ಕದ್ದಾಲಿಕೆ ಪ್ರಕರಣ: ಫೋನ್​ ಕದ್ದಾಲಿಸಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ; ಎಚ್​ಡಿಕೆ ಸ್ಪಷ್ಟನೆ

ಮೈತ್ರಿ ಸರ್ಕಾರದ ಅವಧಿಯಲ್ಲಿ ಫೋನ್​ ಟ್ಯಾಪ್​ ಆಗಿದ್ದರ ಬಗ್ಗೆ ಡಿಜಿಪಿಗೆ ವರದಿ ಸಲ್ಲಿಕೆಯಾಗಿದ್ದು, ಈ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

HR Ramesh | news18
Updated:August 14, 2019, 5:09 PM IST
ಕದ್ದಾಲಿಕೆ ಪ್ರಕರಣ: ಫೋನ್​ ಕದ್ದಾಲಿಸಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ; ಎಚ್​ಡಿಕೆ ಸ್ಪಷ್ಟನೆ
ಕುಮಾರಸ್ವಾಮಿ
  • News18
  • Last Updated: August 14, 2019, 5:09 PM IST
  • Share this:
ಬೆಂಗಳೂರು: ಮೈತ್ರಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಮೂರು ಪಕ್ಷಗಳ ಕೆಲ ಮುಖಂಡರು, ಪತ್ರಕರ್ತರು ಹಾಗೂ ಅಧಿಕಾರಿಗಳು ಸೇರಿ 300 ಜನರ ಫೋನ್​ ಟ್ಯಾಪ್​ ಮಾಡಿಸಿದ್ದರು ಎಂಬ ಗಂಭೀರ ಆರೋಪ ಕೇಳಬಂದಿದೆ. ಈ ಆರೋಪ ಸಂಬಂಧ ಇಂದು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್​ಡಿಕೆ, ಇದು ಸತ್ಯಕ್ಕೆ ದೂರವಾದ ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

ಇದನ್ನು ಓದಿ: ಫೋನ್​ಗೆ ಕಳ್ಳಗಿವಿ; ಮೈತ್ರಿ ಸರ್ಕಾರದ ವೇಳೆ 300 ನಾಯಕರ ಫೋನ್​ ಟ್ಯಾಪ್​?

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮೈತ್ರಿ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದ್ದವರ ಮುಖಂಡರ ಫೋನ್​ಗಳನ್ನು ಟ್ಯಾಪ್​ ಮಾಡಿಸಿ, ಅವರ ಉಪಾಯವನ್ನು ತಿಳಿದುಕೊಳ್ಳುತ್ತಿದ್ದರು ಎಂಬ ಆರೋಪ ಕೇಳಬಂದಿದೆ. ಸುಮಾರು 300 ಜನರ ಫೋನ್​ಗಳನ್ನು ಅವರು ಟ್ಯಾಪ್​ ಮಾಡಿಸಿದ್ದರು ಎನ್ನಲಾಗಿದೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಫೋನ್​ ಟ್ಯಾಪ್​ ಆಗಿದ್ದರ ಬಗ್ಗೆ ಡಿಜಿಪಿಗೆ ವರದಿ ಸಲ್ಲಿಕೆಯಾಗಿದ್ದು, ಈ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

First published:August 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ