ಕಾಂಗ್ರೆಸ್​​ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ; ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ; ಸಿದ್ದರಾಮಯ್ಯ

ಇನ್ನು ಮಾಧ್ಯಮಗಳ ಮುಂದೆ ದಲಿತ ಸಿಎಂ ವಿಚಾರವಾಗಿ ಮಾತಾಡಿದ ಸಿದ್ದರಾಮಯ್ಯ, ಮಲ್ಲಿಕಾರ್ಜುನ್​​ ಖರ್ಗೆಯವರು ಮುಖ್ಯಮಂತ್ರಿಯಾಗಲು ಯಾರ ವಿರೋಧವೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

news18-kannada
Updated:December 6, 2019, 4:03 PM IST
ಕಾಂಗ್ರೆಸ್​​ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ; ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ; ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ಧರಾಮಯ್ಯ
  • Share this:
ರಾಯಚೂರು(ಡಿ.06): ಕರ್ನಾಟಕ ವಿಧಾನಸಭಾ ಉಪಚುನಾವಣೆಯಲ್ಲಿ 12 ಸೀಟು ಗೆಲ್ಲಲಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ರಾಜ್ಯದ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ನಾವೇ ಗೆಲುವು ಸಾಧಿಸಲಿದ್ದೇವೆ. ಶೀಘ್ರದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್​​ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗುತ್ತದೆ. ಮತ್ತೆ ಕಾಂಗ್ರೆಸ್​ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ರಾಜ್ಯದ 15 ಕ್ಷೇತ್ರಗಳಲ್ಲೂ ಕಾಂಗ್ರೆಸ್​ ಪರ ಪ್ರಚಾರ ಮಾಡಿದ್ದೇನೆ. ಕನಿಷ್ಠ 12 ಕ್ಷೇತ್ರಗಳಲ್ಲಿ ನಾವೇ ಗೆಲ್ಲಲಿದ್ದೇವೆ ಎಂಬುದು ಗೊತ್ತಾಗಿದೆ. ಫಲಿತಾಂಶದ ಬಳಿಕ ಮರು ಹೊಂದಾಣಿಕೆ ಬಗ್ಗೆ ಮಾತಾಡಲಿದ್ದೇವೆ. ಒಮ್ಮೆ ಮಾಜಿ ಪ್ರಧಾನಿ ದೇವೇಗೌಡರು ಹೊಂದಾಣಿಕೆ ಸಾಧ್ಯವೇ ಇಲ್ಲ ಎನ್ನುತ್ತಾರೆ, ಇನ್ನೊಮ್ಮೆ ಸೋನಿಯಾ ಗಾಂಧಿಯವರೊಂದಿಗೆ ಮಾತಾಡುತ್ತೇನೆ ಎಂದು ಹೇಳುತ್ತಾರೆ. ಎಲ್ಲವೂ ಡಿಸೆಂಬರ್​​ 9ನೇ ತಾರೀಕಿನಿಂದ ಅಂತಿಮಗೊಳ್ಳಲಿದೆ ಎಂದರು ಮಾಜಿ ಸಿಎಂ ಸಿದ್ದರಾಮಯ್ಯ.

ಇನ್ನು ಮಾಧ್ಯಮಗಳ ಮುಂದೆ ದಲಿತ ಸಿಎಂ ವಿಚಾರವಾಗಿ ಮಾತಾಡಿದ ಸಿದ್ದರಾಮಯ್ಯ, ಮಲ್ಲಿಕಾರ್ಜುನ್​​ ಖರ್ಗೆಯವರು ಮುಖ್ಯಮಂತ್ರಿಯಾಗಲು ಯಾರ ವಿರೋಧವೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಾಗೆಯೇ ಹೈದರಾಬಾದ್​​ನ ಪ್ರಿಯಾಂಕಾ ರೆಡ್ಡಿ ರೇಪ್​​​ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು​​ ಅತ್ಯಾಚಾರಿಗಳನ್ನು ಎನ್​​ಕೌಂಟರ್​​ ಮೂಲಕ ಹತ್ಯೆಗೈದ ಬಗ್ಗೆಯೂ ಪ್ರತಿಕ್ರಿಯಿಸಿದರು. ಯಾವುದಾದರೂ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅಥವಾ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಎನ್​​ಕೌಂಟರ್​​ ಮಾಡಬೇಕು. ವಿನಾಕಾರಣ ಯಾರನ್ನು ಎನ್​​ಕೌಂಟರ್​​ ಕಾನೂನಲ್ಲಿ ಅವಕಾಶವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ; ಸಿವೋಟರ್​​ ಸಮೀಕ್ಷೆ ಪ್ರಕಟ; ಬಿಜೆಪಿಗೆ ಮೇಲುಗೈ, ಕಾಂಗ್ರೆಸ್​​-ಜೆಡಿಎಸ್​​ಗೆ ಭಾರೀ ಮುಖಭಂಗ

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಮುಗಿದಿದೆ. ನಿನ್ನೆ ಮತದಾನದ ವೇಳೆ ಶೇ.62.50ರಷ್ಟು ಮತದಾನ ದಾಖಲಾಗಿದ್ದು, ಇದೇ ಡಿಸೆಂಬರ್​​ 9ನೇ ತಾರೀಕಿನಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಸಿವೋಟರ್ ಚುನಾವಣೋತ್ತರ ಸಮೀಕ್ಷೆಯೂ ಪ್ರಕಟವಾಗಿದೆ. ಈ ಚುನಾವಣೋತ್ತರ ಸಮೀಕ್ಷೆ ಭವಿಷ್ಯದಂತೆ ಸಿಎಂ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಸರ್ಕಾರ ಸೇಫ್​​ ಎನ್ನಲಾಗುತ್ತಿದೆ. ಬಿಜೆಪಿಗೆ 9- 12, ಕಾಂಗ್ರೆಸ್‌ಗೆ 3-6 ಮತ್ತು ಜೆಡಿಎಸ್ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಲಿದೆ.
First published:December 6, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ