ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಮೋಸ, ವಂಚನೆ ತಡೆಗೆ ಸಮನ್ವಯ ಸಮಿತಿ ರಚನೆ  ; ಗೃಹ ಸಚಿವ ಬಸವರಾಜ ಬೊಮ್ಮಾಯಿ 

ಬ್ಯಾಂಕಿಂಗ್ ಕ್ಷೇತ್ರದಲ್ಲಿ‌ ಅಪರಾಧ ಹೆಚ್ಚುತ್ತಿದೆ. ಕ್ರೆಡಿಟ್, ಡೆಬಿಟ್ ಕಾರ್ಡ್ ಗಳನ್ನು ನಕಲಿ ಮಾಡಿ ಜನರ ಖಾತೆಗಳಲ್ಲಿನ ಹಣ ಲಪಟಾಯಿಸುವುದು ಸೇರಿ ಸಾಕಷ್ಟ ಅಪರಾಧಗಳು ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆಯುತ್ತಿವೆ.

news18-kannada
Updated:September 10, 2020, 9:23 PM IST
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಮೋಸ, ವಂಚನೆ ತಡೆಗೆ ಸಮನ್ವಯ ಸಮಿತಿ ರಚನೆ  ; ಗೃಹ ಸಚಿವ ಬಸವರಾಜ ಬೊಮ್ಮಾಯಿ 
ಗೃಹ ಸಚಿವ ಬಸವರಾಜ​​ ಬೊಮ್ಮಾಯಿ
  • Share this:
ಬೆಂಗಳೂರು(ಸೆಪ್ಟೆಂಬರ್​. 10): ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೋಸ, ವಂಚನೆಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಬ್ಯಾಂಕ್ ಗಳ ಹಾಗೂ ಬ್ಯಾಂಕ್ ಗ್ರಾಹಕರ ಮಾಹಿತಿಗಳ ಸೋರಿಕೆ ಆಗುತ್ತಿದೆ. ಇದನ್ನ ತಡೆಯಲು ಸಮನ್ವಯ ಸಮಿತಿ ರಚನೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್ಥಿಕ ಅಪರಾಧಗಳ ಕುರಿತಾದ ವಿವಿಧ ಸಮಸ್ಯೆಗಳ ಬಗ್ಗೆ ವಿಧಾನಸೌಧದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನ ಹಿರಿಯ ಅಧಿಕಾರಿಗಳು, ಕೆಲ ಬ್ಯಾಂಕ್ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು. ಸಭೆಯ ಬಳಿಕ ಮಾತನಾಡಿದ ಅವರು, ಬ್ಯಾಂಕಿಂಗ್ ಕ್ಷೇತ್ರದವರು, ಐ.ಟಿ ತಜ್ಞರು, ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಮನ್ವಯ ಸಮಿತಿಯಲ್ಲಿರುತ್ತಾರೆ. ಸಿಐಡಿ ಹಿರಿಯ ಅಧಿಕಾರಿಯೊಬ್ಬರು ನೋಡಲ್ ಅಧಿಕಾರಿಯಾಗಿರುತ್ತಾರೆ. ಸಾಮಾನ್ಯ ಜನರ ಅಕೌಂಟ್ ಹಣ ಸುರಕ್ಷಿತವಾಗಿರಬೇಕು. ಹಾಗಾಗಿ, ಸೈಬರ್ ಕ್ರೈಂ ಇಂತಹ ಅಪರಾಧಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. 

ಬ್ಯಾಂಕಿಂಗ್ ಕ್ಷೇತ್ರದಲ್ಲಿ‌ ಅಪರಾಧ ಹೆಚ್ಚುತ್ತಿದೆ. ಕ್ರೆಡಿಟ್, ಡೆಬಿಟ್ ಕಾರ್ಡ್ ಗಳನ್ನು ನಕಲಿ ಮಾಡಿ ಜನರ ಖಾತೆಗಳಲ್ಲಿನ ಹಣ ಲಪಟಾಯಿಸುವುದು ಸೇರಿ ಸಾಕಷ್ಟ ಅಪರಾಧಗಳು ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆಯುತ್ತಿವೆ. ಇದಕ್ಕೆ ಬ್ರೇಕ್ ಹಾಕುವ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪರಾಧ ತಡೆಗೆ ಶೀಘ್ರ ಕ್ರಮ ಕೈಗೊಳ್ಳುವುದು ಎಂದರು.

ಹಣಕಾಸು ಇಲಾಖೆ, ಸಿಐಡಿ, ಕಾನೂನು ತಜ್ಞರು, ಆರ್ ಬಿಐ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಸೇರಿ ಚರ್ಚೆ ಮಾಡಿದ್ದೇನೆ. ಐಟಿ ತಜ್ಞರ ಜೊತೆಯೂ ಚರ್ಚೆ ಮಾಡುತ್ತೇನೆ. ಅವರೂ ಕೂಡ ಸಹಕಾರ ನೀಡಲಿದ್ದಾರೆ. ಸೈಬರ್ ಕ್ರೈಂ ತಡೆಗೆ ಕ್ರಮ ಕೈಗೊಳ್ಳುತ್ತಿದ್ದು, ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಬ್ಯಾಂಕ್ ಗಳು ಅಳವಡಿಸಿಕೊಳ್ಳಬೇಕು. ಇಂತಹ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುವ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ಗೃಹ ಸಚಿವರು ಹೇಳಿದರು.

ಬ್ಯಾಂಕ್ ಗಳ ಡಿಜಿಟಲೀಕರಣ ಆದ ಬಳಿಕ ಸಾಮಾನ್ಯ ಜನರಿಗೆ ವಂಚನೆ, ಮೋಸ, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಹೀಗೆ ಹಲವು ರೀತಿಯಲ್ಲಿ ವಂಚನೆಯಾಗುತ್ತಿದೆ. ಸರ್ಕಾರದ ಅಕೌಂಟ್ ನಿಂದಲೂ ಮೋಸದಿಂದ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ತರ ಹಲವು ವಂಚನೆಗಳು ನಡೆಯುತ್ತಿವೆ. ಹೀಗಾಗಿ, ಎಲ್ಲಾ ಬ್ಯಾಂಕರ್ಸ್, ಬ್ಯಾಂಕ್ ಗಳ ಪ್ರತಿನಿಧಿಗಳಿಗೆ ಕೆಲವು ಸೂಚನೆ ನೀಡಲಾಗಿದೆ. ಬ್ಯಾಂಕ್ ನಿಂದ ಬ್ಯಾಂಕ್ ಗೆ, ಬ್ಯಾಂಕ್ ನಿಂದ ಗ್ರಾಹಕನಿಗೆ ಮಾಹಿತಿ ವಿನಿಮಯ ಆಗಬೇಕಿದೆ ಎಂದರು.

ಇದನ್ನೂ ಓದಿ : No Objection Certificate : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಬೇರೊಂದು ಹುದ್ದೆಗೆ ಅರ್ಜಿ ಸಲ್ಲಿಸಲು ಎನ್​​ಒಸಿ ಬೇಕಿಲ್ಲ

ತಂತ್ರಜ್ಞಾನದ ದುರುಪಯೋಗ ಆಗುತ್ತಿದೆ. ಎಪಿಎಂಸಿ ಅಕೌಂಟ್ ನಲ್ಲಿಯೇ 47 ಕೋಟಿ ರೂ. ಮೋಸ ಆಗಿತ್ತು. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಇಂತಹ ಮೋಸ, ವಂಚನೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.

ಮೋಸ ತಡೆಯಲು ಸಿಂಗಲ್ ವಿಂಡೋ ಸಿಸ್ಟಂ : ಡಿಜಿಟಲ್ ಬ್ಯಾಂಕಿಂಗ್ ಮೋಸ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಕಲಿ ಕಸ್ಟಮರ್ ಕೇರ್ ಕರೆ ತಡೆಗಟ್ಟಲು ' ಸಿಂಗಲ್ ವಿಂಡೋ ' ಸಿಸ್ಟಂ ತಂದರೆ ಮೋಸ ತಡೆಯಬಹುದು ಎಂದು ಹೇಳಿದರು.

ಅಕೌಂಟಿನಿಂದ ದುಡ್ಡು ಕಳೆದುಕೊಂಡವರು, ಮೋಸಕ್ಕೊಳಗಾದವರು ಒಂದು ವಾಟ್ಸಾಪ್ ಮೆಸೇಜ್ ಮಾಡುವ ಮೂಲಕ ದೂರು ದಾಖಲಿಸಬಹುದು. ಇದಕ್ಕಾಗಿ ಸದ್ಯದಲ್ಲೇ ಒಂದು  ವಾಟ್ಸಾಪ್ ನಂಬರ್ ಕೊಡುತ್ತೇವೆ. ಇದಕ್ಕಾಗಿ ಸಮಿತಿ ರಚನೆ ಮಾಡಲಾಗುತ್ತಿದ್ದು, ಸಮಿತಿ ಸಲಹೆಗಳ ಮೇಲೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
Published by: G Hareeshkumar
First published: September 10, 2020, 9:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading