GST Rate Hike: ಊಟದ ತಟ್ಟೆಯಲ್ಲಿನ ಆಹಾರ ಕಿತ್ತುಕೊಳ್ತಿರೋದು ಬಡವರ ಹತ್ಯೆಗೆ ಸಮ: ಸಿದ್ದರಾಮಯ್ಯ ಆಕ್ರೋಶ

ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಇಂಚಿನ ಎದೆಯಳತೆಯ ಪ್ರಧಾನಿಗಳು ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
GST ಹೆಚ್ಚಳದಿಂದ ದಿನಬಳಕೆಯ ವಸ್ತುಗಳ ಬೆಲೆ (Price Hike) ಏರಿಕೆಯಾಗಿದೆ. ಈ ಕುರಿತು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Former CM Siddaramaiah) ಟ್ವೀಟ್ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ (BJP Government) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ (Tweet) ಮಾಡಿರುವ ಸಿದ್ದರಾಮಯ್ಯನವರು ಇಂದಿನ ಪತ್ರಿಕೆಯಲ್ಲಿ  (News paper) ಪ್ರಕಟವಾಗಿರುವ ಬೆಲೆ ಏರಿಕೆ ಕುರಿತ ಲೇಖನಗಳ ಫೋಟೋ ಹಂಚಿಕೊಂಡಿದ್ದಾರೆ. ಬಡವರ (Poor People) ಹೊಟ್ಟೆಗೆ ಒದೆಯುವುದೇ ಅಚ್ಚೇ ದಿನ್ (Achche Din) ಎಂದು ತಿಳಿದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಬಿಜೆಪಿ ಸರ್ಕಾರ ಊಟದ ತಟ್ಟೆಯಲ್ಲಿನ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಬಡವರ ಹತ್ಯೆಗೆ ಸಮನಾದ ಪಾಪ ಕರ್ಮ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ತರಕಾರಿ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿದಿದೆ. ಈ ಹೊತ್ತಿನಲ್ಲಿ ಬಡವರ ನೆರವಿಗೆ ಬರಬೇಕಾಗಿರುವ ಸರ್ಕಾರ ಅವರನ್ನು ಉಪವಾಸ ಬೀಳಿಸಿ ಸಾಯಿಸಲು ಹೊರಟಿದೆ. ಇಂತಹ ಕ್ರೌರ್ಯ ಫ್ಯಾಸಿಸ್ಟ್ ಮನಸ್ಸುಗಳಿಂದ ಮಾತ್ರ ಸಾಧ್ಯ ಎಂದು ಕಿಡಿ ಕಾರಿದ್ದಾರೆ.

ಇದು ಸೂಟ್ ಬೂಟ್ ಸರ್ಕಾರ ಅನ್ನೋದು ಸಾಬೀತು

ಬ್ರ್ಯಾಂಡೆಡ್ ಅಲ್ಲದ ಪ್ಯಾಕ್ ಮಾಡಲಾಗಿರುವ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ವಸ್ತುಗಳ ಮೇಲೆ ನರೇಂದ್ರ ಮೋದಿ  ಸರ್ಕಾರ GST ಹೇರಿರುವುದು ಬ್ರ್ಯಾಂಡೆಡ್ ವಸ್ತುಗಳ ಕಂಪನಿಗಳ ಒತ್ತಡಕ್ಕೆ ಮಣಿದು ಎನ್ನುವುದು ಸ್ಪಷ್ಟ. ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ಮತ್ತೆ ಮತ್ತೆ ಅವರು ಸಾಬೀತುಪಡಿಸುತ್ತಿದ್ದಾರೆ.

ಇದನ್ನೂ ಓದಿ:  Saffron Shawl: ಬೇಡ ಬೇಡ ಅಂದ್ರು ಕಾಂಗ್ರೆಸ್ ಶಾಸಕ ಬೈರತಿ ಸುರೇಶ್​ಗೆ ಕೇಸರಿ ಶಾಲು ಹಾಕಿದ ರಾಜೂಗೌಡ

ತೆರಿಗೆ ಹಣ ಕಕ್ಕಿಸಲು ಆಗದ ಸರ್ಕಾರ

ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಇಂಚಿನ ಎದೆಯಳತೆಯ ಪ್ರಧಾನಿಗಳು ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ.

Former CM Siddaramaiah Reacts on GST rate hike mrq
ಸಾಂದರ್ಭಿಕ ಚಿತ್ರ


ಸರ್ಕಾರದಿಂದ ತೆರಿಗೆ ಭಯೋತ್ಪಾದನೆ

ಕೇಂದ್ರ ಬಿಜೆಪಿ  ಸರ್ಕಾರದ ಈ ‘ತೆರಿಗೆ ಭಯೋತ್ಪಾದನೆಗೆ ಬಲಿಯಾಗಿರುವುದು ವಿರೋಧಪಕ್ಷಗಳ ಮತದಾರರು ಮಾತ್ರವಲ್ಲ, ಅಚ್ಚೇ ದಿನಗಳ ನಿರೀಕ್ಷೆಯಿಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿದ್ದ ಬಿಜೆಪಿಯ ಮತದಾರರಿಗೂ ಇದರಲ್ಲಿ ರಿಯಾಯಿತಿ-ವಿನಾಯಿತಿ ಏನಿಲ್ಲ. ಅವರು ಕೂಡಾ ಇದಕ್ಕೆ ಬಲಿಯಾಗಿದ್ದಾರೆ. ಬಡತನ ಜಾತಿ, ಧರ್ಮ, ಪಕ್ಷಗಳೆಲ್ಲವನ್ನೂ ಮೀರಿದ್ದು.

Former CM Siddaramaiah Reacts on GST rate hike mrq
ಸಾಂದರ್ಭಿಕ ಚಿತ್ರ


ಬ್ರ್ಯಾಂಡ್ ಗಳ ಬೆನ್ನತ್ತಿ ಹೋಗುತ್ತಿರುವ ಉಳ್ಳವರು, ಶ್ರೀಮಂತರು ಖರೀದಿಸುವ ವಸ್ತುಗಳ ಮೇಲೆ ತೆರಿಗೆ ಹೇರಿಕೆಗೆ ಕನಿಷ್ಠ ಸಮರ್ಥನೆ ಇದೆ. ಆದರೆ ಗುಡಿಕೈಗಾರಿಕೆಗಳ ರೂಪದಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಲಕ್ಷಾಂತರ ಕಿರು ಉದ್ಯಮಿಗಳಿಗೂ ಕೂಡಾ ಇದೊಂದು ದೊಡ್ಡ ಹೊಡೆತ.

ಇದನ್ನೂ ಓದಿ:  Milk-Curd Price: ಹಾಲು, ಮೊಸರು ಬೆಲೆ ಇಳಿಸಲು ಸೂಚನೆ ನೀಡುವೆ: ಸಿಎಂ ಬೊಮ್ಮಾಯಿ

ಅಚ್ಛೇ ದಿನಗಳ ಕನಸು ಕಂಡ್ರೆ ಬದುಕಿನ ನಾಶ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾವು-ಬದುಕಿನ ಪ್ರಶ್ನೆಯನ್ನು ದೇಶದ ಜನರ ಮುಂದಿಟ್ಟಿದೆ, ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಅನಾಚಾರಗಳನ್ನೆಲ್ಲ ಸಹಿಸಿಕೊಂಡು ಇನ್ನೂ ಅಚ್ಚೇ ದಿನಗಳ ಕನಸು ಕಂಡರೆ ಬದುಕಿನ ನಾಶ ಖಂಡಿತ. ಕಾಲ ಮಿರಿಹೋಗುತ್ತಿದೆ, ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ಟ್ವೀಟ್ ಮಾಡಿ ಕೊನೆಗೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡಿದ್ದಾರೆ.
Published by:Mahmadrafik K
First published: