ಬೆಂಗಳೂರು(ಡಿ.02): ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (Former CM Siddaramaiah) ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital) ಶಸ್ತ್ರ ಚಿಕಿತ್ಸೆಗಾಗಿ (Surgery)ದಾಖಲಾಗಿದ್ದಾರೆ. ಸಂಜೆ ವೇಳೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: KSRTC ಇ-ಬಸ್ಗಳಿಗೆ ನೀವೇ ಹೆಸರು ಸೂಚಿಸಿ; ಆಕರ್ಷಕ ಬ್ರಾಂಡಿಂಗ್ ಐಡಿಯಾ ಕೊಟ್ಟವರಿಗೆ 35 ಸಾವಿರ ಬಹುಮಾನ!
ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದು, ಅವರ ಪತ್ನಿಯೂ ಜೊತೆಗೆ ತೆರಳಿದ್ದಾರೆ. ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಸರ್ಜರಿಯಿಂದಾಗಿ ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ವೈದ್ಯರು ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿದ ಆಸ್ಪತ್ರೆ ಸಿಬ್ಬಂದಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರರೋಗಿಯಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಮುಂದಿನ ಪರಿಶೀಲನೆ ಬಳಿಕ ವೈದ್ಯರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ