Controversial Statement: ಮಾಧ್ಯಮಗಳ ಮೇಲೆ ಸಿದ್ದರಾಮಯ್ಯ ಫುಲ್ ಗರಂ, ಸಿದ್ದು ಹೇಳಿಕೆ ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಹಿಂದೇಟು

ನೀವೇ ಪ್ರಶ್ನೆ ಕೇಳಿ, ನೀವೇ ವಿವಾದ ಮಾಡುತ್ತೀರಾ, ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ.ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾದ್ರು.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
ಮೈಸೂರು (ಮಾ.26): ಹಿಜಾಬ್ (Hijab)​ ವಿಚಾರವಾಗಿ ಮಠಾಧೀಶರ (Swamiji) ಬಗ್ಗೆ ಸಿದ್ದರಾಮಯ್ಯ ಆಡಿದ ಮಾತು ಭಾರೀ ಚರ್ಚೆ ಆಗ್ತಿದೆ. ರಾಜ್ಯಾದ್ಯಂತ ಮಠಾಧೀಶರೆಲ್ಲಾ ಸಿದ್ದರಾಮಯ್ಯ (Siddaramaiah) ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಿಜಾಬ್​ ವಿಚಾರವಾಗಿ ನಿನ್ನೆ ಮಾತಾಡಿದ ಸಿದ್ದರಾಮಯ್ಯ, ಹಿಂದೂ ಮಹಿಳೆಯರು (Women) ತಲೆ ಮೇಲೆ ಸೆರಗು ಹಾಕಿಕೊಳ್ತಾರೆ. ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ತಾರೆ ಅವರನ್ನ ಯಾಕೆ ಪ್ರಶ್ನೆ ಮಾಡಲ್ಲ ಅಂತ ಸಿದ್ದರಾಮಯ್ಯ ಹೇಳಿದ್ರು. ಹಿಜಾಬ್​ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆದು ತಂದಿದ್ದಕ್ಕೆ ಸಿಟ್ಟಾದ ಮಠಾಧೀಶರು ನಿನ್ನೆಯಿಂದಲೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಇಂದು ಮೈಸೂರಿನಲ್ಲಿ ಪ್ರತಿಕ್ರಿಯಿಸಿರೋ ಸಿದ್ದರಾಮಯ್ಯ ಮಾಧ್ಯಮದ (Media) ಮೇಲೆಯೇ ಗರಂ ಆಗಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಕಿಡಿಕಾರಿದ್ರು.  

ಮಾಧ್ಯಮದವರ ಮೇಲೆ ಸಿದ್ದರಾಮಯ್ಯ ಗರಂ

ಮೈಸೂರಿ(Mysore)ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ನೀವೇ ಪ್ರಶ್ನೆ ಕೇಳಿ, ನೀವೇ ವಿವಾದ ಮಾಡುತ್ತೀರಾ, ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ ಎಂದು ಕೆಂಡಾಮಂಡಲರಾದ್ರು. ನಿಮಗೆ ಹಿಜಾಬ್​ಗೂ ದುಪ್ಪಟಕ್ಕೂ ವ್ಯತ್ಯಾಸ ಗೊತ್ತಿಲ್ವಾ? ಹಿಜಾಬೇ ಬೇರೆ, ದುಪ್ಪಟವೇ ಬೇರೆ. ಜನ ಸಾರ್ವಜನಿಕವಾಗಿ ಯಾವ ಯಾವ ವಸ್ತ್ರ ಬಳಸುತ್ತಾರೆಂದು ಹೇಳಿದ್ದೇನೆ. ಇದನ್ನು ಯಾವುದಕ್ಕೋ ನೀವು ಲಿಂಕ್ ಮಾಡಿ ವಿವಾದ ಸ್ಪಷ್ಠಿಸಿದ್ದೀರಿ.

‘ನನಗೆ ಸ್ವಾಮೀಜಿ ಮೇಲೆ ಗೌರವವಿದೆ’

ನನಗೆ ಹಿಂದಿನಿಂದಲೂ ಸ್ವಾಮೀಜಿಗಳ ಮೇಲೆ ಅಪಾರ ಗೌರವವಿದೆ. ನಾನು ಮಠಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ದುಪ್ಪಟ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೊಡಿ ಅಂತ ಕೇಳಿದ್ದೇನೆ. ನಾನು ಸಮವಸ್ತ್ರದ ವಿರೋಧಿ ಅಲ್ಲ. ಸಮವಸ್ತ್ರದ ಜೊತೆ ಅದೇ ಬಣ್ಣದ ದುಪ್ಪಟಕ್ಕೆ ಅವಕಾಶ ನೀಡಿ ಅಂತ ಕೇಳಿದ್ದೇನೆ, ಇದರಲ್ಲಿ ತಪ್ಪೇನಿದೆ. ನಾನು ಸಲಹೆ ಕೊಟ್ಟಿದ್ದೇನೆ. ಸ್ವೀಕರಿಸುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಫುಲ್​ ಗರಂ ಆದ್ರು.

 ಟ್ವೀಟ್​ ಮೂಲಕ ಸಿದ್ದರಾಮಯ್ಯ ಸ್ಪಷ್ಟನೆ

ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಲ ಶ್ರೀಗಳಿಗೆ ಇದು ಅರ್ಥವಾಗಿರುವ ಕಾರಣ ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: Siddaramaiah: ಸ್ವಾಮೀಜಿಗಳ ವಸ್ತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ; ಸಿದ್ದು ವಿರುದ್ಧ ಸಿಡಿದೆದ್ದ ಮಠಾಧೀಶರು

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಸಿದ್ದು ಹೇಳಿಕೆ ಸಮರ್ಥಿಸಿಕೊಳ್ಳಲು ಕಾಂಗ್ರೆಸ್​ ನಾಯಕರ ಹಿಂದೇಟು

ಮಠಾಧೀಶರ ವಸ್ತ್ರದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕುರಿತು ಕಾಂಗ್ರೆಸ್​ ನಾಯಕರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕ್ತಿದ್ದಾರೆ. ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲಲು ಕಾಂಗ್ರೆಸ್​ ಶಾಸಕರು ಹಿಂದೇಟು ಹಾಕ್ತಿದ್ದಾರೆ. ಈ ಬಗ್ಗೆ ಪ್ರಿಯಾಂಕ್​ ಖರ್ಗೆ ಅವರನ್ನ ಕೇಳಿದ್ರೆ ಅವ್ರ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದಿದ್ದಾರೆ.

ಇದನ್ನೂ ಓದಿ: Siddaramaiah: ಜಾತ್ರಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ವೀರಕುಣಿತ; ವಿಡಿಯೋ ವೈರಲ್

ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲದ ಡಿಕೆಶಿ

ಸಿದ್ದರಾಮಯ್ಯ ಕೊಟ್ಟ ಹೇಳಿಕೆಗೆ ಅವರೇ ಉತ್ತರ ಕೊಡ್ತಾರೆ ಎಂದು ರಾಜ್ಯ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ. ಈಗಾಗಲೇ ಅವರು ಟ್ವೀಟ್ ಮಾಡಿದ್ದಾರೆ. ಅವರೂ ಎಲ್ಲ ಧರ್ಮ, ಸ್ವಾಮಿಗಳ ಮೇಲೆ ಗೌರವ ಇದೆ. ಅವರು ಸಿಎಂ ಆಗಿದ್ದಾಗ ಎಲ್ಲ ಧರ್ಮ ಗಳಿಗೂ ಬೇಕಾದಷ್ಟು ಸಹಾಯ ಮಾಡಿದ್ದಾರೆ. ಅವರು ಏನು ಮಾತಾಡಿದ್ದಾರೋ ಅದಕ್ಕೆ ಅವರೇ ಉತ್ತರ ಕೊಡ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯನ್ನು ಪಕ್ಷದ ಪರವಾಗಿ ಸಮರ್ಥನೆ ಮಾಡಿಕೊಳ್ಳಲು ಡಿಕೆಶಿ ಹಾಗೂ ಪ್ರಿಯಾಂಕ್​ ಖರ್ಗೆ ಇಬ್ಬರು ಹಿಂದೇಟು ಹಾಕಿದ್ದಾರೆ.
Published by:Pavana HS
First published: