ಜನರ ಬದುಕನ್ನೇ ಕಸಿಯುತ್ತಿರುವ ಸಮಯದಲ್ಲಿ ಆಡಳಿತ-ವಿಪಕ್ಷಗಳ ಕೆಸರೆರಚಾಟ ಬೇಸರ ತರಿಸಿದೆ; ಎಚ್.ಡಿ.ಕುಮಾರಸ್ವಾಮಿ

ಇಂತಹ ಸಂಕಷ್ಟ ಸಮಯದಲ್ಲಿ ಎರಡು ಪಕ್ಷಗಳು ಪರಸ್ಪರ ಕೆಸರೆರಚಾಟ ನಿಲ್ಲಿಸಬೇಕು. ಈ ಸಮಯದಲ್ಲಿ ಜನರ ಜೀವ, ಜೀವನವೇ ಮುಖ್ಯವಾಗಬೇಕು. ಪ್ರಸ್ತುತ ಎದುರಾಗಿರುವ ಕೋವಿಡ್ ಸಂಕಷ್ಟವನ್ನು ಪರಿಹರಿಸುವತ್ತ ಎಲ್ಲರೂ ಗಮನಹರಿಸಬೇಕು ಎಂದು ಎರಡು ಪಕ್ಷಗಳಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ

ಮಾಜಿ ಸಿಎಂ ಕುಮಾರಸ್ವಾಮಿ

 • Share this:
  ಬೆಂಗಳೂರು; ಕೋವಿಡ್ 19 ನಿಯಂತ್ರಣ ಸಂಬಂಧ ವೈದ್ಯಕೀಯ ಪರಿಕರ ಖರೀದಿಯಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿ ಅವ್ಯವಹಾರ ನಡೆಸಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪ ಮಾಡಿದ್ದರು. ಈ ಆರೋಪಕ್ಕೆ ರಾಜ್ಯ ಸರ್ಕಾರದ ಸಚಿವರುಗಳು ನಾವು ಯಾವುದೇ ಅವ್ಯವಹಾರ ಎಸಗಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆರೋಪ-ಪ್ರತ್ಯಾರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎರಡು ಪಕ್ಷಗಳಿಗೂ ಕಿವಿಹಿಂಡಿದ್ದಾರೆ.

  ಕೋವಿಡ್-19 ಪರಿಕರಗಳ ಖರೀದಿ ಅಕ್ರಮದ ಬಗೆಗಿನ ಅತ್ಯಂತ ಹಳೇ ರಾಷ್ಟ್ರೀಯ ಪಕ್ಷವೊಂದರ ಆರೋಪ, ಅದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಪ್ರತ್ಯಾರೋಪ, ಕಸರೆರಚಾಟವನ್ನು ಗಮನಿಸಿದೆ. ಕೋವಿಡ್‌ ಈ ರಾಜ್ಯದ ಪ್ರತಿಯೊಬ್ಬನ ಜೀವ, ಜೀವನಕ್ಕೆ ಬೆದರಿಕೆಯೊಡ್ಡಿರುವಾಗ, ಬದುಕನ್ನೇ ಕಸಿಯುತ್ತಿರುವಾಗ ಎರಡೂ ಪಕ್ಷಗಳ ಬೇಜವಾಬ್ದಾರಿ ವರ್ತನೆ ಕಂಡು ಬೇಸರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಪರಿಕರಗಳ ಖರೀದಿಯಲ್ಲಿ ಸರ್ಕಾರ ಅಕ್ರಮ ಎಸಗಿದ್ದರೆ ಅದು ನಿಜಕ್ಕೂ ಹೀನ ಕೃತ್ಯವೇ ಸರಿ. ಇಲ್ಲವೇ ಕೇವಲ ಸುದ್ದಿಯಲ್ಲಿ ಇರುವ ಸಲುವಾಗಿ ಕಾಂಗ್ರೆಸ್ ಈ ಆರೋಪ ಮಾಡಿದ್ದರೆ ಅದು ಆ ಪಕ್ಷದ ನಾಯಕರ ರಾಜಕೀಯ ದಾಹದ ಸೂಚಕ ಎಂದು ಎರಡು ಪಕ್ಷಗಳ ನಾಯಕರಿಗೆ ಸೂಚ್ಯವಾಗಿ ಕಾಲೆಳೆದಿದ್ದಾರೆ.  ಇದನ್ನು ಓದಿ: ಐತಿಹಾಸಿಕ ಪ್ರಮಾದ ಮಾಡಿದ್ದೀರಿ,‌ ನಾವು ಯಾವ ತನಿಖೆಗೂ ಸಿದ್ಧ; ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದ ಸಚಿವರು

  ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಕೆಸರೆರಚಾಟ ನಿಲ್ಲಿಸಬೇಕು. ನಮ್ಮ ಆದ್ಯತೆ ಜನರ ಜೀವ ಮತ್ತು ಜೀವನವಾಗಬೇಕು. ಮುಖ್ಯಮಂತ್ರಿಗಳು ಈ ಬಗ್ಗೆ ಸೂಕ್ತ ಸ್ಪಷ್ಟನೆ ನೀಡಿ, ಪರಿಣಾಮಕಾರಿಯಾಗಿ ಕೋವಿಡ್‌ ಅನ್ನು ನಿಗ್ರಹಿಸುವತ್ತ ಗಮನಹರಿಸಬೇಕು. ಕೋವಿಡ್‌ ನಿಗ್ರಹಿಸುವುದಕ್ಕೆ ನಮ್ಮ ಬೆಂಬಲ. ನಿಮ್ಮ ಕ್ಷುಲ್ಲಕ ನಡವಳಿಕೆಗಳಿಗಲ್ಲ.   ಇಂತಹ ಸಂಕಷ್ಟ ಸಮಯದಲ್ಲಿ ಎರಡು ಪಕ್ಷಗಳು ಪರಸ್ಪರ ಕೆಸರೆರಚಾಟ ನಿಲ್ಲಿಸಬೇಕು. ಈ ಸಮಯದಲ್ಲಿ ಜನರ ಜೀವ, ಜೀವನವೇ ಮುಖ್ಯವಾಗಬೇಕು. ಪ್ರಸ್ತುತ ಎದುರಾಗಿರುವ ಕೋವಿಡ್ ಸಂಕಷ್ಟವನ್ನು ಪರಿಹರಿಸುವತ್ತ ಎಲ್ಲರೂ ಗಮನಹರಿಸಬೇಕು ಎಂದು ಎರಡು ಪಕ್ಷಗಳಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದ್ದಾರೆ.
  Published by:HR Ramesh
  First published: