• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • HD Kumaraswamy: ಮಾಜಿ ಸಿಎಂ ಎಚ್‌ಡಿಕೆಗೆ ಅನಾರೋಗ್ಯ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

HD Kumaraswamy: ಮಾಜಿ ಸಿಎಂ ಎಚ್‌ಡಿಕೆಗೆ ಅನಾರೋಗ್ಯ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ

ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ

ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದು ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಾಗಿದ್ದಾರೆ. ನಿರಂತರ ಪ್ರವಾಸದಿಂದ ಕುಮಾರಸ್ವಾಮಿ ಅವರಿಗೆ ಜ್ವರ (Fever) ಕಾಣಿಸಿಕೊಂಡಿದ್ದು, ವೈದ್ಯರು (Doctor) ವಿಶ್ರಾಂತಿಗೆ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತಂತೆ ಮಾಜಿ ಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.


ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: Siddaramaiah-Lingayat: ಭ್ರಷ್ಟರು ಅಂತ ಹೇಳಿದ್ದು ಲಿಂಗಾಯತರ ಬಗ್ಗೆ ಅಲ್ಲ, ಬೊಮ್ಮಾಯಿ ಬಗ್ಗೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ


ರಾಮನಗರದಲ್ಲಿ ಎಚ್​​ಡಿಕೆ ಇಂದು ಪ್ರಚಾರ ನಡೆಸಬೇಕಿತ್ತು


ನಿಖಿಲ್​ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಲ್ಲಿ ಇಂದು ಪ್ರಚಾರ ನಡೆಸಿದ್ದು, ಮಗನ ಪರವಾಗಿ ಇಂದು ಮೊದಲ ಬಾರಿಗೆ ಎಚ್​ಡಿಕೆ ಪ್ರಚಾರ ನಡೆಸಬೇಕಿತ್ತು. ಆದರೆ ಜ್ವರದ ಕಾರಣ ಎಚ್​ಡಿಕೆ ಕಾರ್ಯಕ್ರಮ ರದ್ದುಗೊಳಿಸಿದ್ದರು.


ಸ್ವಾಭಿಮಾನದಿಂದ ಜೆಡಿಎಸ್‌ ಪರ ಮತ ಚಲಾಯಿಸುತ್ತಾರೆ


ಏಪ್ರಿಲ್ 30ಕ್ಕೆ ರಾಮನಗರದಲ್ಲಿ ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ, ರಾಮನಗರಕ್ಕಾದರೂ ಬರಲಿ, ಮಂಡ್ಯಕ್ಕೆ ಆದರೂ ಬರಲಿ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ‌. ಮೈಸೂರು ಭಾಗ ಟಾರ್ಗೆಟ್ ಮಾಡುತ್ತಾರೋ ಉತ್ತರ ಕರ್ನಾಟಕ ಟಾರ್ಗೆಟ್ ಮಾಡ್ತಾರೋ ಗೊತ್ತಿಲ್ಲ. ಈ ಬಾರಿ ಕನ್ನಡಿಗರು ಸ್ವಾಭಿಮಾನದಿಂದ ಜೆಡಿಎಸ್‌ ಪರ ಮತ ಚಲಾಯಿಸುತ್ತಾರೆ ಅನ್ನೋ ವಿಶ್ವಾಸ ಇದೆ.


top videos



    ರಾಮನಗರದಲ್ಲಿ ಜೆಡಿಎಸ್ ಸೋಲಿಸಲು ಕಾಂಗ್ರೆಸ್ ಬಿಜೆಪಿಗೆ ಇದೇನು ಹೊಸದಲ್ಲ. 2004ರಿಂದಲೂ ಹೊಂದಾಣಿಕೆ ಶಕ್ತಿಯುತವಾಗಿ ಬೆಳೆದುಕೊಂಡು ಬಂದಿದೆ. ಮಂಡ್ಯ ಲೋಕಸಭೆಯಂತೆ ಇಲ್ಲೂ ಶಕ್ತಿಮೀತಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಮನಗರದಲ್ಲಿ 29 ವರ್ಷದಿಂದ ಎಚ್​​ಡಿಕೆ, ಎಚ್​ಡಿಕೆ ಸಾಕಷ್ಟು ಅಭಿವೃದ್ಧಿ ಮಾಡುತ್ತಾ ಜನರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದಾರೆ‌ ಎಂದು ಹೇಳಿದ್ದರು.

    First published: