ಎಂಎಲ್‌ಸಿ ಟಿಕೆಟ್ ಫೈನಲ್ ಮಾಡಲು‌ ನಾಳೆ ಸಿಎಲ್​ಪಿ ಸಭೆ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ 

ಜೂನ್ 29ರಂದು ನಡೆಯುವ ವಿಧಾನಪರಿಷತ್ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸುವ ಅವಕಾಶ ವಿಧಾನಸಭೆ ಸದಸ್ಯರಿಗೆ ಇದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ.

ವಿಪಕ್ಷ ನಾಯಕ ಸಿದ್ದರಾಮಯ್ಯ.

  • Share this:
ಬೆಂಗಳೂರು(ಜೂ.17): ಇದೇ ಜೂನ್​ 29ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಇನ್ನೂ ಸಹ ಕಾಂಗ್ರೆಸ್​​ ಅಭ್ಯರ್ಥಿ ಆಯ್ಕೆ ಅಂತಿಮವಾಗಿಲ್ಲ. ಹೀಗಾಗಿ ಕಾಂಗ್ರೆಸ್​ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ ಸಿಎಲ್​ಪಿ ಸಭೆ ಕರೆದಿದ್ದಾರೆ.  ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲು ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ, ನಾಳೆ ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಸಭೆ ಕರೆದಿದ್ದಾರೆ. ಜೂನ್ 29ರಂದು ನಡೆಯುವ ವಿಧಾನಪರಿಷತ್ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸುವ ಅವಕಾಶ ವಿಧಾನಸಭೆ ಸದಸ್ಯರಿಗೆ ಇದೆ. 50ಕ್ಕೂ ಹೆಚ್ಚು ಆಕಾಂಕ್ಷಿಗಳು ಇರುವ ಹಿನ್ನೆಲೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಸಲುವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್​​ಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿಂದ ಅಂತಿಮವಾಗಿ ಅಧಿಕೃತ ಇಬ್ಬರ ಆಯ್ಕೆಯ ಪ್ರಕಟಣೆ ಹೊರ ಬೀಳಲಿದೆ. ಈ ಹಿನ್ನೆಲೆ ನಾಳೆ ನಡೆಯುವ ಸಭೆಯಲ್ಲಿ ಎಲ್ಲಾ ಶಾಸಕರು ವಿಧಾನಪರಿಷತ್ ಸದಸ್ಯರು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಯಚೂರಿನಿಂದ‌ ಮಂತ್ರಾಲಯಕ್ಕೆ ಬಸ್ ಸಂಚಾರ; ಕೊರೋನಾ ಭೀತಿಯಿಂದ ಪ್ರಯಾಣಿಸದ ಜನರು

ಜೊತೆಗೆ ಇಂದು ಕೂಡ ಕೆಲ ಟಿಕೆಟ್ ಆಕಾಂಕ್ಷಿಗಳು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದರು. ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಕಳುಹಿಸಿದ್ದ ಪಟ್ಟಿಯನ್ನು  ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ. ನಿನ್ನೆ ರಾತ್ರಿ ರಾಜ್ಯ ಕಾಂಗ್ರೆಸ್​​ ನಾಯಕರು ಹೈಕಮಾಂಡ್​​ಗೆ ನಾಲ್ವರ ಪಟ್ಟಿಯನ್ನು ಕಳುಹಿಸಿದ್ದರು. ಆ ಪಟ್ಟಿಯಲ್ಲಿ  ಎಂ.ಸಿ.ವೇಣುಗೋಪಾಲ್, ಎಂ.ಆರ್.ಸೀತಾರಾಂ, ನಸೀರ್ ಅಹ್ಮದ್, ಐವಾನ್ ಡಿಸೋಜಾ ಹೆಸರು ಇತ್ತು. ಆದರೆ ಆ ಪಟ್ಟಿಯನ್ನು ನಿರಾಕರಿಸಿದ ಕಾಂಗ್ರೆಸ್​ ಹೈ ಕಮಾಂಡ್​, ಇನ್ನೂ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಎಂದು ಸೂಚನೆ ನೀಡಿದೆಯಂತೆ.

ಹೀಗಾಗಿ ಸಿದ್ದರಾಮಯ್ಯ ನಿವಾಸದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್, ರಮೇಶ್ ಕುಮಾರ್, ಕೃಷ್ಣ ಭೈರೇಗೌಡ ಸೇರಿದಂತೆ ಅನೇಕ ಹಿರಿಯರು ಸೇರಿ ಸಭೆ ನಡೆಸಿ ನಿಷ್ಠಾವಂತ ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಲು ಚರ್ಚೆ ನಡೆಸಿದ್ದಾರೆ.
First published: