ಬೆಂಗಳೂರು(ನ.05): ಕೊರೋನಾ ಬಿಕ್ಕಟ್ಟಿನ ನಡುವೆ ರಾಜ್ಯ ಸರ್ಕಾರವು ವಿದ್ಯುತ್ ದರ ಏರಿಕೆ ಮಾಡಿರುವುದು ಜನಸಾಮಾನ್ಯರ ಮೇಲೆ ಬರೆ ಹಾಕಿದಂತಾಗಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದರ ಏರಿಕೆ ನಿರ್ಧಾರವನ್ನು ಮುಂದೂಡುವಂತೆ ಆಗ್ರಹಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು. ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಸಲಹೆ ನೀಡಿದ್ದಾರೆ.
ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.
1/3
— H D Kumaraswamy (@hd_kumaraswamy) November 5, 2020
ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು.
2/3
— H D Kumaraswamy (@hd_kumaraswamy) November 5, 2020
ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ.
3/3
— H D Kumaraswamy (@hd_kumaraswamy) November 5, 2020
ನೋಯ್ಡಾ: ಅಪಾರ್ಟ್ಮೆಂಟ್ನಲ್ಲಿ ದಂಪತಿಯ ಶವ ಪತ್ತೆ; ಕೊಲೆ ಶಂಕೆ
ಈ ವರ್ಷ ಮಾರ್ಚ್ ತಿಂಗಳಿನಲ್ಲೇ ವಿದ್ಯುತ್ ದರ ಏರಿಕೆಯಾಗಬೇಕಿತ್ತು. ಆದರೆ ಮಾರಕ ಕೊರೋನಾ ದೇಶಕ್ಕೆ ಕಾಲಿಟ್ಟಿದ್ದರಿಂದ ಈ ಬಿಕ್ಕಟ್ಟಿನ ಕಾರಣದಿಂದಾಗಿ ವಿದ್ಯುತ್ ದರ ಏರಿಕೆ ಕ್ರಮವನ್ನು ಮುಂದೂಡಲಾಗಿತ್ತು. ಆದರೆ ಈಗ ಕೆಇಆರ್ಸಿ ವಿದ್ಯುತ್ ದರ ಏರಿಕೆ ಮಾಡಿದೆ. ಪ್ರತಿ ಯೂನಿಟ್ಗೆ 40 ಪೈಸೆ ಹೆಚ್ಚಳ ಮಾಡಿದ್ದು, ಜನರಿಗೆ ಬರೆ ಹಾಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ