ಬಿಜೆಪಿಯಲ್ಲಿ ಸದಾನಂದ ಗೌಡರು ತಿರಸ್ಕೃತಗೊಂಡ ಗೊಬ್ಬರ ಇದ್ದಂತೆ; ಸಿದ್ದರಾಮಯ್ಯ ತಿರುಗೇಟು

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕ್ರತಗೊಂಡ ಗೌಡರು ಈಗ ಪಕ್ಷದಲ್ಲಿ ಗೊಬ್ಬರವಾಗಿ ಹೋಗಿದ್ದಾರೆ

G Hareeshkumar | news18-kannada
Updated:November 22, 2019, 3:04 PM IST
ಬಿಜೆಪಿಯಲ್ಲಿ ಸದಾನಂದ ಗೌಡರು ತಿರಸ್ಕೃತಗೊಂಡ ಗೊಬ್ಬರ ಇದ್ದಂತೆ; ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ, ಹಾಗೂ ಡಿ ವಿ ಸದಾನಂದ ಗೌಡ
  • Share this:
ಬೆಂಗಳೂರು(ನ.22) : ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿ ಬೀಳುತ್ತಿರುವುದು ನೋಡಿದ್ರೆ ನನ್ನನ್ನು ಅತಿ ಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​​ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಅವರು ಏಕಾಂಗಿಯಾಗಿದ್ದಾರೆ ಎಂಬ ಸದಾನಂದ ಗೌಡರ ಹೇಳಿಕೆಗೆ ಟ್ವಿಟ್ಟರ್​ನಲ್ಲಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ,  ಸಚಿವ ವಿ. ಸೋಮಣ್ಣ ಸೇರಿದಂತೆ ಇತರ ನಾಯಕರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ದರಾಮಯ್ಯ ಏಕಾಂಗಿ ಎಂದು ಟೀಕಿಸಿದ್ದರು.
ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕ್ರತಗೊಂಡ ಗೌಡರು ಈಗ ಪಕ್ಷದಲ್ಲಿ  ಗೊಬ್ಬರವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಿದ್ದರಾಮಯ್ಯ ಟ್ವೀಟ್​​ ಮೂಲಕ ಸದಾನಂದ ಗೌಡರಿಗೆ ತಿರುಗೇಟು ನೀಡಿದ್ದಾರೆ.

ಏಕಾಂಗಿಯಾಗಿ ಹೋಗಿರುವ ಸದಾನಂದ ಗೌಡ ಅವರನ್ನು ರಾಜ್ಯ ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮತ್ತೆ ಸಿಡಿದ ಸದಾನಂದ:

ಸಿದ್ದರಾಮಯ್ಯ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಸದಾನಂದ ಗೌಡ, ನಾವು ತಿನ್ನುವ ಅನ್ನ ಗೊಬ್ಬರದಿಂದಲೇ ಬೆಳೆಯಲ್ಪಡುತ್ತದೆ. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ, ಎಂದು ಹೀಯಾಳಿಸಿದ್ದಾರೆ.

ಇದಕ್ಕೂ ಮುನ್ನ, ಸದಾನಂದ ಗೌಡ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್​ನ ಹಿರಿಯ ನಾಯಕರಾರೂ ಸಿದ್ದರಾಮಯ್ಯನವರ ಜತೆ ಇಲ್ಲ. ಮಾಜಿ ಡಿಸಿಎಂ ಪರಮೇಶ್ವರ್​​, ಮಾಜಿ ಸಚಿವ ಡಿ ಕೆ ಶಿವಕುಮಾರ್​ ಎಲ್ಲರದ್ದೂ ಒಂದೊಂದು ಹಾದಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಂತೂ ಕಾಣಿಸುತ್ತಿಲ್ಲ. ರಾಜ್ಯದಲ್ಲಿ ಅವರೇ ಅಧಿಕಾರದಲ್ಲಿದ್ದಾಗ ಬಿಜೆಪಿ 25 ಸ್ಥಾನ ಗೆದ್ದಿದೆ. ವಾಮ ಮಾರ್ಗದಿಂದ ಚುನಾವಣೆ ಎದುರಿಸುವಂಥಾ ಗತಿ ಬಿಜೆಪಿಗೆ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ :  ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ - ಕಾಂಗ್ರೆಸ್ ದಯನೀಯ ಸ್ಥಿತಿಗೆ ತಲುಪಿದ್ರೂ ಬುದ್ಧಿ ಬಂದಿಲ್ಲ; ಡಿ.ವಿ.ಸದಾನಂದಗೌಡ
First published: November 22, 2019, 2:14 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading