• Home
  • »
  • News
  • »
  • state
  • »
  • H.D Kumaraswamy: ರಾಮನಗರ, ಚನ್ನಪಟ್ಟಣ ಎರಡೂ ನನ್ನ ಕಣ್ಣುಗಳಿದ್ದಂತೆ, ಆದರೆ ಈ ಬಾರಿ ಈ ಕ್ಷೇತ್ರದಿಂದ ಮಾತ್ರ ಸ್ಪರ್ಧೆ- ಎಚ್‌ಡಿಕೆ

H.D Kumaraswamy: ರಾಮನಗರ, ಚನ್ನಪಟ್ಟಣ ಎರಡೂ ನನ್ನ ಕಣ್ಣುಗಳಿದ್ದಂತೆ, ಆದರೆ ಈ ಬಾರಿ ಈ ಕ್ಷೇತ್ರದಿಂದ ಮಾತ್ರ ಸ್ಪರ್ಧೆ- ಎಚ್‌ಡಿಕೆ

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ನಾನು ಸ್ಪರ್ಧೆ ಮಾಡೋ ಕ್ಷೇತ್ರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಟೂರಿಂಗ್ ಟಾಕೀಸ್ ತರ ಒಂದೊಂದು ಚುನಾವಣೆಗೆ ಒಂದೊಂದು ಕ್ಷೇತ್ರಕ್ಕೆ ನಾನು ಹೋಗಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

  • Share this:

ರಾಮನಗರ (ಅ.22):  ವಿಧಾನಸಭೆ ಚುನಾವಣೆಗೆ (Assembly Election) ಇನ್ನೂ 6 ತಿಂಗಳು ಬಾಕಿ ಇರುವಾಗ್ಲೆ ಎಲ್ಲಾ ಪಕ್ಷಗಳು (All Party) ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಜೆಡಿಎಸ್​ ವರಿಷ್ಠರು (JDS Leaders) ಸಹ ಎಲೆಕ್ಷನ್​ ಅಖಾಡಕ್ಕಿಳಿಯಲು ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ.  ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್​ ಅಭ್ಯರ್ಥಿಗಳ (JDS Candidates) ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣ ರಣಕಣವಾಗಿ ಬದಲಾಗಿದೆ. ಕುಮಾರಸ್ವಾಮಿ (H.D Kumaraswamy) ಹಾಗೂ ಯೋಗೇಶ್ವರ್ (Yogeshwar) ನಡುವೆ ಭಾರೀ ಫೈಟ್​ ನಡೆಯೋ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗಿಳೀತಾರಾ ಅನ್ನೋ ಪ್ರಶ್ನೆ ಮೂಡಿತ್ತು. ಇದೀಗ ಕುಮಾರಸ್ವಾಮಿ ಅವರೇ ತಮ್ಮ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.  


ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧೆ 


ಈ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲೇ ಮಾತಾಡಿದ ಅವರು, ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರ ನನ್ನ ಎರಡೂ ಕಣ್ಣುಗಳಿದ್ದ ಹಾಗೇ, ಕಳೆದ ಬಾರಿ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಆದರೆ ಈ ಬಾರಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತೀನಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ನಾನು ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗೊಂದಲ ಇಲ್ಲ


ನಾನು ಸ್ಪರ್ಧೆ ಮಾಡೋ ಕ್ಷೇತ್ರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಟೂರಿಂಗ್ ಟಾಕೀಸ್ ತರ ಒಂದೊಂದು ಚುನಾವಣೆಗೆ ಒಂದೊಂದು ಕ್ಷೇತ್ರಕ್ಕೆ ನಾನು ಹೋಗಲ್ಲ. ನಮ್ಮ ಪಕ್ಷದಲ್ಲಿ ಆ ರೀತಿಯ ವಾತಾವರಣ ಇಲ್ಲ. ಮಾಗಡಿಯಿಂದ ಸ್ಪರ್ಧೆಗಿಳಿಯುವಂತೆ ಕೆಲವರು ಒತ್ತಡ ಹೇರಿದ್ರು. ಆದ್ರೆ ಈ ಬಗ್ಗೆ ನಾನು ಈಗಾಗಲೇ ಸ್ಪಷ್ಟ ತೀರ್ಮಾನ ಮಾಡಿದ್ದೇವೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: JDS Politics: ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್​ ರಣಕಹಳೆ; ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​


ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ


ಜೆಡಿಎಸ್​ ನಾಯಕರು, ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.


ಮೈಸೂರು ಜಿಲ್ಲಾ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ


* ಚಾಮುಂಡೇಶ್ವರಿ – ಜಿ. ಟಿ. ದೇವೇಗೌಡ


* ಹುಣಸೂರು – ಜಿ. ಟಿ. ಹರೀಶ್ ಗೌಡ


* ಕೆ. ಆರ್. ನಗರ – ಸಾ. ರಾ. ಮಹೇಶ್


* ಪಿರಿಯಾಪಟ್ಟಣ – ಕೆ. ಮಹದೇವ್


* ಟಿ. ನರಸೀಪುರ – ಅಶ್ವಿನ್


* ಎಚ್. ಡಿ. ಕೋಟೆ – ಜಯಪ್ರಕಾಶ್


ಮೈಸೂರು ಅಭ್ಯರ್ಥಿಗಳ ಪಟ್ಟಿ ರಿಲೀಸ್​

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಜಿ. ಟಿ. ದೇವೇಗೌಡರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮೈಸೂರು ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.


2023ಕ್ಕೆ ಮಿಷನ್​ 123


2023ಕ್ಕೆ ಮಿಷನ್​ 123 ಶುರು ಮಾಡಿರುವ ಕುಮಾರಸ್ವಾಮಿ ಈಗ 126 ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದಾರೆ. ಇದರಲ್ಲಿ ನಿಖಿಲ್​ ಕುಮಾರಸ್ವಾಮಿ ಮತ್ತು ಜಿಟಿ ದೇವೇಗೌಡ ಪುತ್ರ ಹರೀಶ್​​ಗೂ ಟಿಕೆಟ್​ ಖಚಿತವಾಗಿದೆ .


Published by:ಪಾವನ ಎಚ್ ಎಸ್
First published: