ಎಷ್ಟು ಮಂದಿ ಬೇಕು?: ಉದ್ಯೋಗ ಭರ್ತಿಗೆ ಯೋಗ್ಯ ಅಭ್ಯರ್ಥಿಗಳಿಲ್ಲವೆಂದ ಡಿಸಿಎಂಗೆ ಕುಮಾರಸ್ವಾಮಿ ತಿರುಗೇಟು

ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ  ಸಿಗುತ್ತಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ. ಪಕೋಡ ತಯಾರಿಸಲು ಕೂಡ ಈರುಳ್ಳಿ ಕೊಳ್ಳಲೂ ಆರ್ಥಿಕವಾಗಿ ನಿಶಕ್ತರಾಗಿರುವ ನಿರುದ್ಯೋಗಿಗಳ ಕಣ್ಣಲ್ಲೇಕೆ ನೀರು ತರಿಸುವಿರಿ?  ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ

G Hareeshkumar | news18-kannada
Updated:January 11, 2020, 6:20 PM IST
ಎಷ್ಟು ಮಂದಿ ಬೇಕು?: ಉದ್ಯೋಗ ಭರ್ತಿಗೆ ಯೋಗ್ಯ ಅಭ್ಯರ್ಥಿಗಳಿಲ್ಲವೆಂದ ಡಿಸಿಎಂಗೆ ಕುಮಾರಸ್ವಾಮಿ ತಿರುಗೇಟು
ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ
  • Share this:
ಬೆಂಗಳೂರು(ಜ. 11) : ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ಇಲ್ಲ. ವಾಸ್ತವದಲ್ಲಿ ಉದ್ಯೋಗ ಭರ್ತಿ ಮಾಡಲು ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್​​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ​ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ  ಸಿಗುತ್ತಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ. ಪಕೋಡ ತಯಾರಿಸಲು ಕೂಡ ಈರುಳ್ಳಿ ಕೊಳ್ಳಲೂ ಆರ್ಥಿಕವಾಗಿ ನಿಶಕ್ತರಾಗಿರುವ ನಿರುದ್ಯೋಗಿಗಳ ಕಣ್ಣಲ್ಲೇಕೆ ನೀರು ತರಿಸುವಿರಿ?  ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ರಾಜ್ಯ ಸೇರಿದಂತೆ ದೇಶದಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹೊಸ ಉದ್ಯೋಗ ಸೃಷ್ಟಿ ಒತ್ತಟ್ಟಿಗಿರಲಿ. ಇರುವ ಉದ್ಯೋಗ ಕಳೆದುಕೊಂಡು  ಉದ್ಯೋಗಸ್ಥರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗಾಕಾಂಕ್ಷಿಗಳು ಕಂಗಾಲಾಗಿದ್ದಾರೆ ಎಂದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ಇಂತಹ ಹಸಿ ಸುಳ್ಳುಗಳನ್ನು ಯಾರನ್ನು ಮೆಚ್ಚಿಸಲು ಹೇಳುತ್ತೀರಿ? ನಾಚಿಕೆ ಆಗಬೇಕು ನಿಮಗೆ. ಯೋಗ್ಯ ಉದ್ಯೋಗಾಕಾಂಕ್ಷಿಗಳನ್ನು ನಿಮ್ಮ ಮನೆಗೆ ಕಳುಹಿಸಲೇ? ಕಚೇರಿಗೆ ಕಳುಹಿಸಲೇ? ಕೆಲಸ ಕೊಡಿಸುತ್ತೀರಾ? ಎಂದು ಡಿಸಿಎಂ ಅಶ್ವಥ್ ನಾರಾಯಣ್  ಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆಇದೇ ರೀತಿಯಲ್ಲಿ ಮಂಗಳೂರು ಗಲಭೆಯ ಸತ್ಯಾಸತ್ಯತೆ ಕುರಿತ ಸಿಡಿ ಬಿಡುಗಡೆಯ ಬಗ್ಗೆ ಬಿಜೆಪಿಯ ನಾಯಕರು ನೀಡಿರುವ ಪ್ರತಿಕ್ರಿಯೆಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಇನನ್ನೂ ಓದಿ :  ಕಾಂಗ್ರೆಸ್ ಮನೆ ಕೊಟ್ಟರೆ, ಬಿಜೆಪಿ ಅದನ್ನು ಕಿತ್ತುಕೊಳ್ಳೋ ಕೆಲಸ ಮಾಡ್ತಿದೆ ; ಈಶ್ವರ್ ಖಂಡ್ರೆ ಕಿಡಿ

ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ ಎಂದು ಸಿಎಂ ಹೇಳುತ್ತಾರೆ. ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಬಿಜೆಪಿ ನಾಯಕರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ಅವರು ರುಜುವಾತುಪಡಿಸಿದ್ಧಾರೆ," ಎಂದು ಎಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
First published:January 11, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ