• Home
  • »
  • News
  • »
  • state
  • »
  • ‘ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಜಾರಿಗೊಳಿಸಿ‘ - ಸರ್ಕಾರಕ್ಕೆ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಆಗ್ರಹ

‘ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಜಾರಿಗೊಳಿಸಿ‘ - ಸರ್ಕಾರಕ್ಕೆ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಆಗ್ರಹ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಪರಿಶಿಷ್ಟಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದರು ಎಚ್​​ಡಿಕೆ.

  • Share this:

    ಬೆಂಗಳೂರು(ಆ.30): ಒಳಮೀಸಲಾತಿ "ಸರ್ವರಿಗೂ ಸಮಪಾಲು ಸಮಬಾಳು" ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಆಗ್ರಹಿಸಿದರು.


    ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ, ತುಳಿತಕ್ಕೊಳಗಾದ ಎಲ್ಲಾ ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟುನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯವಾಗುತ್ತದೆ ಎಂದಉ ಮತ್ತೊಂದು ಟ್ವೀಟ್​ ಮಾಡಿದ್ಧಾರೆ.


    ಮೇಲ್ಜಾತಿಯಲ್ಲಿನ ಬಡವರಿಗೆ ಶೇ. ೧೦ ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿನ ಅವಕಾಶವಂಚಿತರಿಗೆ ಒಳಮೀಸಲಾತಿ ಜಾರಿಗೆ ತರಬಾರದೇಕೆ? ಎಂದು ಎಚ್​​ಡಿಕೆ ಪ್ರಶ್ನಿಸಿದ್ಧಾರೆ.


    ಸ್ವತಃ ಹಿಂದುಳಿದವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು-ಸಮಪಾಲು ಎಂಬ ತತ್ವವನ್ನು ಎತ್ತಿಹಿಡಿಯಬೇಕಾಗಿದೆ. ಶೋಷಿತ ವರ್ಗದಲ್ಲೂ ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟು ಕೊಳ್ಳದ ಪರಿಸ್ಥಿತಿ ಈಗಲೂ ಇದೆ ಎಂದು ಎಚ್​ಡಿಕೆ ವಿವರಿಸಿದರು.


    ಪರಿಶಿಷ್ಟಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದರು.


    ಇದನ್ನೂ ಓದಿ: ತೀವ್ರಗೊಂಡ ಲಂಪಿ ಚರ್ಮ ಕಾಯಿಲೆ - ಜನ ಆಯ್ತು ಈಗ ದನಗಳಿಗೆ ಕ್ವಾರಂಟೈನ್​​


    ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ, ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ,
    ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ, ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದೆಡೆ ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ ಎಂದು ಕಡೆ ಟ್ವೀಟ್​ ಮಾಡಿ ಒಳಮೀಸಲಾತಿ ಜಾರಿ ಮಾಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

    Published by:Ganesh Nachikethu
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು