H D Kumaraswamy: ಸಚಿವ ಅಶ್ವತ್ಥ ನಾರಾಯಣ ತಲೆದಂಡ ಆಗಲೇಬೇಕು; 3 ಬೇಡಿಕೆ ಮುಂದಿಟ್ಟ ಎಚ್​ಡಿಕೆ!

ಬಿಎಂಎಸ್‌ ಟ್ರಸ್ಟ್‌ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಹಾಗೂ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಸಚಿವ ಸಿ ಎನ್‌ ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕುಮಾರಸ್ವಾಮಿ- ಅಶ್ವಥ್ ನಾರಾಯಣ ಟ್ವೀಟ್ ಸಮರ

ಕುಮಾರಸ್ವಾಮಿ- ಅಶ್ವಥ್ ನಾರಾಯಣ ಟ್ವೀಟ್ ಸಮರ

  • Share this:
ಬೆಂಗಳೂರು (ಸೆ. 23):  ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ (HD Kumarswamy) ಹಾಗೂ ಸಚಿವ ಅಶ್ವತ್ಥ ನಾರಾಯಣ (Minister Ashwattha Narayan) ನಡುವಿನ ವಾಕ್​ ಸಮರ ಮುಂದುವರಿದೆ. ಬಿಎಂಎಸ್‌ ಟ್ರಸ್ಟ್‌ನಲ್ಲಿ ಅಕ್ರಮ ನಡೆದಿದ್ದು, ಉನ್ನತ ಶಿಕ್ಷಣ ಸಚಿವ ಸಿ.ಎನ್‌ ಅಶ್ವತ್ಥ ನಾರಾಯಣ ಕೂಡಲೇ ರಾಜೀನಾಮೆ (Resignation) ನೀಡಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ (Tweet)​ ಮಾಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ಟ್ವೀಟ್​ ಮಾಡಿ ಕುಮಾರಸ್ವಾಮಿ ಕಿಡಿ 

ಬಿಎಂಎಸ್‌ ಟ್ರಸ್ಟ್‌ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಹಾಗೂ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವ ಸಿ.ಎನ್‌.ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

H D Kumaraswamy Ashwath Narayana tweet war Karnataka Politics
ಕುಮಾರಸ್ವಾಮಿ- ಅಶ್ವಥ್ ನಾರಾಯಣ ಟ್ವೀಟ್ ಸಮರ






ಟ್ರಸ್ಟಿನಲ್ಲಿ ಸರ್ಕಾರ‌ದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟ್‌ನಲ್ಲಾಗುತ್ತಿದ್ದ ಗೋಲ್‌ಮಾಲ್ ಬಗ್ಗೆ ಸರ್ಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ. ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಉನ್ನತ ಶಿಕ್ಷಣ ಸಚಿವರೇ, ಇದರ ಹಿಂದಿನ ಹುನ್ನಾರ ಏನು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.





ಅಶ್ವತ್ಥನಾರಾಯಣ ಬಗ್ಗೆ ಎಚ್​ಡಿಕೆ ಟೀಕೆ 

ಟ್ರಸ್ಟ್‌ನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ. ಅಶ್ವತ್ಥನಾರಾಯಣ ಅವರೇ, ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಎಚ್‌ಡಿಕೆ ಟೀಕಿಸಿದ್ದಾರೆ.

ಇದನ್ನೂ ಓದಿ: B S Yediyurappa: ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್; ಲಂಚ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್​ ತಡೆ





ವಿಧಾನಸಭೆ ಕಲಾಪದಲ್ಲಿ ಗುರುವಾರ ಮಾತನಾಡಿದ್ದ ಕುಮಾರಸ್ವಾಮಿ, ಬಿಎಂಎಸ್‌ ಶಿಕ್ಷಣ ಸಂಸ್ಥೆಯಲ್ಲಿ ಬೈಲಾ ಉಲ್ಲಂಘಿಸಿ ಟ್ರಸ್ಟಿಗಳ ನೇಮಕ, ಪ್ರವೇಶ ಪ್ರಕ್ರಿಯೆ, ಶುಲ್ಕ ವಸೂಲಿ ಮತ್ತು ಜಮೀನಿನಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಶಾಮೀಲಾಗಿರುವುದರಿಂದ ಅವರ ತಲೆದಂಡ ಆಗಲೇಬೇಕು ಎಂದು ಒತ್ತಾಯಿಸಿದ್ದರು.
Published by:ಪಾವನ ಎಚ್ ಎಸ್
First published: