BJP Govt: ಈ ನಿರ್ಲಜ್ಜ ಸರಕಾರಕ್ಕೆ ಜನಹಿತಕ್ಕಿಂತ ಪಕ್ಷ ಹಿತವೇ ಸರ್ವಸ್ವ; HDK ವಾಗ್ದಾಳಿ

"ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು" ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ

ಹೆಚ್ ಡಿ ಕುಮಾರಸ್ವಾಮಿ

ಹೆಚ್ ಡಿ ಕುಮಾರಸ್ವಾಮಿ

  • Share this:
ಬೆಂಗಳೂರು ನಗರದ ವಾರ್ಡ್ ಗಳ ವಿಂಗಡನೆ ಮತ್ತು ಒಬಿಸಿ ಮೀಸಲಾತಿ ಪ್ರಕ್ರಿಯೆಯನ್ನು ಎಂಟು ವಾರಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ (Supreme Court) ಕರ್ನಾಟಕ ಸರ್ಕಾರಕ್ಕೆ (Karnataka Government) ಸೂಚನೆ ನೀಡಿತ್ತು. ಸುಪ್ರಿಂ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ  (BBMP) 243 ವಾರ್ಡ್‌ಗಳ ಕರಡು ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ವಾರ್ಡ್‌ಗಳ ವಿಂಗಡಣೆಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ.  ಇದೀಗ ಈ ವಾರ್ಡ್ ವಿಂಗಡಣೆ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (Former CM HD Kumaraswamy) ತಮ್ಮಅಭಿಪ್ರಾಯವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಪಾಲಿಕೆಯಾಗಿದ್ದನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ನಾನು ಮಾಡಿದ್ದು ನಗರದ ಜನರಿಗೆ ಸ್ಥಳೀಯವಾಗಿ ಅತ್ಯುತ್ತಮ ಅಡಳಿತ, ಸೇವೆಗಳು ಲಭ್ಯವಾಗಲಿ ಎಂದು. ಆದರೆ, ಬಿಜೆಪಿ ಸರಕಾರವು ಬಿಬಿಎಂಪಿ ರಚನೆಯ ಮೂಲ ಆಶಯವನ್ನೇ ಬುಡಮೇಲು ಮಾಡಿ ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಅಧಿಕಾರ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಎಲ್ಲಿ ಮತ ಹಾಕಿಬಿಟ್ಟಾರೋ ಎನ್ನುವ ಭೀತಿಯಿಂದ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್‌ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿರುವ ಸರಕಾರ, ಈಗ ವಾರ್ಡ್‌ ವಿಂಗಡಣೆಯ ನಾಟಕ ಅಡಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರದ ವಿಕೃತಿ

ಕೋರ್ಟ್‌ ಹೇಳಿದರಷ್ಟೇ ಕೆಲಸʼ ಎನ್ನುವ ಚಾಳಿ ಬಿಜೆಪಿ ಸರಕಾರದ್ದು. ನ್ಯಾಯಾಲಯದ ಅದೇಶವನ್ನೇ ಧಿಕ್ಕರಿಸಿ ನಡೆದ ಈ ನಿರ್ಲಜ್ಜ ಸರಕಾರಕ್ಕೆ ಜನಹಿತಕ್ಕಿಂತ ಪಕ್ಷಹಿತವೇ ಸರ್ವಸ್ವ. ವಾರ್ಡ್‌ ವಿಂಗಡಣೆ ಸ್ವರೂಪ ನೋಡಿದರೆ ಬಿಜೆಪಿಯ 'ಅಧಿಕಾರದ ವಿಕೃತಿ' ಯಾವ ಮಟ್ಟದಲ್ಲಿದೆ ಎನ್ನುವುದು ಅರ್ಥವಾಗುತ್ತದೆ.

ಇದನ್ನೂ ಓದಿ:  JDS MLA’s Cross Voting: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಬಗ್ಗೆ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ!

ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ

ವಾರ್ಡ್ ವಿಂಗಡಣೆಯಲ್ಲಿ ಬೆಂಗಳೂರು ನಗರದ ಸಮಗ್ರತೆ, ಅನನ್ಯತೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರು ಎಂದರೆ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳು ಮಾತ್ರವಲ್ಲ. ಇದು ಕೇವಲ ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ ಮರು ವಿಂಗಡಣೆ. ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿ ಪಠ್ಯಕ್ಕೆ ಅಪಚಾರ ಎಸಗಿದಂತೆ ನಾಡಪ್ರಭುಗಳು ಮತ್ತು ಮೈಸೂರು ಒಡೆಯರರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ ಇದಷ್ಟೇ.

23 ಕೋಟಿ ಖರ್ಚು ಮಾಡಿ ಗುಂಡಿ ಮುಚ್ಚುವ ಕೆಲಸ

"ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು" ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು. "ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು" ಎಂದು ಕೋರ್ಟ್ ಚಾಟಿ ಬೀಸಿದೆ

40% ಕಮಿಷನ್‌ & ಕಳಪೆ ಕಾಮಗಾರಿಯ ಫಲಶ್ರುತಿ

ಇನ್ನು, ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್‌ & ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ;  Karnataka Politics: ಈ ಕಾರಣಕ್ಕೆ ಜಿ ಟಿ ದೇವೇಗೌಡರ ಮೇಲೆ ಮುನಿಸಿಕೊಂಡ್ರಾ ಸಿದ್ದರಾಮಯ್ಯ?

ಜೂನ್ 20ರಂದು ಪ್ರಧಾನಿಗಳು ಬೆಂಗಳೂರು ನಗರಕ್ಕೆ ಆಗಮನದ ಹಿನ್ನೆಲೆ ಕೆಲ ರಸ್ತೆಗಳಿಗೆ ಟಾರ್ ಹಾಕಲಾಗಿತ್ತು. ಆದ್ರೆ ಮೂರೇ ದಿನಕ್ಕೆ ಈ ಟಾರ್ ಕಿತ್ತು ಹೋಗಿದೆ. ಸದ್ಯ ಈ ರಸ್ತೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ.
Published by:Mahmadrafik K
First published: