ಸಾಧನೆಯ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನವಲ್ಲ; ಅಭಿವೃದ್ಧಿಯೇ ಆಗಿಲ್ಲ ಎಂದವರಿಗೆ ಸಿದ್ದರಾಮಯ್ಯ ತಿರುಗೇಟು

ಸಿದ್ದರಾಮಯ್ಯ ಕ್ಷೇತ್ರಕ್ಕೆ ಭೇಟಿಯನ್ನೇ ನೀಡುತ್ತಿಲ್ಲ, ಇಲ್ಲಿ ಅಭಿವೃದ್ಧಿ ಕೆಲಸಗಳೇ ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ಟ್ಯಾಗ್​ ಮಾಡಿ ಬಾದಾಮಿ ಕ್ಷೇತ್ರದ ಅನೇಕರು ಟ್ವೀಟ್​ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ.

Rajesh Duggumane | news18
Updated:June 18, 2019, 2:49 PM IST
ಸಾಧನೆಯ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನವಲ್ಲ; ಅಭಿವೃದ್ಧಿಯೇ ಆಗಿಲ್ಲ ಎಂದವರಿಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ
Rajesh Duggumane | news18
Updated: June 18, 2019, 2:49 PM IST
ಬೆಂಗಳೂರು (ಜೂ. 18): ಸಿದ್ದರಾಮಯ್ಯನವರೇ ನೀವು ಬಾದಾಮಿಗೆ ಅತಿಥಿ ಶಾಸಕರಾಗಬೇಡಿ ಎಂದು ಈತ್ತೀಚೆಗೆ ಕ್ಷೇತ್ರದ ಮತದಾರನೋರ್ವ ಟ್ವೀಟ್​ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದ್ದು, ಸಾಧನೆಯ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನ ಅಲ್ಲ ಎಂದು ಹೇಳಿ ತಾವು ಮಾಡಿರುವ ಅಭಿವೃದ್ಧಿ ಕೆಲಸಗಳ ಪಟ್ಟಿಯನ್ನು ಬಿಚ್ಚಿಟ್ಟಿದ್ದಾರೆ.

ಸಿದ್ದರಾಮಯ್ಯ ಕ್ಷೇತ್ರಕ್ಕೆ ಭೇಟಿಯನ್ನೇ ನೀಡುತ್ತಿಲ್ಲ, ಇಲ್ಲಿ ಅಭಿವೃದ್ಧಿ ಕೆಲಸಗಳೇ ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ಟ್ಯಾಗ್​ ಮಾಡಿ ಬಾದಾಮಿ ಕ್ಷೇತ್ರದ ಅನೇಕರು ಟ್ವೀಟ್​ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. “ಸಾಧನೆಯ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನ ಅಲ್ಲ. ಶಾಸಕನಾಗಿ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ. ಇದು ಕ್ಷೇತ್ರದ ಮತದಾರರಿಗೆ ತಿಳಿದಿದೆ. ಈ ಬಗ್ಗೆ ರಾಜಕೀಯ ವಾಗ್ವಾದ‌ ಮಾಡುವುರಲ್ಲಿ ನನಗೆ ಆಸಕ್ತಿ ಇಲ್ಲ,” ಎಂದು ಅವರು ತಿರುಗೇಟು ನೀಡಿದರು.


Loading...

“ನಾನು ಬಾದಾಮಿಯ ಶಾಸಕನಾಗಿ ಆಯ್ಕೆಯಾದ ನಂತರದಲ್ಲಿ ಕಳೆದ ಒಂದು ವರ್ಷದಿಂದ ಸುಮಾರು 50ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಕುಂದು ಕೊರತೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಜನರ ಜತೆಗಿನ ಸಂಪರ್ಕವನ್ನು ನಿರಂತರವಾಗಿ ಕಾಯ್ದುಕೊಳ್ಳಲು ಬಾದಾಮಿ ಪಟ್ಟಣದಲ್ಲಿ ಗೃಹ ಕಚೇರಿಯನ್ನು ಸಹ ಆರಂಭಿಸಿದ್ದೇನೆ,” ಎಂದು ಅಭಿವೃದ್ಧಿ ಕೆಲಸಗಳ ಬಗ್ಗೆ ಹೇಳಿಕೊಂಡರು.ಇದನ್ನೂ ಓದಿ: ದಿಢೀರ್​ ಎಂದು ದೆಹಲಿಗೆ ತೆರಳಿದ ಸಿದ್ದರಾಮಯ್ಯ; ಮಾಜಿ ಸಿಎಂ ಮೇಲೆ ಮುನಿಸಿಕೊಂಡಿತಾ ಹೈಕಮಾಂಡ್?

“ಕಳೆದ ಒಂದು ವರ್ಷದಲ್ಲಿ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಯೋಜನೆಗಳನ್ನು ಕಂಡಿದೆ. ನೀರಾವರಿ, ರಸ್ತೆ, ಪ್ರವಾಸೋದ್ಯಮ, ಮೂಲ ಸೌಲಭ್ಯ ಅಭಿವೃದ್ಧಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಒಂದೇ ವರ್ಷದ ಅವಧಿಯಲ್ಲಿ ರೂ.1,300 ಕೋಟಿಗೂ ಅಧಿಕ ಮೊತ್ತದ ಕಾಮಗಾರಿ ನಡೆಯುತ್ತಿದೆ,” ಎಂದು ಮುಂದಾಗುತ್ತಿರುವ ಅಭಿವೃದ್ಧಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೊಂಡರು.First published:June 18, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...