ಸಕಾಲದಲ್ಲಿ ಮನೆ ನಿರ್ಮಾಣ ಮಾಡಿಕೊಟ್ಟ  ಮುಖ್ಯಮಂತ್ರಿಗಳಿಗೆ  ಧನ್ಯವಾದ ಸಮರ್ಪಿಸಿದ ‌ನೆರೆ ಸಂತ್ರಸ್ತೆ

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಹೊಗಿ ಬೀದಿ ಪಾಲಾಗಿದ್ದೆವು. ಇಂತಹ ಸಂಕಷ್ಟ ಸಂದರ್ಭದಲ್ಲಿ ಸರ್ಕಾರ ನಮ್ಮ ಕೈ ಹಿಡಿದಿದೆ. ಸಕಾಲದಲ್ಲಿ ಅಧಿಕಾರಿಗಳು ಸ್ಪಂದಿಸಿ ಸರ್ವೇ ನಡೆಸಿ ಮನೆ ನಿರ್ಮಾಣಕ್ಕೆ ಐದು ಲಕ್ಷ ರೂ. ಪರಿಹಾರ ಹಣ ದೊರಕಿಸಿಕೊಟ್ಟಿದ್ದಾರೆ. ಇದರಿಂದ ಸಕಾಲದಲ್ಲಿ ಮನೆ ನಿರ್ಮಾಣಮಾಡಿಕೊಳ್ಳಲು ಸಾಧ್ಯವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಾದ ನಿಮಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮ

ಕಾರ್ಯಕ್ರಮ

  • Share this:
ಹಾವೇರಿ(ಜು.27): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆ ಹಾವೇರಿಯಲ್ಲಿ ಮೊದಲ ವರ್ಷದ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ನವ ತಂತ್ರಜ್ಞಾನ ವರ್ಚುವಲ್ ಪ್ಲಾಟ್‌ಫಾರ್ಮ ಮೂಲಕ ನೇರ ಪ್ರಸಾರ ವೀಕ್ಷಣೆ ಹಾಗೂ ಸಾಧನೆಯ ಪುಸ್ತಕ ಬಿಡುಗಡೆ ಸಮಾರಂಭ ಹಾವೇರಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿತು.

ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಭಾಗವಹಿಸಿದ್ದರು. ಒಂದು ವರ್ಷ ಸಾಧನೆ ಕುರಿತ ಕಿರುಹೊತ್ತಿಗೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ವಾರ್ತಾ ಜನಪದ ಹಾಗೂ ಮಾರ್ಚ್ ಆಫ್ ಕರ್ನಾಟಕ ಸಂಚಿಕೆಗಳನ್ನು ಬಿಡುಗಡೆಗೊಳಿಸಿದರು. ಬೆಂಗಳೂರು ಬ್ಯಾಂಕ್ವೆಟ್ ಹಾಲ್‌ನಿಂದ ನೇರ ಪ್ರಸಾರವಾದ ಕಾರ್ಯಕ್ರಮ ವೀಕ್ಷಣೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಎಲ್.ಇ.ಡಿ. ಸ್ಕ್ರೀನ್ ಅಳವಡಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕ ಬಿಡುಗಡೆಗೊಳಿಸಿದ ನಂತರದ ಮುಖ್ಯಮಂತ್ರಿಗಳು ರಾಜ್ಯದ ಆಯ್ದ ಜಿಲ್ಲೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ  ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಿಂದ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ಸಾಲಗೇರಿ ಓಣಿಯ ನೆರೆ ಪರಿಹಾರ ವಸತಿ ಫಲಾನುಭವಿ ಜ್ಯೋತಿ ಕನ್ನಜ್ಜ ಅಜ್ಜೇರ ಅವರು ಮಾತನಾಡಿದರು.

ಕೊರೋನಾ ಗೆದ್ದು ಬಂದ ತುಂಬು ಗರ್ಭಿಣಿ ಸಿಎಂ ಯಡಿಯೂರಪ್ಪನವರ ಎದುರು ಹೇಳಿದ್ದೇನು ಗೊತ್ತಾ?

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಹೊಗಿ ಬೀದಿ ಪಾಲಾಗಿದ್ದೆವು. ಇಂತಹ ಸಂಕಷ್ಟ ಸಂದರ್ಭದಲ್ಲಿ ಸರ್ಕಾರ ನಮ್ಮ ಕೈ ಹಿಡಿದಿದೆ. ಸಕಾಲದಲ್ಲಿ ಅಧಿಕಾರಿಗಳು ಸ್ಪಂದಿಸಿ ಸರ್ವೇ ನಡೆಸಿ ಮನೆ ನಿರ್ಮಾಣಕ್ಕೆ ಐದು ಲಕ್ಷ ರೂ. ಪರಿಹಾರ ಹಣ ದೊರಕಿಸಿಕೊಟ್ಟಿದ್ದಾರೆ. ಇದರಿಂದ ಸಕಾಲದಲ್ಲಿ ಮನೆ ನಿರ್ಮಾಣಮಾಡಿಕೊಳ್ಳಲು ಸಾಧ್ಯವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಾದ ನಿಮಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಹೇಳಿದರು.

ಇದಕ್ಕೆ ತೃಪ್ತಭಾವದಿಂದ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಮನೆ ನಿರ್ಮಾಣ ಪೂರ್ಣಗೊಂಡಿದೆಯೇ ಎಂದು ಕೇಳಿ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.
Published by:Latha CG
First published: