ಇನ್ನೆರಡು ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ; ದೆಹಲಿಯತ್ತ ಸಿದ್ದರಾಮಯ್ಯ

ಕರ್ನಾಟಕ ಉಪಚುನಾವಣೆ ಸೋಲಿನ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೂ, ಇಲ್ಲಿಯವರೆಗೂ ಹೈಕಮಾಂಡ್​ ಅಂಗೀಕರಿಸಿಲ್ಲ. ಹೀಗಾಗಿ ಈ ಸ್ಥಾನದಲ್ಲಿ ಸಿದ್ದರಾಮಯ್ಯರನ್ನೇ ಮುಂದುವರಿಸುವ ಸಾಧ್ಯತೆ ಇದೆ. ಈ ಮಧ್ಯೆ ಸಿದ್ದರಾಮಯ್ಯರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ನೀಡಬೇಕೆಂದು ತಮ್ಮ ಬೆಂಬಲಿಗರು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.

news18-kannada
Updated:January 13, 2020, 9:20 AM IST
ಇನ್ನೆರಡು ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ; ದೆಹಲಿಯತ್ತ ಸಿದ್ದರಾಮಯ್ಯ
ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್​
  • Share this:
ಬೆಂಗಳೂರು(ಜ.13): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದಿನೇಶ್​​ ಗುಂಡೂರಾವ್​​ ರಾಜೀನಾಮೆಯಿಂದ ತೆರವಾಗಿದ್ದ ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳಿಗೆ ಯಾರನ್ನಾದರೂ ಇನ್ನೆರಡು ದಿನಗಳಲ್ಲಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಜತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಭಾವಿ ಮುಖಂಡನೋರ್ವನನ್ನು ನೇಮಿಸಲು ಹೈಕಮಾಂಡ್​​ ಚಿಂತಿಸಿದೆ. ಹಾಗಾಗಿಯೇ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಈ ವಿಚಾರವಾಗಿಯೇ ಸಿದ್ದರಾಮಯ್ಯರನ್ನು ಹೈಕಮಾಂಡ್​​ ದೆಹಲಿಗೆ ಕೆರಸಿಕೊಳ್ಳುತ್ತಿದ್ದಾರೆ.

ಕರ್ನಾಟಕ ಉಪಚುನಾವಣೆ ಸೋಲಿನ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೂ, ಇಲ್ಲಿಯವರೆಗೂ ಹೈಕಮಾಂಡ್​ ಅಂಗೀಕರಿಸಿಲ್ಲ. ಹೀಗಾಗಿ ಈ ಸ್ಥಾನದಲ್ಲಿ ಸಿದ್ದರಾಮಯ್ಯರನ್ನೇ ಮುಂದುವರಿಸುವ ಸಾಧ್ಯತೆ ಇದೆ. ಈ ಮಧ್ಯೆ ಸಿದ್ದರಾಮಯ್ಯರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ನೀಡಬೇಕೆಂದು ತಮ್ಮ ಬೆಂಬಲಿಗರು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೇ ಮಾಜಿ ಸಚಿವ ಡಿ.ಕೆ ಶಿವಕುಮಾರ್​​​​​ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಒಕ್ಕಲಿಗರ ಬದಲಿಗೆ ಲಿಂಗಾಯತರಿಗೆ ಮಣೆ ಹಾಕಲು ಕಾಂಗ್ರೆಸ್​​​ ಹೈಕಮಾಂಡ್​​ ನಿರ್ಧರಿಸಿದೆ ಎಂದು ಹೇಳಲಾಗುತ್ತಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಎಲ್ಲೆಡೆಯೂ ವರದಿಯಾಗಿತ್ತು.

ಹೌದು, ಬಿಜೆಪಿ ಬೆಂಬಲಕ್ಕೆ ನಿಂತಿರುವ ಲಿಂಗಾಯತರ ಸೆಳೆಯಲು ಕಾಂಗ್ರೆಸ್​​ ಹೈಕಮಾಂಡ್ ಈ ಮಾಸ್ಟರ್​​ ಪ್ಲಾನ್​​ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್​​​​ ಯಡಿಯೂರಪ್ಪಗೆ ಲಿಂಗಾಯತ ಸಮುದಾಯದಲ್ಲಿ ಪರ್ಯಾಯ ನಾಯಕರ ಬೆಳೆಸುವ ಪ್ರಯತ್ನವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂಉತ್ತರ ಕರ್ನಾಟಕ ಭಾಗದವರಿಗೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಚಿಂತನೆ ನಡೆಸಲಾಗಿದೆ. ಈ ನಿರ್ಧಾರದ ಹಿಂದೆ ಸಿದ್ಧರಾಮಯ್ಯ ಬಣದ ಕೈವಾಡವಿರಬಹುದು ಎನ್ನುತ್ತಿವೆ ಮೂಲಗಳು.

ಇದನ್ನೂ ಓದಿ: ಜೆಎನ್​​​ಯು ಹಿಂಸಾಚಾರ ಕೇಸ್​: ಮುಸುಕುಧಾರಿ ಮಹಿಳೆ ಸೇರಿದಂತೆ 49 ಮಂದಿಗೆ ಪೊಲೀಸ್​​ ನೋಟಿಸ್‌

ಇತ್ತೀಚೆಗಷ್ಟೇ ಡಿ.ಕೆ ಶಿವಕುಮಾರ್​​ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುತ್ತೇವೆ ಎಂದು ಮಾತು ಕೊಟ್ಟು ಕಾಂಗ್ರೆಸ್​​ ಹೈಕಮಾಂಡ್​​ ಪೇಚಿಗೆ ಸಿಲುಕಿದೆ ಎಂಬ ಮಾತುಗಳು ರಾಜಕೀಯದಲ್ಲಿ ಕೇಳಿ ಬರುತ್ತಿದ್ದವು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್​​ ಜೈಲಿನಿಂದ ಬಿಡುಗಡೆಯಾಗುವ ವೇಳೆ ಹೈಕಮಾಂಡ್​​ ಸೋನಿಯಾ ಗಾಂಧಿ ಅವರನ್ನು ಡಿ.ಕೆ ಶಿವಕುಮಾರ್​​ ಭೇಟಿಯಾಗಿದ್ದರು. ಆಗ ಡಿ.ಕೆ ಶಿವಕುಮಾರ್​​ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡುವುದಾಗಿ ಹೈಕಮಾಂಡ್​​ ಭರವಸೆ ನೀಡಿದ್ದರು. ಆದರೀಗ ಡಿ.ಕೆ ಶಿವಕುಮಾರ್​​ಗೆ ಕರ್ನಾಟಕ ಪ್ರಾದೇಶಿಕ ಸಮಿತಿ ಅಧ್ಯಕ್ಷ ಸ್ಥಾನ ನೀಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡ್ಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ವಾರದ ಹಿಂದೆ ಡಿ.ಕೆ ಶಿವಕುಮಾರ್​​ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದರು ಎನ್ನಲಾಗುತ್ತಿದೆ.

ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ಹೆಸರು ಹೈಕಮಾಂಡ್​ ಪ್ರಸ್ತಾಪ ಮಾಡಲಿದ್ದಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಸಿದ್ದರಾಮಯ್ಯ ಮಾಸ್ಟರ್​​ ಪ್ಲಾನ್​​ ಮಾಡಿದ್ದರು ಎನ್ನಲಾಗಿತ್ತು. ತನ್ನ ಆಪ್ತರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಸಿದ್ದರಾಮಯ್ಯ ಆಪ್ತರ ಹೆಸರುಗಳನ್ನುಮುಂಚೂಣಿಗೆ ತರುವಲ್ಲಿ ಯಶಸ್ವಿಯೂ ಆಗಿದ್ದರು.
First published:January 13, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ