ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಡೋದನ್ನ ನಿಲ್ಲಿಸಬೇಕು, ಅದನ್ನು ನಾನೇ ಮಾಡ್ತೀನಿ: ಇದೇನಿದು BSY ಹೊಸ ವರಸೆ?

BS Yediyurappa want to finish Congress party: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲವೇ ಇಲ್ಲ. ಕರ್ನಾಟಕದಲ್ಲಿ ಒಂದಿಬ್ಬರಿಂದ ಕಾಂಗ್ರೆಸ್ ಉಸಿರಾಡ್ತಿದೆ. ಅದನ್ನ ನಿಲ್ಲಿಸುವ ಕೆಲಸವನ್ನ ನಾನು ಮಾಡೇ ಮಾಡ್ತೀನಿ. ಅದಕ್ಕಾಗಿ ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಂಜುಗೆ ಮತ ನೀಡಿ ಗೆಲ್ಲಿಸಿ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

  • Share this:
ಮಂಡ್ಯ: ಕಾಂಗ್ರೆಸ್ (Congress) ಉಸಿರಾಡೋದನ್ನ ನಿಲ್ಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ (B. S. Yediyurappa) ಅಬ್ಬರದ ಭಾಷಣ ಮಾಡಿದರು. ವಿಧಾನ ಪರಿಷತ್​ ಚುನಾವಣೆಗೆ (MLC Election) ದಿನಗಣನೆ ಶುರುವಾಗಿದ್ದು, ಘಟಾನುಘಟಿ ನಾಯಕರು ಭರ್ಜರಿ ಪ್ರಚಾರದಲ್ಲಿ (Election Campaign) ತೊಡಗಿದ್ದಾರೆ. ಇಂದು ಸಕ್ಕರೆ ನಾಡಲ್ಲಿ ಚುನಾವಣಾ ಪ್ರಚಾರ ನಡೆಸಿದ ಬಿಎಸ್​ವೈ, ಕರ್ನಾಟಕದಲ್ಲಿ ಕಾಂಗ್ರೆಸ್​​ ಪಕ್ಷವನ್ನು ನಿರ್ನಾಮ ಮಾಡಬೇಕೆಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಉಸಿರಾಡೋದನ್ನ ನಿಲ್ಲಿಸಬೇಕು. ಕರ್ನಾಟಕದಲ್ಲಿ ಒಬ್ಬ, ಇಬ್ಬರಿಂದ ಕಾಂಗ್ರೆಸ್ ಉಸಿರಾಡ್ತಿದೆ (ಕಾಂಗ್ರೆಸ್​ನಿಂದ ಒಬ್ಬರೇ ಸಂಸದರು ಗೆದ್ದಿರುವುದು). ಅದನ್ನ ನಿಲ್ಲಿಸುವ ಕೆಲಸವನ್ನ ನಾನು ಮಾಡೇ ಮಾಡ್ತೀನಿ. ಆ ಉಸಿರನ್ನು ನಿಲ್ಲಿಸಲು ನಾವು ಈಗಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು. ಈ ಚುನಾವಣೆಯಲ್ಲಿ ನಾವು 15 ರಿಂದ 20 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲವೇ ಇಲ್ಲ

ಬಿಜೆಪಿ ಗ್ರಾಮ ಪಂಚಾಯಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲವೇ ಇಲ್ಲ. ಕರ್ನಾಟಕದಲ್ಲಿ ಒಂದಿಬ್ಬರಿಂದ ಕಾಂಗ್ರೆಸ್ ಉಸಿರಾಡ್ತಿದೆ. ಅದನ್ನ ನಿಲ್ಲಿಸುವ ಕೆಲಸವನ್ನ ನಾನು ಮಾಡೇ ಮಾಡ್ತೀನಿ. ಅದಕ್ಕಾಗಿ ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಂಜುಗೆ ಮತ ನೀಡಿ ಗೆಲ್ಲಿಸಿ ಎಂದು ಮತಯಾಚಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ 3 ರಿಂದ 4 ಸ್ಥಾನ ಗೆಲ್ಲಬೇಕಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರಲು ಶ್ರಮಿಸುತ್ತೇನೆ. ಈಗ ಪರಿಷತ್​ನ 25 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಮಾಡಿದ್ದಾರೆ. 25ರಲ್ಲಿ ಮಂಡ್ಯ ಸೇರಿದಂತೆ 15 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ: ಜಮೀರ್ ಕಾಲು ಹಿಡಿದು ಚಾಮರಾಜಪೇಟೆಯಿಂದಲೇ ಸಿದ್ದರಾಮಯ್ಯ ಸ್ಪರ್ಧೆ ಮಾಡ್ತಾರೆ: ಕೆ.ಎಸ್.ಈಶ್ವರಪ್ಪ

ಮಂಡ್ಯದಲ್ಲಿ ಈ ಮಟ್ಟಿನ ಸ್ವಾಗತ  ಸಿಕ್ಕಿರೋದು ಅಚ್ಚರಿ ಮೂಡಿಸಿದೆ

ಮಂಡ್ಯ ಜನರ ಪ್ರೀತಿ, ಅಭಿಮಾನಕ್ಕೆ ನಾನು ಸದಾ ಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡ್ತೇನೆ. ನೀವು ಸ್ವಾಗತ ಮಾಡಿದ ರೀತಿ ನೋಡಿದಾಗ ನನಗೆ ಆಶ್ಚರ್ಯ ಆಯ್ತು. ನಾನು ಬಂದಿರೋದು ಶಿವಮೊಗ್ಗಕ್ಕಾ ಅಥವಾ ಮಂಡ್ಯಕ್ಕಾ ಅನ್ನೋ ಅನುಮಾನ ಮೂಡಿತು. ನಿಮ್ಮ ಈ ಪ್ರೀತಿ, ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ. ನಾರಾಯಣ ಗೌಡರ ಸಮ್ಮುಖದಲ್ಲಿ ಈ ಚುನಾವಣೆ ಗೆಲ್ಲಿಸಿ, ನನ್ನೊಟ್ಟಿಗೆ ರಾಜ್ಯದ ಎಲ್ಲಾ ನಾಯಕರನ್ನು ಕರೆ ತರುತ್ತೇನೆ.  ಆ ಮೂಲಕ ಹುಟ್ಟೂರಲ್ಲಿ ಬಿಜೆಪಿ ಕಟ್ಟುವ ಕೆಲಸ ಮಾಡೋಣ. ಅದಕ್ಕಾಗಿ ಮಂಜು ಅವರನ್ನ ಗೆಲ್ಲಿಸಿ, ನಮಗೆ ಶಕ್ತಿ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಮಂಡ್ಯದಲ್ಲಿ ಹೊಂದಾಣಿಕೆ ಪ್ರಶ್ನೆಯೇ ಇಲ್ಲ

ಈಗಾಗಲೇ ಪ್ರತಿಯೊಬ್ಬರ ಮನೆಗೆ ಹೋಗಿ ಬಂದಿದ್ದಾರೆ. ಸ್ಥಳೀಯ ನಾಯಕರು, ಕಾರ್ಯಕರ್ತರು ಕೂಡ ಮತದಾರರ ಮನೆಗೆ ತೆರಳಿ ಮನವೊಲಿಸಿದ್ದಾರೆ. ಮೊದಲ ಸುತ್ತಿನಲ್ಲೇ ಬಿಜೆಪಿ ಅಭ್ಯರ್ಥಿ ಮಂಜು ಗೆಲ್ಲಬೇಕು. ಮಂಡ್ಯದಲ್ಲಿ ಹೊಂದಾಣಿಕೆ ಪ್ರಶ್ನೆಯೇ ಇಲ್ಲ. ಅಭ್ಯರ್ಥಿ ಇಲ್ಲದ ಕಡೆ ಜೆಡಿಎಸ್ ಬೆಂಬಲ ಕೇಳಿದ್ದೇವೆ ಅಷ್ಟೇ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ. ಮಂಡ್ಯದಲ್ಲಂತೂ ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Karnataka Politics: ಟಕ್ಕರ್ ಕೊಡುತ್ತಿದ್ದ ಜಿ.ಟಿ.ದೇವೇಗೌಡರಿಗೆ ಶಾಕ್ ನೀಡಿದ HDK

ಸಿಎಂ ಬದಲಾವಣೆ ಮಾತೇ ಇಲ್ಲ

ರಾಜ್ಯದಲ್ಲಿ ಸಿಎಂ ಬದಲಾವಣೆ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಗಣಿ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬದಲಾವಣೆ ಅನ್ನೋದು ಕೇವಲ ವದಂತಿ. ಸದ್ಯಕ್ಕೆ ಸಿಎಂ ಬದಲಾವಣೆಯ ಪ್ರಸ್ತಾವನೆ ಇಲ್ಲ. ಈಶ್ವರಪ್ಪ ಅವರು ಹೇಳಿದ್ದು ಈಗಲೇ ಆಗ್ತಾರೆ ಅಂತ ಅಲ್ಲ, ತಕ್ಷಣವೇ ಬೊಮ್ಮಾಯಿ ಅವರನ್ನು ಬದಲಾಯಿಸೋದಾಗಿ ಹೇಳಿಲ್ಲ. ಬಸವರಾಜ ಬೊಮ್ಮಾಯಿ ಬದಲಾಗಲ್ಲ, ರಾಜ್ಯದ ನಾಯಕರಿಗೆ ಕೇಂದ್ರದ ಪರವಾಗಿ ನಾನು ಹೇಳುತ್ತಿದ್ದೇನೆ. ಸಿಎಂ ಬದಲಾವಣೆಯ ಪ್ರಸ್ತಾವನೆಯೇ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಯಾರು ಹಾಗೆ ಮಾತನಾಡಬಾರದು ಎಂದು ತಾಕೀತು ಮಾಡಿದರು.
Published by:Kavya V
First published: