ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Retired IPS officer Bhaskar Rao) ಇಂದು ಬಿಜೆಪಿ (BJP) ಪಕ್ಷ ಸೇರ್ಪಡೆಯಾದರು. ಸೇವೆಯಿಂದ ನಿವೃತ್ತಿ ಪಡೆದ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (CM Arvind Kejriwal) ನೇತೃತ್ವದಲ್ಲಿ ಆಪ್ ((Aam Aadmi Party-AAP) ಸೇರಿದ್ದರು. ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (BJP State President Nalin Kumar Kateel) ಸಮ್ಮುಖದಲ್ಲಿ ಕಮಲ ಬಾವುಟ ಹಿಡಿದರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡರು. ಇನ್ನು ಭಾಸ್ಕರ್ ರಾವ್ ಜೊತೆ ಅವರ ಬೆಂಬಲಿಗರು ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಭಾಸ್ಕರ್ ರಾವ್, ಸನಾತನ ಧರ್ಮಕ್ಕೆ ಸೇರಿದ ಪಕ್ಷಕ್ಕೆ ಸೇರ್ಪಡೆಯಾಗಿರೋದು ಬಹಳ ಸಂತೋಷವನ್ನು ತಂದಿದೆ. ಸನಾತನ ಧರ್ಮ, ರಾಷ್ಟ್ರೀಯತೆ ಮೇಲೆ ನನಗೆ ಪ್ರೀತಿ ಇತ್ತು. ಕರ್ನಾಟಕದಲ್ಲಿ ಆಮ್ ಆದ್ಮಿ ಪಾರ್ಟಿ ಬೆಳೆಯುತ್ತಿಲ್ಲ. ಅದಕ್ಕೆ ನನ್ನ ವಯಸ್ಸನ್ನು ವೇಸ್ಟ್ ಮಾಡದೇ ಬಿಜೆಪಿ ಸೇರಬೇಕೆಂದು ಪಕ್ಷ ಸೇರಿದ್ದೇನೆ ಎಂದರು.
ಇದು ಬಿಜೆಪಿಯಿಂದ ಮಾತ್ರ ಸಾಧ್ಯ
ಎಲ್ಲೆಲ್ಲಿ ನನ್ನ ಅವಶ್ಯಕತೆ ಇದೆ, ಅಲ್ಲಿ ನಾನು ತೊಡಗಿಸಿಕೊಂಡು ಕೆಲಸ ಮಾಡುತ್ತೇನೆ. ಭಾರತ ಸಮೃದ್ಧವಾಗಿ ಗಟ್ಟಿಯಾಗಬೇಕು ಅಂದರೆ ಇದು ಬಿಜೆಪಿಯಿಂದ ಮಾತ್ರ ಸಾಧ್ಯ. ಬೇರೆ ಯಾವ ಪಕ್ಷಗಳಿಂದಲೂ ಸಾಧ್ಯ ಇಲ್ಲ ಎಂದು ಬಿಜೆಪಿಯನ್ನು ಹಾಡಿ ಹೊಗಳಿದರು.
ಹಿರಿಯರ ಮಾರ್ಗದರ್ಶನದಲ್ಲಿ ಹೋಗುತ್ತೇನೆ
ಇಲ್ಲಿ ಸಿಗುವ ಅವಕಾಶ ನೋಡಿ ಪಕ್ಷ ಖುಷಿ ಆಗುತ್ತದೆ. ರಾಜ್ಯದ ನಾಯಕರ ಮಾರ್ಗದರ್ಶನದಲ್ಲಿ ಏನೇ ಕೆಲಸ ಕೊಟ್ರು ಮಾಡಿಕೊಂಡು ಹೋಗ್ತೀನಿ. ಇಲ್ಲಿ ಅತ್ಯಂತ ಅನುಭವಿ ರಾಜಕಾರಣಿಗಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷದಲ್ಲಿ ಕೆಲಸ ಮಾಡಿಕೊಂಡು ಹೋಗ್ತೀನಿ ಎಂದು ತಿಳಿಸಿದರು.
ಸ್ವಾಗತಿಸಿದ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ನಿವೃತ್ತಿ ನಂತರ ಆಪ್ ಸೇರಿ ರಾಜಕೀಯ ಅನುಭವ ಪಡೆದಿದ್ದಾರೆ. ಡಬಲ್ ಇಂಜಿನ್ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಸಾಧ್ಯ ಎಂದು ಪಕ್ಷಕ್ಕೆ ಬಂದಿದ್ದಾರೆ ಎಂದರು.
ಭಾಸ್ಕರ್ ರಾವ್ಗೆ ಶುಭ ಹಾರೈಸಿದ ಕಟೀಲ್
ಇವತ್ತು ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಬೇರೆ ಬೇರೆ ನಾಯಕರು ಇನ್ನೂ ಬಿಜೆಪಿ ಸೇರಲು ರೆಡಿ ಆಗಿದ್ದಾರೆ. ಅವರ ಆಡಳಿತಾತ್ಮಕ ಅನುಭವಗಳನ್ನು ಪಾರ್ಟಿ ಸ್ವೀಕಾರ ಮಾಡುತ್ತದೆ. ಅವರು ಯಾವುದೇ ಆಸೆ ಆಕಾಂಕ್ಷೆಗಳನ್ನು ಇಟ್ಟಿಲ್ಲ. ಅವರಿಗೆ ಪಕ್ಷದಲ್ಲಿ ಒಳ್ಳೆಯದಾಗಲಿ ಎಂದು ನಳಿನ್ ಕುಮಾರ್ ಕಟೀಲ್ ಹಾರೈಸಿದರು.
ಇದನ್ನೂ ಓದಿ: Siddaramaiah: ಯಾರ್ ರೀ ಇವರು! ಕುಡಿಸಿ ಕರೆದುಕೊಂಡು ಬಂದು ಕೂಗಾಡಿಸೋದಾ? ಪ್ರಜಾಧ್ವನಿ ಯಾತ್ರೆ ವೇಳೆ ಸಿದ್ದರಾಮಯ್ಯ ಗರಂ
ಮಂಗಳವಾರ ಬಿಜೆಪಿ ನಾಯಕರ ಭೇಟಿ
ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭಾಸ್ಕರ್ ರಾವ್ ಭೇಟಿ ನೀಡಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಈ ವೇಳೆ ಚರ್ಚೆ ಮಾಡಿದ್ದರು.
ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಳಿಕ ಕಂದಾಯ ಸಚಿವ ಆರ್ ಅಶೋಕ್ ಜೊತೆಗೂ ಭಾಸ್ಕರ್ ರಾವ್ ಪದ್ಮನಾಭನಗರದಲ್ಲಿ ಮಾತುಕತೆ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ