ದೂರದೃಷ್ಟಿ ಯೋಜನೆಗಳಿಂದ ಬಂಗಾರಪ್ಪ ಇಂದಿಗೂ ಚಿರಸ್ಥಾಯಿ: ಸಿಎಂ ಬಿ.ಎಸ್.ಯಡಿಯೂರಪ್ಪ

ಸೊರಬ ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್​. ಬಂಗಾರಪ್ಪನವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ.

news18-kannada
Updated:October 26, 2020, 3:20 PM IST
ದೂರದೃಷ್ಟಿ ಯೋಜನೆಗಳಿಂದ ಬಂಗಾರಪ್ಪ ಇಂದಿಗೂ ಚಿರಸ್ಥಾಯಿ: ಸಿಎಂ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
  • Share this:
ಶಿವಮೊಗ್ಗ(ಅಕ್ಟೋಬರ್​. 26): ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಎಸ್ ಬಂಗಾರಪ್ಪನವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುಧಯಕ್ಕಾಗಿ ನಿರಂತರವಾಗಿ ಶ್ರಮಿಸಿದ ಬಂಗಾರಪ್ಪ ಜನಪರ ಚಿಂತನೆಯ ನಾಯಕ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 87 ನೇ ಜನ್ಮದಿನಾಚರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಆನ್​​ಲೈನ್​​​ ಸಮಾರಂಭದ ಮೂಲಕ ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಕಾರ್ಯವೈಖರಿ ಕೊಂಡಾಡಿದರು. ಬಂಗಾರಪ್ಪನವರು ನೇರ ನಡೆ ನುಡಿವುಳ್ಳವರಾಗಿದ್ದರು, ದೂರ ದೃಷ್ಟಿವುಳ್ಳವರಾಗಿದ್ದರು ಎಂದು ಬಣ್ಣಿಸಿದರು. ಅನೇಕ ಜನಪರ  ಯೋಜನೆಗಳ ಮೂಲಕ  ಕಾರ್ಯಕ್ರಮಗಳಿಂದಾಗಿ ಬಂಗಾರಪ್ಪ ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ರಾಜ್ಯ ಕಂಡ ಅಪರೂಪದ ರಾಜಕಾರಣಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರು ರಾಜ್ಯದಲ್ಲಷ್ಟೇ ಅಲ್ಲದೇ, ದೇಶದಲ್ಲಿಯೇ ತಮ್ಮ ಛಾಪು ಮೂಡಿಸಿದ್ದರು. ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷಿ ಯೋಜನೆಯಿಂದಾಗಿ ಅವರು ಜನಮಾನಸದಲ್ಲಿ ಇಂದಿಗೂ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುಧಯಕ್ಕಾಗಿ ನಿರಂತರವಾಗಿ ಶ್ರಮಿಸಿದ ಅವರು ಜನಪರ ಚಿಂತನೆಯ ನಾಯಕ ಎಂದು ಹೇಳಿದರು.

ಮಾಜಿ ಸಿಎಂ ಎಸ್​ ಬಂಗಾರಪ್ಪನವರ ಪ್ರತಿಮೆ


ಸೊರಬ ಪಟ್ಟಣದಲ್ಲಿ ಮಾಜಿ ಸಿಎಂ ಎಸ್​ ಬಂಗಾರಪ್ಪನವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ. ಸೊರಬ ಪಟ್ಟಣದಲ್ಲಿ ಉದ್ಘಾಟಿಸಲಾಗಿರುವ ಉದ್ಯಾನವನ್ನು ಪಟ್ಟಣ ಪಂಚಾಯತ್ ಆಡಳಿತ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ : ನಾನು ಯಾವತ್ತಿದ್ರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ; ಸಿದ್ದರಾಮಯ್ಯ

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ರಾಜ್ಯದ ಎಲ್ಲಾ ಭಾಗಗಳನ್ನು ಸಮಾನವಾಗಿ ಅಭಿವೃದ್ಧಿಪಡಿಸಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಸೊರಬ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಶಾಸಕ ಕುಮಾರ ಬಂಗಾರಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್  ಉಪಸ್ಥಿತರಿದ್ದರು
Published by: G Hareeshkumar
First published: October 26, 2020, 3:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading