ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ್ಧಾಂತಿಕವಾಗಿ ದಿವಾಳಿಯಾಗಿದೆ : ಸಿದ್ದರಾಮಯ್ಯ

ಬಿಜೆಪಿಗೆ ಕಲ್ಲಡ್ಕ ಶಾಲೆಯಲ್ಲಿ ಮಕ್ಕಳು ಬಾಬರಿ ಮಸೀದಿ ಧ್ವಂಸದ ಕಾರ್ಯಾಚರಣೆಯ ಪ್ರದರ್ಶನ ನೀಡಿ ನೆಲದ ಕಾನೂನನ್ನು ಉಲ್ಲಂಘಿಸಿದ ಮತ್ತು ನ್ಯಾಯಾಲಯವನ್ನು ಅಣಕ ಮಾಡಿದ ಕಿಡಿಗೇಡಿತನ ದೇಶದ್ರೋಹವಾಗಿ ಕಾಣುತ್ತಿಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.

news18-kannada
Updated:February 14, 2020, 4:42 PM IST
ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ್ಧಾಂತಿಕವಾಗಿ ದಿವಾಳಿಯಾಗಿದೆ : ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
  • Share this:
ಬೆಂಗಳೂರು(ಫೆ.06) : ಮಕ್ಕಳು, ಹೆತ್ತವರ ಮೇಲೆ ಛೂ ಬಿಟ್ಟು ಹಿಂಸಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯವಾಗಿದ್ದು, ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ್ಧಾಂತಿಕವಾಗಿ ದಿವಾಳಿಯಾಗಿದೆ ಎಂದು ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಬೀದರ್ ಶಾಲೆಯ ಮಕ್ಕಳು ನಾಟಕದಲ್ಲಿ ದೇಶದ್ರೋಹ ಕಂಡು ಕುರುಡು. ಬಿಜೆಪಿಗೆ ಕಲ್ಲಡ್ಕ ಶಾಲೆಯಲ್ಲಿ ಮಕ್ಕಳು ಬಾಬರಿ ಮಸೀದಿ ಧ್ವಂಸದ ಕಾರ್ಯಾಚರಣೆಯ ಪ್ರದರ್ಶನ ನೀಡಿ ನೆಲದ ಕಾನೂನನ್ನು ಉಲ್ಲಂಘಿಸಿದ ಮತ್ತು ನ್ಯಾಯಾಲಯವನ್ನು ಅಣಕ ಮಾಡಿದ ಕಿಡಿಗೇಡಿತನ ದೇಶದ್ರೋಹವಾಗಿ ಕಾಣುತ್ತಿಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.


ಹೌದು, ಸರ್ವಾಧಿಕಾರಿ ದುರ್ಬಲನಾದಷ್ಟು ಕ್ರೂರಿಯಾಗುತ್ತಾನೆ. ದೆಹಲಿ ವಿಶ್ವವಿದ್ಯಾಲಯಗಳಿಗೆ ಪೊಲೀಸರನ್ನು ನುಗ್ಗಿಸಿದ, ಶಾಂತಿಯುತ ಪ್ರತಿಭಟನೆಕಾರರ ಮೇಲೆ ಗುಂಡು ಹಾರಿಸಲು ಪ್ರಚೋದನೆ ನೀಡಿದ ಸರ್ವಾಧಿಕಾರಿ ಮನಸ್ಸೇ ಬೀದರ್ ನಲ್ಲಿ ಪುಟ್ಟಮಕ್ಕಳ ಮೇಲೆ ಸೇಡು ತೀರಿಸಲು ಹೊರಟಿದೆ.

ಬೀದರ್ ನ ಶಾಹಿನ್ ವಿದ್ಯಾಸಂಸ್ಥೆ,ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲೆ ದಾಖಲಿಸಿರುವ ದೇಶದ್ರೋಹದ ಪ್ರಕರಣವನ್ನು ಪೊಲೀಸರು ತಕ್ಷಣ ವಾಪಸು ಪಡೆಯಲು ಆಗ್ರಹಿಸುತ್ತಿದ್ದೇನೆ. ಭ್ರಷ್ಟರನ್ನು ಖರೀದಿಸಿ ಅಧಿಕಾರದಲ್ಲಿರುವ ಸರ್ಕಾರ, ಜನವಿರೋಧಿ ಕೃತ್ಯಕ್ಕಿಳಿದರೆ ನಿರೀಕ್ಷೆಗಿಂತ ಮೊದಲೇ ನಾಶವಾಗಲಿದೆ.ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರಕರಣದ ಹಿನ್ನೆಲೆ ಇಂದು  ಶಾಹೀನ್ ಶಿಕ್ಷಣ ಸಂಸ್ಥೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ ನೀಡಿದರು. ಪಾತ್ರ ಮಾಡಿದ್ದ ಬಾಲಕಿಯನ್ನು ಭೇಟಿ ಮಾಡಿದ ಅವರು,  ಹೆದರುವ ಅಗತ್ಯವಿಲ್ಲ ನಾವು ನಿನ್ನ ಜೊತೆಗಿದ್ದೇವೆ ಎಂದು ಧೈರ್ಯ ತುಂಬಿದರು. ಈ ವೇಳೆ ಬಾಲಕಿಯ ವಿದ್ಯಾಭ್ಯಾಸದ ಬಗ್ಗೆ ಕೇಳಿದ ಖಂಡ್ರೆ ಬಾಲಕಿಗೆ ಕನ್ನಡವನ್ನು ಕಲಿಯುವಂತೆ ತಿಳಿಸಿದರು.

ಇದನ್ನೂ ಓದಿ :  ಅದೇ ಖಾತೆ, ಅದೇ ಕೊಠಡಿಗೆ ಪಟ್ಟು: ಡಿಕೆಶಿ ಮೇಲಿನ ಸೇಡು ಬಿಟ್ಟಿಲ್ಲವಾ ರಮೇಶ್ ಜಾರಕಿಹೊಳಿ?

ಸಿಎಎ ಟೀಕಿಸಿ ಬೀದರ್​ ಶಾಲೆಯಲ್ಲಿ ಮಾಡಲಾದ ನಾಟಕ ಸಂಬಂಧ ಬೀದರ್ ಪೊಲೀಸರು ಶಾಲೆಯ ಮಕ್ಕಳು ಮತ್ತು ಸಿಬ್ಬಂದಿಯನ್ನು ವಿಚಾರಣೆ ಮಾಡಿರುವ ಘಟನೆಗೆ ಮಾಜಿ ರಾಜ್ಯಪಾಲೆ ಮತ್ತು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದಾರೆ.
First published: February 6, 2020, 3:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading