• Home
  • »
  • News
  • »
  • state
  • »
  • Siddaramaiah Tweet: ನಿಮ್ಮ ಮೋದಿ ವಿಶ್ವಗುರು ಅಲ್ಲ ಪುಕ್ಕಲು ಗುರು; ಬೊಮ್ಮಾಯಿ, ಬಿಎಸ್​ವೈಗೂ ಸಿದ್ದು ಸವಾಲ್​!

Siddaramaiah Tweet: ನಿಮ್ಮ ಮೋದಿ ವಿಶ್ವಗುರು ಅಲ್ಲ ಪುಕ್ಕಲು ಗುರು; ಬೊಮ್ಮಾಯಿ, ಬಿಎಸ್​ವೈಗೂ ಸಿದ್ದು ಸವಾಲ್​!

ಸಿದ್ದರಾಮಯ್ಯ

ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಬೊಮ್ಮಾಯಿ, ಬಿಎಸ್​ವೈ ಇಬ್ಬರಿಗೂ ಎರಡು ಸವಾಲು ಹಾಕಿದ್ದಾರೆ. ಮೊದಲು ನೀವು ಕಾರು-ಜೀಪು ಬಿಟ್ಟು 4 ಕಿ.ಮೀ. ಎಡವದೆ ನಡೆದುಕೊಂಡು ಹೋಗಿ, ಬಳಿಕ ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಬಡಾಯಿ ಬೊಮ್ಮಾಯಿ ಎಂದು ಹೇಳಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸಾಲು ಸಾಲು ಟ್ವೀಟ್ ಮೂಲಕ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ, ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM,  ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ವಾಪಸ್​ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಹುಲ್ ಗಾಂಧಿಯವರನ್ನು (Rahul Gandhi) ಬಚ್ಚಾ ಎಂದು ಹೇಳಿದ ಮಾಜಿ ಸಿ ಎಂ ಯಡಿಯೂರಪ್ಪ ಅವರಿಗೂ ಸಿದ್ದರಾಮಯ್ಯ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ. ನಿಮ್ಮ ನರೇಂದ್ರ ಮೋದಿ (Narendra Modi) ಅವರು ವಿಶ್ವಗುರು ಅಲ್ಲ  ಅವರೊಬ್ಬ ಪುಕ್ಕಲು ಗುರು, ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಲಿ ಸಾಕು ಎಂದು ಸಿದ್ದರಾಮಯ್ಯ ಸವಾಲ್​ ಹಾಕಿದ್ದಾರೆ.


ಬೊಮ್ಮಾಯಿ, ಬಿಎಸ್​ವೈಗೆ ಸಿದ್ದು ಸವಾಲ್​


ಜನಸಂಕಲ್ಪ ಯಾತ್ರೆಯಲ್ಲಿ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರಿಗೂ ಎರಡು ಸವಾಲು ಹಾಕಿದ್ದಾರೆ. ಮೊದಲು ನೀವು ಕಾರು-ಜೀಪು ಬಿಟ್ಟು 4 ಕಿ.ಮೀ. ಎಡವದೆ ನಡೆದುಕೊಂಡು ಹೋಗಿ, ಬಳಿಕ ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಬಡಾಯಿ ಬೊಮ್ಮಾಯಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


Former CM Siddaramaiah lashed out at Yeddyurappa and CM Basavaraja Bommai.
ಮಾಜಿ ಸಿಎಂ ಸಿದ್ದರಾಮಯ್ಯ



ಬೊಮ್ಮಾಯಿಗೆ ಒಬ್ಬಂಟಿಯಾಗಿ ಯಾತ್ರೆ ಮಾಡುವ ಧೈರ್ಯವಿಲ್ಲ


ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.


ಜನ ನಿಮ್ಮ ದ್ರೋಹವನ್ನು ಮರೆಯಲಾರರು


ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ
ಬಿಎಸ್​ ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.



ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಕಾಲ ವ್ಯರ್ಥ


ಪಾಪ ಬಿ ಎಸ್​ ಯಡಿಯೂರಪ್ಪ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.

Published by:ಪಾವನ ಎಚ್ ಎಸ್
First published: