ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಂಗಳೂರಿಗೆ (Bengaluru) ಆಗಮಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಿನ್ನೆಯಿಂದಲೇ ಬಿಜೆಪಿ (BJP) ಸ್ವಾಗತ ಕೋರುತ್ತಿದೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗದುದ್ದಕ್ಕೂ ಬಿಜೆಪಿ ಧ್ವಜಗಳನ್ನು (BJP Flags) ಹಾಕಲಾಗಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕಾಂಗ್ರೆಸ್ (Congress) ಸಾಧನೆಗಳನ್ನು ಹೇಳಿ ಸ್ವಾಗತಿಸಿದ್ದಾರೆ. ಮೊದಲ ದಿನವಾದ ಇಂದು ಬೆಳಗ್ಗೆ ಅವರು ಮೆದುಳಿನ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಐಐಎಸ್ಸಿಯಲ್ಲಿ ಬಾಗ್ಚಿ-ಪಾರ್ಥಸಾರಥಿ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಅಡಿಪಾಯವನ್ನು ಹಾಕುತ್ತಾರೆ. ನಂತರ ಮೋದಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ನ ಹೊಸ ಕ್ಯಾಂಪಸ್ ಅನ್ನು ಪ್ರಾರಂಭಿಸಲಿದ್ದಾರೆ.
ಸಿದ್ದರಾಮಯ್ಯ ಟ್ವೀಟ್
ಐದು ವರ್ಷಗಳ ಹಿಂದೆ (4-10-2017)ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು.
ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್.
ಕಾಂಗ್ರೆಸ್ ಸರ್ಕಾರದ ಯೋಜನೆ
ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಸ್ಥಾಪನೆಗೆ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದ ನಮ್ಮ ಸರ್ಕಾರ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಳಿಸಿತ್ತು.
2017ರಲ್ಲಿಯೇ ತರಗತಿ ಪ್ರಾರಂಭ
BASE ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು 6 ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ. ಜ್ಞಾನಭಾರತಿ ಕ್ಯಾಂಪಸ್ ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್ ನಲ್ಲಿ http://B.Sc(Honours) Economics ತರಗತಿಗಳು ಪ್ರಾರಂಭವಾಗಿತ್ತು.
ಇದನ್ನೂ ಓದಿ: Assembly Election: 2023ಕ್ಕೆ ಚನ್ನಪಟ್ಟಣ ಕ್ಷೇತ್ರ ತೊರೆಯುತ್ತಾರಾ? ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಪ್ರಧಾನಿ ಏನು ಮಾಡುತ್ತಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ
1) ಬೆಂಗಳೂರು ಉಪನಗರ ರೈಲು ಯೋಜನೆಗೆ (BSRP) ಚಾಲನೆ. 15,700 ಕೋಟಿ ರೂ.ಗಳ ಯೋಜನೆಯು 148-ಕಿಮೀ ಉದ್ದದ ಮಾರ್ಗದ ನಾಲ್ಕು ಕಾರಿಡಾರ್ಗಳನ್ನು ಹೊಂದಿರುತ್ತದೆ.
2) ಬೆಂಗಳೂರು ಕ್ಯಾಂಟ್ ಮತ್ತು ಯಶವಂತಪುರ ಜಂಕ್ಷನ್ ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಕ್ರಮವಾಗಿ 500 ಕೋಟಿ ಮತ್ತು 375 ಕೋಟಿ ರೂ. ಮಂಜೂರು
3) ಬೈಯಪ್ಪನಹಳ್ಳಿಯಲ್ಲಿ ಭಾರತದ ಮೊದಲ ಎಸಿ ರೈಲು ನಿಲ್ದಾಣ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಉದ್ಘಾಟನೆ. 315 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ವಿಮಾನ ನಿಲ್ದಾಣದ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.
4) ಉಡುಪಿ, ಮಡಗಾಂವ್ ಮತ್ತು ರತ್ನಗಿರಿಯಿಂದ ಎಲೆಕ್ಟ್ರಿಕ್ ರೈಲುಗಳನ್ನು ಫ್ಲ್ಯಾಗ್ ಮಾಡುವ ಮೂಲಕ ರೋಹಾ (ಮಹಾರಾಷ್ಟ್ರ) ದಿಂದ ತೋಕೂರ್ (ಕರ್ನಾಟಕ) ವರೆಗೆ ಕೊಂಕಣ ರೈಲು ಮಾರ್ಗದ (ಸುಮಾರು 740 ಕಿಮೀ) 100% ವಿದ್ಯುದ್ದೀಕರಣ ಆರಂಭ
ಇದನ್ನೂ ಓದಿ: PM Modi: ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ ಸೂಚಿಸಿದ ಪೊಲೀಸರು
5) ಎರಡು ರೈಲು ಮಾರ್ಗ ದ್ವಿಗುಣಗೊಳಿಸುವ ಯೋಜನೆಗಳಿಗೆ ಚಾಲನೆ. ಅರಸೀಕೆರೆಯಿಂದ ತುಮಕೂರು (ಸುಮಾರು 96 ಕಿಮೀ) ಮತ್ತು ಯಲಹಂಕದಿಂದ ಪೆನುಕೊಂಡ (ಸುಮಾರು 120 ಕಿಮೀ) ಕ್ರಮವಾಗಿ ಪ್ಯಾಸೆಂಜರ್ ರೈಲುಗಳು ಮತ್ತು MEMU ಸೇವೆಗಳನ್ನು ಫ್ಲ್ಯಾಗ್ ಮಾಡುವ ಮೂಲಕ.
6) ಬೆಂಗಳೂರು ರಿಂಗ್ ರೋಡ್ ಯೋಜನೆಯ ಎರಡು ವಿಭಾಗಗಳಲ್ಲಿ ಚಾಲನೆ. ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 2280 ಕೋಟಿ ರೂ. ವಿನಿಯೋಗ.
7) NH-48 ರ ನೆಲಮಂಗಲ-ತುಮಕೂರು ವಿಭಾಗದ ಆರು ಲೇನಿಂಗ್ಗೆ ಚಾಲನೆ. NH-73 ರ ಪುಂಜಾಲಕಟ್ಟೆ-ಚಾರ್ಮಾಡಿ ವಿಭಾಗದ ಅಗಲೀಕರಣ.
8) ಬೆಂಗಳೂರಿನಿಂದ 40 ಕಿಮೀ ದೂರದಲ್ಲಿರುವ ಮುದ್ದಲಿಂಗನಹಳ್ಳಿಯಲ್ಲಿ Rs 1800 ಕೋಟಿ ವೆಚ್ಚದ ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್ಗೆ ಶಂಕುಸ್ಥಾಪನೆ. ಇದು ಸಾರಿಗೆ, ನಿರ್ವಹಣೆ ಮತ್ತು ದ್ವಿತೀಯ ಸರಕು ಸಾಗಣೆ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ