ಬಿಜೆಪಿಗರ ಜೀನ್​ ಪಾಕಿಸ್ತಾನದಲ್ಲಿರಬಹುದು, ನನ್ನ ಜೀನ್ ಈ ಮಣ್ಣಿನಲ್ಲಿದೆ; ಕೊಲೆ ಬೆದರಿಕೆ ಬಗ್ಗೆ ಎಚ್​ಡಿಕೆ

ನಿನ್ನೆ ಬೆಳಗಾವಿಯ ನಿಜಗುಣಾನಂದ ಸ್ವಾಮೀಜಿ ಅವರ ಬೈಲೂರು ಮಠಕ್ಕೆ ಒಂದು ಕೊಲೆ ಬೆದರಿಕೆ ಪತ್ರ ಬಂದಿತ್ತು. ದಾವಣೆಗೆರೆಯಿಂದ ಅಪರಿಚಿತ ವ್ಯಕ್ತಿಯೋರ್ವ ಬರೆದಿದ್ದ ಈ ಪತ್ರದಲ್ಲಿ ನಿಜಗುಣಾನಂದ ಸ್ವಾಮಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಟ ಪ್ರಕಾಶ್ ರೈ ಸೇರಿದಂತೆ ಹಲವು ಪ್ರಗತಿಪರರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.

MAshok Kumar | news18-kannada
Updated:January 25, 2020, 11:38 AM IST
ಬಿಜೆಪಿಗರ ಜೀನ್​ ಪಾಕಿಸ್ತಾನದಲ್ಲಿರಬಹುದು, ನನ್ನ ಜೀನ್ ಈ ಮಣ್ಣಿನಲ್ಲಿದೆ; ಕೊಲೆ ಬೆದರಿಕೆ ಬಗ್ಗೆ ಎಚ್​ಡಿಕೆ
ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ
  • Share this:
ಬೆಂಗಳೂರು (ಜನವರಿ 25); ಇಂದು ಟ್ವಿಟರ್​ನಲ್ಲಿ ಸರಣಿ ಟ್ವಿಟ್​ ಮಾಡುವ ಮೂಲಕ ಬಿಜೆಪಿ ನಾಯಕರ ಹಾಗೂ ಬಲಪಂಥೀಯ ಚಿಂತಕರ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, “ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ಆದರೆ, ನನ್ನ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು” ಎಂದು ಕಿಡಿಕಾರಿದ್ದಾರೆ.

ನಿನ್ನೆ ಬೆಳಗಾವಿಯ ನಿಜಗುಣಾನಂದ ಸ್ವಾಮೀಜಿ ಅವರ ಬೈಲೂರು ಮಠಕ್ಕೆ ಒಂದು ಕೊಲೆ ಬೆದರಿಕೆ ಪತ್ರ ಬಂದಿತ್ತು. ದಾವಣೆಗೆರೆಯಿಂದ ಅಪರಿಚಿತ ವ್ಯಕ್ತಿಯೋರ್ವ ಬರೆದಿದ್ದ ಈ ಪತ್ರದಲ್ಲಿ ನಿಜಗುಣಾನಂದ ಸ್ವಾಮಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಟ ಪ್ರಕಾಶ್ ರೈ ಸೇರಿದಂತೆ ಹಲವು ಪ್ರಗತಿಪರರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ತಿಂಗಳಾಂತ್ಯಕ್ಕೆ 29ನೇ ತಾರೀಕಿನಂದು ಸಂಹಾರ ಮಾಡುತ್ತೇವೆ" ಎಂದು ಉಲ್ಲೇಖಿಸಲಾಗಿತ್ತು.

ಈ ಕೊಲೆ ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವಿಟ್ ಮಾಡುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿರುವ ಹೆಚ್.ಡಿ. ಕುಮಾರಸ್ವಾಮಿ, “ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?" ಎಂದು ಪ್ರಶ್ನಿಸಿದ್ದಾರೆ.


ಮತ್ತೊಂದು ಟ್ವಿಟ್​ನಲ್ಲಿ "ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು 'ಪಾಕಿಸ್ತಾನಿ' ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ 'ಉಗ್ರ' ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ.



ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ.



ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ.



‘ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು’ ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು.





ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು” ಎಂದು ಟ್ವಿಟ್ ಮಾಡುವ ಮೂಲಕ ತಮ್ಮ ಕೊಲೆಗೆ ಸಂಚು ರೂಪಿಸಿರುವವರು ಹಾಗೂ ತಮ್ಮನ್ನು ಅಪಮಾನಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಎಚ್​​ಡಿಕೆ, ಪ್ರಕಾಶ್​​​ ರಾಜ್​​​, ನಿಜಗುಣಾನಂದ ಸ್ವಾಮಿ ಸೇರಿದಂತೆ 15 ಮಂದಿಗೆ ಕೊಲೆ ಬೆದರಿಕೆ
First published: January 25, 2020, 11:15 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading