Siddaramaiah: ಸವಾಲು ಹಾಕುವ ಧಮ್ ನಿಮಗಿಲ್ಲ; ಅದು ಹೇಳಿದ್ದು, ನನಗೋ ಯಡಿಯೂರಪ್ಪನವರಿಗೋ? ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ.

ಬಸವರಾಜ್ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ

ಬಸವರಾಜ್ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ

  • Share this:
ಶನಿವಾರ ಬಿಜೆಪಿ (Karnataka BJP) ತನ್ನ ಮೂರು ವರ್ಷದ ಸಂಭ್ರಮಾಚರಣೆ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ (Doddaballapur) ಜನಸ್ಪಂದನ (Jana Spandana) ಕಾರ್ಯಕ್ರಮ ಆಯೋಜನೆ ಮಾಡಿತ್ತು. ಕೇಂದ್ರ ಸಚಿವೆ ಸ್ಮೃತಿ ಇರಾನಿ  (Union minister Smriti Irani) ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಈ ವೇಳೆ ಮಾತನಾಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai), ಸರ್ಕಾರದ ಮೂರು ವರ್ಷದ ಸಾಧನೆಗಳನ್ನು ಜನರ ಬಳಿ ತೆಗೆದುಕೊಂಡು ಹೋಗಲಾಗುತ್ತದೆ. ನಮ್ಮ ಸರ್ಕಾರದ ವಿರುದ್ಧ ಭ್ರಷ್ಟಾಚಾರದ (Corruption) ವೃಥಾ ಆರೋಪ ಮಾಡಲಾಗುತ್ತಿದೆ. ಧಮ್ ಇದ್ರೆ ನಮ್ಮ ಯಾತ್ರೆಯನ್ನು ಹಿಮ್ಮೆಟ್ಟಸಲಿ ಎಂದು ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ಸವಾಲು ಹಾಕಿದ್ದರು. ಮುಖ್ಯಮಂತ್ರಿಗಳ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ.

ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ "ಜಾತ್ರೆ"ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ ಎಂದು ವ್ಯಂಗ್ಯವಾಡಿ ಪ್ರಶ್ನೆ ಮಾಡಿದ್ದಾರೆ.

ಸವಾಲು ಹಾಕುವ ಧಮ್ ನಿಮಗಿಲ್ಲ

ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ ಎಂದು ಸಿಎಂಗೆ ಪ್ರತಿ ಸವಾಲು ಹಾಕಿದ್ದಾರೆ.ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ.

ಇದನ್ನೂ ಓದಿ:  Bengaluru Flood: ಬೆಂಗಳೂರು ಪ್ರವಾಹಕ್ಕೆ ಕಾಂಗ್ರೆಸ್ ಕಾರಣ ಅಂದ್ರು ಸಚಿವ ಅಂಗಾರ; ಅರಣ್ಯ ಇಲಾಖೆ ಹುತಾತ್ಮರ ಪರಿಹಾರ ಮೊತ್ತ 50 ಲಕ್ಷಕ್ಕೇರಿಕೆ

ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ.

ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ.

ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ. ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ.ಬೊಮ್ಮಾಯಿ ಅವರೇ ಚರ್ಚೆಗೆ ನಾನೇ ಬರ್ತೇನೆ

ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ.

ಇದನ್ನೂ ಓದಿ:  Bengaluru: ಬೆಂಗಳೂರಲ್ಲಿ ರಸ್ತೆ ಪಕ್ಕದಲ್ಲಿದ್ದ ಚರಂಡಿಗೆ ಬಿದ್ದು ಯುವತಿ ಸಾವು

ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ಟ್ವೀಟ್ ಮಾಡಿ ಕೊನೆಗೆ ಜನಮರ್ದನ ಸರ್ಕಾರ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.
Published by:Mahmadrafik K
First published: