ಬೆಂಗಳೂರು: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election 2023) ಒಂದು ಹಂತದ ತೆರೆ ಬಿದ್ದಿದೆ. ಮತದಾನ ಪ್ರಕ್ರಿಯೆ (Voting Process) ಮುಕ್ತಾಯಗೊಂಡಿದ್ದು, ಶನಿವಾರ ಫಲಿತಾಂಶ (Karnataka Election Results) ಪ್ರಕಟವಾಗಲಿದೆ. ಕಳೆದ ಒಂದು ತಿಂಗಳಿನಿಂದ ಚುನಾವಣಾ ಪ್ರಚಾರದಲ್ಲಿ (Election Campaign) ತೊಡಗಿದ್ದ ರಾಜಕೀಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ರಿಲ್ಯಾಕ್ಸ್ ಮೂಡ್ನಲ್ಲಿದ್ದಾರ. ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಪಕ್ಷದ ಕಾರ್ಯಕರ್ತರು (Congress Activist) ಮತ್ತು ಅಭಿಮಾನಿಗಳಿಗೆ (Fans) ಧನ್ಯವಾದ ತಿಳಿಸಿದ್ದಾರೆ.
ಸಿದ್ದರಾಮಯ್ಯ ಧನ್ಯವಾದ ಪೋಸ್ಟ್
ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು.
ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರಲ್ಲೆರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ.
ಹೃದಯಪೂರ್ವಕ ಕೃತಜ್ಞತೆಗಳು
ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಬರೆದುಕೊಂಡಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ. ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: Viral Post: ಯಾರ ಹೆಂಡ್ತಿ ಪತಿವ್ರತೆ ಅವರೆಲ್ಲಾ ಬಿಜೆಪಿಗೆ ವೋಟ್ ಹಾಕಿ; ಬಜರಂಗದಳ ಕಾರ್ಯಕರ್ತನ ವಾಟ್ಸಪ್ ಸ್ಟೇಟಸ್
ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ ಎಂದು ಹೇಳಿ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ