Mysore: ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

ಅನಾರೋಗ್ಯದಿಂದ ಬಳಲುತ್ತಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ನಿಧನರಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ

ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ

  • Share this:
ಮೈಸೂರು(ಆ.27):  ಮಾಜಿ ಸಿಎಂ ಸಿದ್ದರಾಮಯ್ಯ (Former Chief Minister Siddaramaiah), ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ನಿಧನರಾಗಿದ್ದಾರೆ. ಮೈಸೂರಿನ ಸಿದ್ದರಾಮಯ್ಯನಹುಂಡಿ ಗ್ರಾಮದ ನಿವಾಸಿಯಾಗಿದ್ದ ರಾಮೇಗೌಡರಿಗೆ 67 ವರ್ಷ ವಯಸ್ಸು. ಕೃಷಿಕರಾಗಿದ್ದ ಅವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಗುರುವಾರವಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಿ ತಮ್ಮ ಸಹೋದರನ ಆರೋಗ್ಯ ವಿಚಾರಿಸಿದ್ದರೆಂಬುವುದು ಉಲ್ಲೇಖನೀಯ.

ಇದನ್ನೂ ಓದಿ: Siddaramaiah: ಸಿದ್ದರಾಮಯ್ಯ ವಯಸ್ಸು 73, 74 ಅಥವಾ 75? ಸಾಮಾಜಿಕ ಮಾಧ್ಯಮಗಳಲ್ಲೀಗ ಹೊಸ ಚರ್ಚೆ!

ಬಸವರಾಜ ಬೊಮ್ಮಾಯಿ ಸಂತಾಪ

ರಾಮೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.ಸರಳಜೀವಿ ರಾಮೇಗೌಡ

ಅತ್ಯಂತ ಸರಳಜೀವಿಯಾಗಿದ್ದ ರಾಮೇಗೌಡರು ಕೃಷಿ ಮಾಡಿ ಬದುಕು ಸಾಗಿಸುತ್ತಿದ್ದರು. ತಮ್ಮ ಸಹೋದರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ಸಾಮಾನ್ಯರಂತೇ ಬದುಕು ಸಾಗಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಲೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೂ ರಾಮೇಗೌಡರು ಗೈರಾಗಿದ್ದರು. ಕಾಲು ನೋವಿನಿಂದಾಗಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಿರಲಿಲ್ಲ.


ಇದೇ ವೇಳೆ ಸಿದ್ದರಾಮಯ್ಯ ಸಹೋದರನ ಸರಳತೆಗೆ ಸಾಕ್ಷಿ ಎಂಬಂತೆ ವಿಡಿಯೋ ಒಂದು ವೈರಲ್ ಆಗುತ್ತಿದೆ.


ಇದನ್ನೂ ಓದಿ: Siddaramaiah Tweet: ಮೊಟ್ಟೆ ಎಸೆದವ ಕಾಂಗ್ರೆಸ್‌ನವನಾಗಿದ್ರೆ ಜೈಲಿಗೆ ಕಳಿಸಿ! ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್

ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಹೋದರರು ಇದ್ದಾರೆ. ಮೈಸೂರು ಜಿಲ್ಲೆಯ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶನಿವಾರ ರಾಮೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ತದನಂತರ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Published by:Precilla Olivia Dias
First published: