‘ರೈತರು, ನೆರೆ ಸಂತ್ರಸ್ತರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು‘ - ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ನೆರೆ ಸಂತ್ರಸ್ತರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದಾರ ನೆರವು ತಕ್ಷಣವೇ ನೀಡಬೇಕು. ಸಂತ್ರಸ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆತ್ಮವಿಶ್ವಾಸ ಮೂಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ

ಕುಮಾರಸ್ವಾಮಿ

 • Share this:
  ಬೆಂಗಳೂರು(ಆ.09): ಮುಂಗಾರು ಮಳೆಯಿಂದ ತತ್ತರಿಸಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಾಗ ರಾಷ್ಟ್ರೀಯ ಮತ್ತು ರಾಜ್ಯ ಪ್ರಕೃತಿ ವಿಕೋಪ ನಿಧಿಯ ಮಾರ್ಗಸೂಚಿಗಳಿಗೆ ಜೋತುಬೀಳದೆ ಸರ್ಕಾರ ರೈತರಿಗೆ ಹೆಚ್ಚಿನ ಪರಿಹಾರ ತಕ್ಷಣವೇ ನೀಡಬೇಕು ಎಂದು ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

  ಈ ಸಂಬಂಧ ಸರಣಿ ಟ್ವೀಟ್​​ ಮಾಡಿರುವ ಎಚ್​​ಡಿ ಕುಮಾರಸ್ವಾಮಿ, ಸತತ ಮೂರನೇ ವರ್ಷ ಅತಿವೃಷ್ಟಿಗೆ ಸಿಲುಕಿರುವ ರಾಜ್ಯದ ರೈತರು ಈ ಬಾರಿಯೂ ಮಳೆಯ ಅನಾಹುತ ತಡೆದುಕೊಳ್ಳುವ ಶಕ್ತಿ ಇಲ್ಲದೆ ಬಸವಳಿದಿದ್ದಾರೆ. ರಸ್ತೆ, ವಿದ್ಯುತ್ ಸಂಪರ್ಕ ಕಡಿತ ಹಾಗೂ ಮೂಲಭೂತ ಸೌಕರ್ಯಗಳ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಸಮರೋಪಾದಿಯಲ್ಲಿ ಇದನ್ನು ಸರಿಪಡಿಸಲು ತುರ್ತು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

  ಎರಡು ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿರುವ ನಾನು ಕೊರೋನಾ ಸಂಕಷ್ಟ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ರಾಜ್ಯದಾದ್ಯಂತ ಖುದ್ದು ಪರಿಶೀಲನೆ ಮಾಡುವುದು ವೈದ್ಯರ ಸಲಹೆ ಮೇರೆಗೆ ಬಲು ಕಷ್ಟ. ಆದರೆ ಅತಿವೃಷ್ಟಿಯ ನಷ್ಟದ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆದು ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು ಸೇರಿದಂತೆ ಸರ್ಕಾರಕ್ಕೆ ಮಾಹಿತಿ ಒದಗಿಸುತ್ತೇನೆ ಎಂದರು.

  ನೆರೆ ಸಂತ್ರಸ್ತರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದಾರ ನೆರವು ತಕ್ಷಣವೇ ನೀಡಬೇಕು. ಸಂತ್ರಸ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆತ್ಮವಿಶ್ವಾಸ ಮೂಡಿಸಬೇಕು ಎಂದು ಮನವಿ ಮಾಡಿದ್ದಾರೆ.

  ಸಚಿವರು ಮತ್ತು ಅಧಿಕಾರಿಗಳು ಕಾಟಾಚಾರಕ್ಕೆ ಸ್ಥಳ ಪರಿಶೀಲನೆ ಮಾಡಿದರೆ ಉಪಯೋಗವಾಗದು. ನೆರೆ ಸಂತ್ರಸ್ತರ ನೆರವಿಗೆ ಜಿಲ್ಲಾಧಿಕಾರಿಗಳಿಗೆ 5 ಕೋಟಿ ರೂಪಾಯಿ ಒದಗಿಸಿರುವುದು ಏನೇನೂ ಸಾಲದು. ಅತಿವೃಷ್ಟಿಯನ್ನು ಸರ್ಕಾರ ಸವಾಲಾಗಿ ಸ್ವೀಕರಿಸಿ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡುವುದನ್ನೇ ಮೂಲಮಂತ್ರವಾಗಿಸಿಕೊಳ್ಳಬೇಕು ಎಂದರು ಎಚ್​ಡಿಕೆ.

  ಇದನ್ನೂ ಓದಿ: Coronavirus Karnataka Updates: ಕರ್ನಾಟಕದಲ್ಲಿ ಒಂದೇ ದಿನ 5,985 ಕೇಸ್​, 107 ಮಂದಿ ಬಲಿ

  ನೆರೆಹಾವಳಿಯಿಂದ ಕಳೆದ ವರ್ಷ ನಿರ್ವಸತಿಕರಾದವರಿಗೆ 500000 ರೂಪಾಯಿ ಪರಿಹಾರ ಒದಗಿಸುವ ಹಾಗೂ ಮನೆ ಕಟ್ಟಿಸಿಕೊಡುವ ಸರ್ಕಾರದ ಭರವಸೆ ಬಹುಸಂಖ್ಯಾತರಿಗೆ ಅನುಕೂಲವಾಗಲಿಲ್ಲ. ಈ ವರ್ಷವೂ ಮಳೆಯಿಂದ ನಿರಾಶ್ರಿತರಾದವರಿಗೆ ತಕ್ಷಣವೇ ಸೂರು ಒದಗಿಸುವ (ಕಳೆದ ಬಾರಿಯ ನಿರಾಶ್ರಿತರು ಸೇರಿದಂತೆ) ಶಾಶ್ವತ ಯೋಜನೆಯನ್ನು ಸರ್ಕಾರ ಆದ್ಯತೆಯ ಮೇಲೆ ಅನುಷ್ಠಾನ ಮಾಡಬೇಕು. ಸತ್ಯವನ್ನು ಬಹಳ ಕಾಲ ಮರೆಮಾಚಲು ಸಾಧ್ಯವಿಲ್ಲ ಎಂದು ತಿಳಿಸಿದರು.
  Published by:Ganesh Nachikethu
  First published: