ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ; ಸಿದ್ಧರಾಮಯ್ಯ ಆರೋಪ

ಐಟಿ ಅಧಿಕಾರಿಗಳು ದಾಳಿಗಳನ್ನು ನಡೆಸುವುದು ತಪ್ಪಲ್ಲ. ಆದರೆ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡುತ್ತಿರುವುದು ಏಕೆ..? ಬಿಜೆಪಿಯಲ್ಲಿ ದುಡ್ಡು ಇರುವವರು ಇಲ್ಲವಾ? ಅವರು ವೈದ್ಯಕೀಯ ಕಾಲೇಜುಗಳನ್ನು, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿಲ್ಲವಾ? ಅವರ ಮೇಲೆಯೂ ಐಟಿ ದಾಳಿ ನಡೆಸಲಿ

G Hareeshkumar | news18-kannada
Updated:October 12, 2019, 4:16 PM IST
ಮಾಜಿ  ಡಿಸಿಎಂ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳ ಕಾರಣ ; ಸಿದ್ಧರಾಮಯ್ಯ ಆರೋಪ
ಮಾಜಿ ಸಿಎಂ ಸಿದ್ದರಾಮಯ್ಯ
  • Share this:
ಬೆಂಗಳೂರು(ಅ.12): ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಸಾವಿಗೆ ಆದಾಯ ತೆರಿಗೆ ಅಧಿಕಾರಿಗಳ ಕಿರುಕುಳ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.

ಐಟಿ ಅಧಿಕಾರಿಗಳು ದಾಳಿಗಳನ್ನು ನಡೆಸುವುದು ತಪ್ಪಲ್ಲ. ಆದರೆ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡುತ್ತಿರುವುದು ಏಕೆ..? ಬಿಜೆಪಿಯಲ್ಲಿ ದುಡ್ಡು ಇರುವವರು ಇಲ್ಲವಾ? ಅವರು ವೈದ್ಯಕೀಯ ಕಾಲೇಜುಗಳನ್ನು, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿಲ್ಲವಾ? ಅವರ ಮೇಲೆಯೂ ಐಟಿ ದಾಳಿ ನಡೆಸಲಿ. ರಾಜಕೀಯ ದ್ವೇಷದಲ್ಲಿ ಐಟಿ ದಾಳಿ ಸರಿಯಲ್ಲ ಎಂದು ಸಿದ್ಧರಾಮಯ್ಯ ಐಟಿ ವಿರುದ್ದ ಗುಡುಗಿದರು.


— Siddaramaiah (@siddaramaiah) October 12, 2019

ಇತ್ತ ರಮೇಶ್ ಆತ್ಮಹತ್ಯೆ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಆದಾಯ ತೆರಿಗೆ ಇಲಾಖೆಯ ಅಮಾನವೀಯ ಕಿರುಕುಳಕ್ಕೆ ಮತ್ತೊಂದು ಬಲಿ. ರಾಜ್ಯದ ಜನ ಬಿಜೆಪಿ ಸರ್ಕಾರವನ್ನು, ಆದಾಯ ತೆರಿಗೆ ಇಲಾಖೆಯನ್ನು ಪ್ರಶ್ನಿಸುತ್ತಿದ್ದಾರೆ ಈ ಸಾವು ನ್ಯಾಯವೇ? ರಮೇಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ : ನನಗೆ ಪ್ರಶ್ನೆ ಕೇಳಲಿ, ಇವರಿಗೇಕೆ ಟಾರ್ಚರ್; ಪಿಎ ರಮೇಶ್​​ ಸಾವಿಗೆ ಪರಮೇಶ್ವರ್​ ನೋವು

ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅವರ ಆತ್ಮಹತ್ಯೆ ಬಗ್ಗೆ ನನಗೆ ಮಾಹಿತಿ ಲಭಿಸಿದೆ. ಆತ್ಮಹತ್ಯೆಗೂ ಮುನ್ನ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. 2-3 ದಿನಗಳಿಂದ ಐಟಿ ಅಧಿಕಾರಿಗಳು ವಿಚಾರಣೆ ವೇಳೆ ನೀಡಿದ ಕಿರುಕುಳ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರದ ಕೃಪಾಪೋಷಿತ ಐಟಿ ಭಯೋತ್ಪಾದನೆಗೆ ಇನ್ನೆಷ್ಟು ಜನ ಬಲಿಯಾಗಬೇಕು ಎಂದಿದ್ದಾರೆ.

First published: October 12, 2019, 3:52 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading