ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಮುಂದುವರಿದ ಕಸರತ್ತು: ಸೋನಿಯಾ ಬೆನ್ನಲ್ಲೇ ಸಿದ್ದರಾಮಯ್ಯ ರಾಹುಲ್​ ಜತೆ ಚರ್ಚೆ

ಹೌದು, ಸುಮಾರು ಬೆಳಿಗ್ಗೆ 10 ಗಂಟೆಗೆ ಸಿದ್ದರಾಮಯ್ಯ ರಾಹುಲ್​​ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ತನ್ನ ಆಪ್ತ ಎಂ.ಬಿ. ಪಾಟೀಲ್​​ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕೊಡಿಸಲು ಕಸರತ್ತು ಮಾಡುತ್ತಿದ್ದಾರೆ. ರಾಹುಲ್​​ ಭೇಟಿಯಾದ ಬಳಿಕ ಮತ್ತೊಮ್ಮೆ ಸೋನಿಯಾ ಗಾಂಧಿ ಭೇಟಿಗೂ ಪ್ರಯತ್ನ ಮಾಡಲಿದ್ದಾರೆನ್ನಲಾಗಿದೆ.

news18-kannada
Updated:January 15, 2020, 9:05 AM IST
ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಮುಂದುವರಿದ ಕಸರತ್ತು: ಸೋನಿಯಾ ಬೆನ್ನಲ್ಲೇ ಸಿದ್ದರಾಮಯ್ಯ ರಾಹುಲ್​ ಜತೆ ಚರ್ಚೆ
ಹೌದು, ಸುಮಾರು ಬೆಳಿಗ್ಗೆ 10 ಗಂಟೆಗೆ ಸಿದ್ದರಾಮಯ್ಯ ರಾಹುಲ್​​ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ತನ್ನ ಆಪ್ತ ಎಂ.ಬಿ. ಪಾಟೀಲ್​​ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕೊಡಿಸಲು ಕಸರತ್ತು ಮಾಡುತ್ತಿದ್ದಾರೆ. ರಾಹುಲ್​​ ಭೇಟಿಯಾದ ಬಳಿಕ ಮತ್ತೊಮ್ಮೆ ಸೋನಿಯಾ ಗಾಂಧಿ ಭೇಟಿಗೂ ಪ್ರಯತ್ನ ಮಾಡಲಿದ್ದಾರೆನ್ನಲಾಗಿದೆ.
  • Share this:
ನವದೆಹಲಿ(ಜ.15): ದಿನೇಶ್​​ ಗುಂಡೂರಾವ್​​ ರಾಜೀನಾಮೆಯಿಂದ ತೆರವಾಗಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಅಥವಾ ಎಂ.ಬಿ ಪಾಟೀಲರ ಪೈಕಿ ಯಾರನ್ನಾದರೂ ಒಬ್ಬರನ್ನು ಇನ್ನೆರಡು ದಿನಗಳಲ್ಲಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತನ್ನ ಆಪ್ತ ಎಂ.ಬಿ ಪಾಟೀಲ್​ಗೆ ಕೊಡಿಸಲು ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ದೆಹಲಿಯಲ್ಲೇ ಬೀಡುಬಿಟ್ಟಿದ್ಧಾರೆ. ಈ ವಿಚಾರ ಸಂಬಂಧ ಈಗಾಗಲೇ ಕಾಂಗ್ರೆಸ್​​​ ಹೈಕಮಾಂಡ್​​​​ ಸೋನಿಯಾ ಗಾಂಧಿಯವರೊಂದಿಗೆ ಮಾತುಕತೆ ನಡೆಸಿರುವ ಸಿದ್ದರಾಮಯ್ಯ ಎಂ.ಬಿ ಪಾಟೀಲ್​​ ಪರ ಬ್ಯಾಟ್​​ ಮಾಡಿದ್ದಾರೆ. ಇಂದು ಸೋನಿಯಾ ಬೆನ್ನಲ್ಲೀಗ ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಭೇಟಿ ಮಾಡಲಿದ್ದಾರೆ.

ಹೌದು, ಸುಮಾರು ಬೆಳಿಗ್ಗೆ 10 ಗಂಟೆಗೆ ಸಿದ್ದರಾಮಯ್ಯ ರಾಹುಲ್​​ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ತನ್ನ ಆಪ್ತ ಎಂ.ಬಿ. ಪಾಟೀಲ್​​ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕೊಡಿಸಲು ಕಸರತ್ತು ಮಾಡುತ್ತಿದ್ದಾರೆ. ರಾಹುಲ್​​ ಭೇಟಿಯಾದ ಬಳಿಕ ಮತ್ತೊಮ್ಮೆ ಸೋನಿಯಾ ಗಾಂಧಿ ಭೇಟಿಗೂ ಪ್ರಯತ್ನ ಮಾಡಲಿದ್ದಾರೆನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​ ಲಾಬಿ ಹೆಚ್ಚಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಇಷ್ಟೆಲ್ಲಾ ಕಸರತ್ತು ಆರಂಭಿಸಿದ್ದಾರೆ. ಕಡೆಗಳಿಗೆಯಲ್ಲೂ ಯಾವುದೇ ಕಾರಣಕ್ಕೂ ಎಂ.ಬಿ ಪಾಟೀಲ್​​ಗೆ​ ಅವಕಾಶ ತಪ್ಪಬಾರದು ಎಂದು ಸಿದ್ದರಾಮಯ್ಯ ಎಚ್ಚರವಹಿಸಿದ್ದಾರೆ. ಇದಕ್ಕಾಗಿ ಕೆ.ಸಿ. ವೇಣುಗೋಪಾಲ್ ಜತೆಯೂ ಮೊತ್ತೊಮ್ಮೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಲಿಂಗಾಯತ ಎಂಬ ಕಾರ್ಡ್ ಬಳಸುತ್ತಿರುವ ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ ಮೂಲಕ ಮಲ್ಲಿಕಾರ್ಜುನ ಖರ್ಗೆ ಮನವೊಲಿಕೆಗೂ ಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಜತೆ ದೆಹಲಿಯಲ್ಲೇ ಬಿಡಾರ ಹೂಡಿರುವ ದೇಶಪಾಂಡೆ, ಸೋನಿಯಾ ಗಾಂಧಿ ಭೇಟಿ ಮಾಡಿ ಎಂ.ಬಿ. ಪಾಟೀಲ್ ಪರ ಬ್ಯಾಟ್​​ ಮಾಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ- ಸ್ವಾಮಿ ವಚನಾನಂದ ವಾಗ್ವಾದದ ಬಗ್ಗೆ ಸ್ಪಷ್ಟನೆ ನೀಡಿದ ಮುರುಗೇಶ್ ನಿರಾಣಿ

ಈ ಹಿಂದೆಯೇ ಮಾಜಿ ಸಚಿವ ಡಿ.ಕೆ ಶಿವಕುಮಾರ್​​​​​ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಒಕ್ಕಲಿಗರ ಬದಲಿಗೆ ಲಿಂಗಾಯತರಿಗೆ ಮಣೆ ಹಾಕಲು ಕಾಂಗ್ರೆಸ್​​​ ಹೈಕಮಾಂಡ್​​ ನಿರ್ಧರಿಸಿದೆ ಎಂದು ಹೇಳಲಾಗುತ್ತಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಎಲ್ಲೆಡೆಯೂ ವರದಿಯಾಗಿತ್ತು.

ಹೌದು, ಬಿಜೆಪಿ ಬೆಂಬಲಕ್ಕೆ ನಿಂತಿರುವ ಲಿಂಗಾಯತರ ಸೆಳೆಯಲು ಕಾಂಗ್ರೆಸ್​​ ಹೈಕಮಾಂಡ್ ಈ ಮಾಸ್ಟರ್​​ ಪ್ಲಾನ್​​ ಮಾಡಿತ್ತು. ಮುಖ್ಯಮಂತ್ರಿ ಬಿ.ಎಸ್​​​​ ಯಡಿಯೂರಪ್ಪಗೆ ಲಿಂಗಾಯತ ಸಮುದಾಯದಲ್ಲಿ ಪರ್ಯಾಯ ನಾಯಕರ ಬೆಳೆಸುವ ಪ್ರಯತ್ನವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಅದರಲ್ಲೂಉತ್ತರ ಕರ್ನಾಟಕ ಭಾಗದವರಿಗೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಚಿಂತನೆ ನಡೆಸಲಾಗಿತ್ತು. ಈ ನಿರ್ಧಾರದ ಹಿಂದೆ ಸಿದ್ಧರಾಮಯ್ಯ ಬಣದ ಕೈವಾಡವಿರಬಹುದು ಎನ್ನುತ್ತಿದ್ದವು ಮೂಲಗಳು.
First published:January 15, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading