ಜೆಡಿಎಸ್​​ಗೆ ರಮೇಶ್​ ಬಾಬು ವಿದಾಯ; ಅವರ ಮುಂದಿನ ಹಾದಿ ರಹಸ್ಯ

ರಮೇಶ್​ ಬಾಬು ಈ ಹಿಂದೆ ಶಿಕ್ಷಕರ ಕ್ಷೇತ್ರದ ಎಂಎಲ್​ಸಿ ಆಗಿದ್ದರು. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಗೆ ರಮೇಶ್​ಬಾಬು ಆಪ್ತರಾಗಿದ್ದರು. ಈಗ ಟಿಕೆಟ್​ ಕೈತಪ್ಪಿದ ಹಿನ್ನೆಲೆ, ದಾವಣಗೆರೆಯಲ್ಲಿ ಜೆಡಿಎಸ್​ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.

ರಮೇಶ್ ಬಾಬು

ರಮೇಶ್ ಬಾಬು

 • Share this:
  ದಾವಣಗೆರೆ(ಮಾ.07): ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್​ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದಾರೆನ್ನಲಾದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್​ ಬಾಬು ಇಂದು ಪಕ್ಷದ​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

  ರಮೇಶ್​ ಬಾಬು ಈಗಾಗಲೇ ಜೆಡಿಎಸ್​ ವರಿಷ್ಠ ಎಚ್.ಡಿ. ದೇವೇಗೌಡರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು ಜೆಡಿಎಸ್​ ನಾಯಕರ ವರ್ತನೆಗೆ ಬೇಸರ ವ್ಯಕ್ತಪಡಿಸಿದರು. "ಪಕ್ಷದಲ್ಲಿ ಪ್ರಾಮಾಣಿಕರಿಗೆ ಸರಿಯಾದ ಅವಕಾಶ ಸಿಗಲಿಲ್ಲ. ಪೂರ್ಣಾವಧಿಗೂ ಅವಕಾಶ ಇಲ್ಲ. ಕಾರ್ಯಕರ್ತರಿಗೂ ಸಹ ಯಾವುದೇ ಅವಕಾಶ ಸಿಗುತ್ತಿಲ್ಲ. ಜೆಡಿಎಸ್​ ದಿನೇ ದಿನೇ ರಾಜಕೀಯ ಗುಣ ಕಳೆದುಕೊಳ್ಳುತ್ತಿದೆ" ಎಂದು ಹೇಳಿದರು.

  ರಾಜೀನಾಮೆ ಪತ್ರ


  ಮುಂದುವರೆದ ಅವರು, "ನಾನು ಮತ್ತೆ ಜೆಡಿಎಸ್​​ಗೆ ಯಾವುದೇ ಕಾರಣಕ್ಕೂ ಹೋಗಲ್ಲ. ಬೇರೆ ಪಕ್ಷಕ್ಕೆ ಹೋಗುವ ಪ್ರಯತ್ನವಿದೆ. ಆದರೆ ಈ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಸದ್ಯಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ನನ್ನ ಭಾವನೆಗೆ ತಕ್ಕಂತೆ ಪಕ್ಷ ಆಯ್ಕೆ ಮಾಡಿಕೊಳ್ಳುತ್ತೇನೆ. ಈ ಜೆಡಿಎಸ್​ ಪಕ್ಷದಿಂದ ನನಗೆ ಬೇಸರ ಆಗಿದೆ. ಯಾವ ಪಕ್ಷ ಸೇರ್ಪಡೆಯಾಗುತ್ತೇನೆ ಎಂಬುದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ" ಎಂದರು.

  ರಮೇಶ್​ ಬಾಬು ಈ ಹಿಂದೆ ಶಿಕ್ಷಕರ ಕ್ಷೇತ್ರದ ಎಂಎಲ್​ಸಿ ಆಗಿದ್ದರು. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಗೆ ರಮೇಶ್​ಬಾಬು ಆಪ್ತರಾಗಿದ್ದರು. ಈಗ ಟಿಕೆಟ್​ ಕೈತಪ್ಪಿದ ಹಿನ್ನೆಲೆ, ದಾವಣಗೆರೆಯಲ್ಲಿ ಜೆಡಿಎಸ್​ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.
  First published: