದ್ರಕಾಂತ್ ಸುಗಂಧಿ)

First published:October 22, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ