ಕರ್ನಾಟಕ ಕಟ್ಟುವಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಪಾತ್ರ ಹಿರಿದು: ಬಸವರಾಜ ಬೊಮ್ಮಾಯಿ

ದೇವರಾಜ ಅರಸು ಅವರು ಜಾರಿಗೆ ತಂದ ಕ್ರಾಂತಿಕಾರಿ ಭೂ ಸುಧಾರಣೆ ಕಾಯ್ದೆ, ನಮ್ಮೆಲ್ಲರಿಗೂ ಅತ್ಯಂತ ಸ್ಫೂರ್ತಿದಾಯಕ. ಕರ್ನಾಟಕದಲ್ಲಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಘೋಷಣೆಯನ್ನು ಅಕ್ಷರಶಃ ಪಾಲಿಸಿದವರು ದೇವರಾಜ ಅರಸು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

 • Share this:
  ಬೆಂಗಳೂರು (ಆಗಸ್ಟ್ 20): ಕರ್ನಾಟಕದ ನಾಮಕರಣದಿಂದ ಹಿಡಿದು ಕರ್ನಾಟಕ ಕಟ್ಟುವವರೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ವಾಘಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 106 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿರುವ ಬಸವರಾಜ ಬೊಮ್ಮಾಯಿ, "ಕನ್ನಡ ನಾಡು ಕಂಡಂಥ ಧೀಮಂತ ನಾಯಕರು, ಜನಪರ, ಹಿಂದುಳಿದ ಮತ್ತು ರೈತಪರ ಮುಖ್ಯಮಂತ್ರಿ ದೇವರಾಜ ಅರಸು" ಎಂದು ಅಭಿಪ್ರಾಯಪಟ್ಟಿದ್ದಾರೆ.

  ಸಮಾರಂಭದಲ್ಲಿ ಮಾಜಿ ಸಿಎಂ ದಿ. ದೇವರಾಜ ಅರಸು ಅವರ ನಾಯಕತ್ವದ ಗುಣಗಳ ಬಗ್ಗೆ ಕೊಂಡಾಡಿರುವ ದೇವರಾಜ ಅರಸು, "ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನವಿದು. ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ. ಹಿಂದುಳಿದ ವರ್ಗಗಳ ಏಳಿಗೆಗಾಗಿ, ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಕೆಲಸ ಮಾಡಬೇಕು. ವಿಶೇಷವಾಗಿ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕೆನ್ನುವ ಸಂಕಲ್ಪವನ್ನು ಮಾಡುವ ದಿನ ಇದು ಎಂದು ಭಾವಿಸಿದ್ದೇನೆ" ಎಂದರು.

  "ದೇವರಾಜ ಅರಸು ಅವರು ಜಾರಿಗೆ ತಂದ ಕ್ರಾಂತಿಕಾರಿ ಭೂ ಸುಧಾರಣೆ ಕಾಯ್ದೆ, ನಮ್ಮೆಲ್ಲರಿಗೂ ಅತ್ಯಂತ ಸ್ಫೂರ್ತಿದಾಯಕ. ಕರ್ನಾಟಕದಲ್ಲಿ 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎನ್ನುವ ಘೋಷಣೆಯನ್ನು ಅಕ್ಷರಶಃ ಪಾಲಿಸಿದವರು ದೇವರಾಜ ಅರಸು. ಹಲವಾರು ನಾಯಕರನ್ನು ಬೆಳೆಸಿದ್ದಾರೆ.

  ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸಿದ್ದಾರೆ. ಅವರ ಹೆಜ್ಜೆ ಗುರುತುಗಳು ಕರ್ನಾಟಕದ ಭೂಮಿಯಲ್ಲಿ ಶಾಶ್ವತವಾಗಿದೆ. ಅವರ ಹೆಸರಿನಲ್ಲಿ ಇಂದಿಗೂ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಅವರ ವಿಚಾರಧಾರೆಗಳು ಪಕ್ಷಾತೀತವಾಗಿ, ಸರ್ವ ಸಮ್ಮತವಾಗಿ ಒಪ್ಪುವಂಥ ನಾಯಕರು" ಎಂದು ನುಡಿದರು.

  ಇದನ್ನೂ ಓದಿ: Afghanistan Crisis: ಹುಡುಕಿದ ಪತ್ರಕರ್ತ ಸಿಕ್ಕಿಲ್ಲವೆಂದು ಆತನ ಸಂಬಂಧಿಗಳನ್ನು ಕೊಂದ ತಾಲಿಬಾನಿಗಳು!

  ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಮೊದಲಾದವರು ಉಪಸ್ಥಿತರಿದ್ದರು.

  70 ರ ದಶಕದಲ್ಲಿ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ದೇವರಾಜ ಅರಸು ಇವರನ್ನು ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಹರಿಕಾರ ಎಂದು ಕರೆಯಲಾಗುತ್ತದೆ. ಇಂದಿನ ಎಲೆಕ್ಟ್ರಾನಿಕ್ ಸಿಟಿ ಕಟ್ಟಲು ಇವರೇ ಕಾರಣೀಭೂತರು. ಮೈಸೂರು ರಾಜ್ಯ 1973 ನವೆಂಬರ್ 1 ರಂದು ಕರ್ನಾಟಕ ಎಂದು ಮರುನಾಮಕರಣ ಗೊಂಡ ಅವಧಿಯಲ್ಲಿ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು. ಅಧಿಕ ಅವಧಿ ಮುಖ್ಯಮಂತ್ರಿಯಾಗಿದ್ದ ದಾಖಲೆಯೂ ಅವರ ಹೆಸರಿನಲ್ಲಿದೆ.

  ಇದನ್ನೂ ಓದಿ: ಪಿಚ್ ರೋಲರ್ ಕದ್ದ ಆರೋಪ: ಕೆರಳಿ ಕೆಂಡವಾದ ಟೀಮ್ ಇಂಡಿಯಾ ಕ್ರಿಕೆಟಿಗ ಪರ್ವೆಜ್ ರಸೂಲ್

  ಇವರು ಅದಿಕಾರಾವಧಿಯಲ್ಲಿ ಹಿಂದುಳಿದ ವರ್ಗದ ಆಯೋಗವನ್ನು L G ಹಾವನೂರು ಅವರ ನೇತೃತ್ವದಲ್ಲಿ ಸ್ಥಾಪಿಸಿದರು. ಇವರು ಭೂ ಸುಧಾರಣೆ ಮತ್ತು ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದರು. ಇವರ ಜನ್ಮ ಶತಮಾನೋತ್ಸವವನ್ನು 2015 ಅಕ್ಟೋಬರ್ 20 ರಿಂದ ಒಂದು ವರ್ಷದ ಕಾಲ ಕರ್ನಾಟಕ ಸರ್ಕಾರವು ಆಚರಿಸಿತ್ತು. ಇವರು ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ್ ಕಲ್ಲಹಳ್ಳಿ ಗ್ರಾಮದವರಾಗಿದ್ದು, ಜನ್ಮ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಇವರು ಜನಿಸಿದ ಗ್ರಾಮವನ್ನು ದತ್ತು ಗ್ರಾಮವಾಗಿ ಸ್ವೀಕರಿಸಿತ್ತು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: