• Home
  • »
  • News
  • »
  • state
  • »
  • Siddaramaiah Tweet: ಮತದಾರರ ಪಟ್ಟಿ ಪರಿಷ್ಕರಣೆ ಕೆಜಿಎಫ್ ಸಿನಿಮಾ ಅಲ್ಲ, ಕಾಂತಾರ ಪಂಜುರ್ಲಿ ದಂತಕಥೆಯೂ ಅಲ್ಲ, ಬಿಜೆಪಿಗೆ ಸಿದ್ದು ಟಾಂಗ್​

Siddaramaiah Tweet: ಮತದಾರರ ಪಟ್ಟಿ ಪರಿಷ್ಕರಣೆ ಕೆಜಿಎಫ್ ಸಿನಿಮಾ ಅಲ್ಲ, ಕಾಂತಾರ ಪಂಜುರ್ಲಿ ದಂತಕಥೆಯೂ ಅಲ್ಲ, ಬಿಜೆಪಿಗೆ ಸಿದ್ದು ಟಾಂಗ್​

ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಬೆಂಗಳೂರು (ನ.18): ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ (Voter Personal Information) ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ (Police) ಎಫ್ಐಆರ್ (FIR) ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ


ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಮಾಜಿ ಸಿಎಂ ಸಿದ್ದರಾಮಯ್ಯ


ಬಡಪಾಯಿ ಏಜೆಂಟ್​ ಬಲಿಪಶು


ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.


ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣ


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ? ಎಂದು ಪ್ರಶ್ನಿಸಿದ್ದಾರೆ.



ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ


ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಚಿಲುಮೆಗೆ ನೀಡಿರುವ ಅನುಮತಿ ರದ್ದು


ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.


ದುರುದ್ದೇಶದ ಅರಿವು ಬಿಬಿಎಂಪಿಗೆ ಆಗ್ಬೇಕಿತ್ತು


ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: Siddaramaiah: ಮೂರು ಕ್ಷೇತ್ರಗಳ ಮೇಲೆ ಸಿದ್ದು ಕಣ್ಣು! ಅಲ್ಲಿ ಬಿಟ್, ಇಲ್ಲಿ ಬಿಟ್ ಸಿದ್ದರಾಮಯ್ಯ ಸ್ಪರ್ಧಿಸೋದೆಲ್ಲಿ?


ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? 


ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ?

Published by:ಪಾವನ ಎಚ್ ಎಸ್
First published: