ಬೆಂಗಳೂರು(ಮೇ.28): ಬಹುನಿರೀಕ್ಷಿತ ಕರ್ನಾಟಕ ಚುನಾವಣೆ (Karnataka Elections) ನಡೆದಿದ್ದು, ಕಾಂಗ್ರೆಸ್ ಬಹುಮತ ಗಳಿಸಿ ಸರ್ಕಾರವನ್ನೂ ರಚಿಸಿದೆ. ಇತ್ತ ಬಿಜೆಪಿ ಹೀನಾಯ ಸೋಲನುಭವಿಸಿದ್ದು, ಇದಕ್ಕೇನು ಕಾರಣ ಎಂಬ ಕುರಿತಾಗಿ ಮಂಥನ ನಡೆಸುತ್ತಿದೆ. ಇನ್ನು ಚುನಾವಣಾ ಹೊಸ್ತಿಲಲ್ಲಿ ಕಮಲ ಪಾಳಯದ ಮೇಲಿನಿಂದ ಪ್ರಮುಖ ನಾಯಕರಾದ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ ಪಕ್ಷಕ್ಕೆ ಗುಡ್ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾದದ್ದು ಬಹುದೊಡ್ಡ ಪೆಟ್ಟು ನೀಡಿದೆ ಎಂಬುವುದರಲ್ಲಿ ಅನುಮಾನವಿಲ್ಲ. ಸದ್ಯ ಈ ಬಗ್ಗೆ ಮಾತನಾಡಿರುವ ಶೆಟ್ಟರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದಿದ್ದಾರೆ.
ನಾನು ಯಾವುದೇ ಷರತ್ತು ವಿಧಿಸಿ ಕಾಂಗ್ರೆಸ್ ಸೇರಿರಲಿಲ್ಲ. ಆದರೆ ನಾನು ಮಾಡಿದ ಸಂಘಟನೆ ನೋಡಿ ಹಲವಾರು ಜನ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಆದರೆ ಸದ್ಯ ಒತ್ತಡ ಪರಿಸ್ಥಿತಿಯಿದೆ . ಹೀಗಾಗಿ ಮುಂದೆ ಒಳ್ಳೆಯ ಸ್ಥಾನ ನೀಡುವ ಭರವಸೆ ಇದೆ. ಬೇರೆ ಬೇರೆ ಕಾರಣದಿಂದ ಸಚಿವ ಸ್ಥಾನ ನೀಡಿಲ್ಲ. ಇನ್ನೂ ಸಾಕಷ್ಟು ಅವಕಾಶ ಇವೆ. ಅದನ್ನು ನೀಡುತ್ತಾರೆ ಅಂತ ಭರವಸೆಯಿದೆ. ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: Pramod Mutalik: ಪ್ರವೀಣ್ ನೆಟ್ಟಾರ್ ಪತ್ನಿಯ ಕೆಲಸ ರದ್ದು ಮಾಡಿದ್ದು ಸೇಡು, ದ್ವೇಷದ ಕೃತ್ಯ: ಪ್ರಮೋದ್ ಮುತಾಲಿಕ್ ಕಿಡಿ
ಕ್ಯಾಬಿನೆಟ್ನಲ್ಲಿ ನಾನು ಮಿನಿಸ್ಟರ್ ಆಗಬೇಕು ಎಂಬ ಅಭಿಲಾಷೆ ಜನರಲ್ಲಿ ಇತ್ತು. ಹಲವು ಕಾರಣದಿಂದ ಆಗಿಲ್ಲ, ಇನ್ನು ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ. ವೈಯುಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ, ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತೆ ಎಂದಿದ್ದಾರೆ.
ಇದನ್ನೂ ಓದಿ: Praveen Nettar Wife: ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗವೂ ರದ್ದು!
ಕಾಂಗ್ರೆಸ್ಗೆ ಜನ ಬೆಂಬಲ ನೀಡಿದ್ದಾರೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ. ಸಾಕಷ್ಟು ಅವಕಾಶಗಳು ಉತ್ತರ ಕರ್ನಾಟಕದವರಿಗೆ ಸಿಕ್ಕಿವೆ. ಮುಂದಿನ ಕ್ಯಾಬಿನೆಟ್ನಲ್ಲಿ ಒಂದು ನಿರ್ಧಾರ ಮಾಡ್ತೇವೆ ಎಂದಿದ್ದಾರೆ. ಗ್ಯಾರಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತೆ. ಆದರೆ ಪ್ರತಿಪಕ್ಷಗಳು ಇದನ್ನ ರಾಜಕೀಯವಾಗಿ ಬಳಸಿಕೊಳ್ತಾ ಇದ್ದಾರೆ. ಹೊಸ ಸರ್ಕಾರ ಬಂದಿದೆ, ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತೆ. ಎಂಪಿ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ ಎಂದಿದ್ದಾರೆ.
ಸಂಸತ್ ಉದ್ಘಾಟನೆಗೆ ರಾಷ್ಟಪತಿಯನ್ನು ಕರಿಯಬೇಕಿತ್ತು ಎ.ಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್ ನನಗೆ ಸುವರ್ಣ ಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ನಾನು ರಾಷ್ಟಪತಿ ಪ್ರಣವ್ ಮುಖರ್ಜಿ ಅವರಿಗೆ ಕರೆದೆ. ರಾಷ್ಟಪತಿಗಳನ್ನು ಕರೆಯಬೇಕು ಎಂಬುದು ಸರಿಯಾಗಿದೆ ಎಂದಿದ್ದಾರೆ. ಇದೇ ವೇಳೆ ಸೋಲಿಗೆ ಕಾರಣ ಏನು ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು ಸೋಲಿಗೆ ಕಾರಣವಾದದ್ದು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಚರ್ಚೆ ಆಗಿಲ್ಲ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು ಆದರೆ ಆಗಿಲ್ಲ. ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ..? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ? ಈ ನ್ನ ಪ್ರಶ್ನೆಗೆ ಯಾರು ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ ಎನ್ನುವ ಮೂಲಕ ಶೆಟ್ಟರ್ ಪರೋಕ್ಷವಾಗಿ ಬಿಎಲ್ ಸಂತೋಷಗೆ ಟಾಂಗ್ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ