HOME » NEWS » State » FORMER CM HD KUMARASWAMY DEMANDS EQUAL STATUS TO KANNADA AS HINIDI GNR

’ಹಿಂದಿಯಂತೆಯೇ ಕನ್ನಡಕ್ಕೂ ಸ್ಥಾನಮಾನ ನೀಡಲೇಬೇಕು‘ - ಕೇಂದ್ರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯ

ಭಾರತ ಸರ್ಕಾರ ಈ ಕೋರಿಕೆಯನ್ನು ತಳ್ಳಿಹಾಕುವ ಮೂಲಕ ಮತ್ತೊಮ್ಮೆ ಕನ್ನಡಿಗರನ್ನು ಕೆಣಕಿದೆ. ಪರಿಣಾಮ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಕನ್ನಡಿಗರ ಬೆನ್ನಲ್ಲೀಗ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿಯವರು ಕೂಡ ಈ ವಿಚಾರವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

news18-kannada
Updated:September 17, 2020, 2:43 PM IST
’ಹಿಂದಿಯಂತೆಯೇ ಕನ್ನಡಕ್ಕೂ ಸ್ಥಾನಮಾನ ನೀಡಲೇಬೇಕು‘ - ಕೇಂದ್ರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯ
ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ
  • Share this:
ನವದೆಹಲಿ(ಸೆ.17): ಭಾರತದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಕನ್ನಡವೂ ಒಂದು. ಕನ್ನಡ ಪ್ರಮುಖ ದ್ರಾವಿಡ ಭಾಷೆಯೂ ಹೌದು..! ಕನ್ನಡ ಶಾಸ್ತ್ರೀಯ ಸ್ಥಾನಮಾನ ಪಡೆದ ಭಾಷೆ ಎಂಬ ಖ್ಯಾತಿಗೆ ಪಾತ್ರವಾಗಿದೆ. ಹೀಗಿರುವಾಗಲೇ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ಹಿಂದಿ ಹೇರಿಗೆ ಮುಂದಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರದ "ಹಿಂದಿ ದಿವಸ್‌" ಆಚರಣೆಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಕನ್ನಡಿಗರು ವಿರೋಧಿಸಿದ್ದರು. ಹಾಗೆಯೇ "ಕೇಂದ್ರ ಸರ್ಕಾರ ಹಿಂದಿಯಂತೆ ಕನ್ನಡಕ್ಕೂ ಸ್ಥಾನಮಾನ ನೀಡಬೇಕು" ಎಂದು ಆಗ್ರಹಿಸಿದ್ದರು. ಆದರೀಗ, ಭಾರತ ಸರ್ಕಾರ ಈ ಕೋರಿಕೆಯನ್ನು ತಳ್ಳಿಹಾಕುವ ಮೂಲಕ ಮತ್ತೊಮ್ಮೆ ಕನ್ನಡಿಗರನ್ನು ಕೆಣಕಿದೆ. ಪರಿಣಾಮ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಕನ್ನಡಿಗರ ಬೆನ್ನಲ್ಲೀಗ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿಯವರು ಕೂಡ ಈ ವಿಚಾರವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್​ ಮಾಡಿರುವ ಎಚ್​​ಡಿಕೆ, ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದೇ ಎಂಬ ಪ್ರಶ್ನೆಗೆ ಕೇಂದ್ರ ಇಲ್ಲವೆಂದಿದೆ. ಇದು ಭಾಷಾ ತಿರಸ್ಕಾರದ ಸಂಕೇತ. ಆದರೆ ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ. ಕನ್ನಡ ರಾಷ್ಟ್ರ ಭಾಷೆಯೇ. ಕೇಂದ್ರ ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕಷ್ಟೆ ಎಂದರು.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದಿದ್ದಾರೆ.

ಇತರ ಭಾಷೆಗಳಿಗೆ ಹಿಂದಿಯಷ್ಟು ಸ್ಥಾನಮಾನ ನೀಡಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಬಿಜೆಪಿ, ಹಿಂದಿಯೇತರ ರಾಜ್ಯಗಳ, ಹಿಂದಿಯೇತರ ಭಾಷಿಕರ ಸಂಸದರನ್ನೂ ಒಳಗೊಂಡು ಸರ್ಕಾರ ರಚಿಸಿದೆ ಎಂಬುದು ನೆನಪಿರಲಿ. ಎಲ್ಲ ಅಧಿಕೃತ ಭಾಷೆಗಳನ್ನು ಆಡಳಿತದಲ್ಲಿ ಜಾರಿಗೆ ತಂದು ಅವರೆಲ್ಲರ ಋಣ ತೀರಿಸುವುದು ಬಿಜೆಪಿಯ ಕರ್ತವ್ಯ ಎಂದು ಎಚ್​​ಡಿಕೆ ಮತ್ತೊಂದು ಟ್ವೀಟ್​​ನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹಿಂದಿಯಂತೆ ಕನ್ನಡಕ್ಕೆ ಸ್ಥಾನಮಾನ ನೀಡಲಾಗದು ಎಂದ ಕೇಂದ್ರ; ಸಾಮಾಜಿಕ ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೇಂದ್ರಕ್ಕೆ ಚಾಟಿ ಬೀಸಿದ್ದಾರೆ.
Published by: Ganesh Nachikethu
First published: September 17, 2020, 2:42 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories