HOME » NEWS » State » FORMER MINISTER BASAVARAJ RAYAREDDY TOOK DIG OUT AT CM BS YEDIYURAPPA GNR

’ದಿವಾಳಿಯಾಗಿ ಅದೋಗತಿಗೆ ತಲುಪಿದ ರಾಜ್ಯ ಸರ್ಕಾರ‘ - ಮಾಜಿ ಸಚಿವ ಬಸವರಾಜ ರಾಯರೆಡ್ಡಿ

ಯಡಿಯೂರಪ್ಪ ಮತ್ತವರ ಮಕ್ಕಳು ಭ್ರಷ್ಟಾಚಾರ ಮಾಡಿದ್ದಾರೆ. ಇವರು ಅಧಿಕಾರವನ್ನ ಬಿಟ್ಟು ಹೋಗುವುದೇ ಒಳ್ಳೆಯದು. ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳು ಶಾಮೀಲಾಗಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಒಂದು ವೇಳೆ ಡ್ರಗ್ಸ್ ಜಾಲದಲ್ಲಿ ಕಾಂಗ್ರೆಸ್ ನಾಯಕರ ಹೆಸರು ಕೇಳಿ ಬಂದ್ರೆ ಅಂತಹವರನ್ನು ಪಕ್ಷದಿಂದ ಕಿತ್ತು ಹಾಕಿ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಒತ್ತಾಯ ಮಾಡುತ್ತೇನೆ ಎಂದರು ಬಸವರಾಜ ರಾಯರೆಡ್ಡಿ.

news18-kannada
Updated:September 19, 2020, 8:45 PM IST
’ದಿವಾಳಿಯಾಗಿ ಅದೋಗತಿಗೆ ತಲುಪಿದ ರಾಜ್ಯ ಸರ್ಕಾರ‘ - ಮಾಜಿ ಸಚಿವ ಬಸವರಾಜ ರಾಯರೆಡ್ಡಿ
ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ
  • Share this:
ಹುಬ್ಬಳ್ಳಿ(ಸೆ.19): ರಾಜ್ಯ ಸರ್ಕಾರ ಅದೋಗತಿಗೆ ತಲುಪಿದ್ದು, ದಿವಾಳಿ ಆಗುತ್ತಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಟೀಕಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೊರೋನಾ ನೆಪದಲ್ಲಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಬಿ.ಎಸ್​ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದ ಮೇಲೆ 2 ಬಜೆಟ್ ಮಂಡನೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ.‌ ಸಿದ್ದರಾಮಯ್ಯನವರ ನಂತರ ಸಮ್ಮಿಶ್ರ ಸರ್ಕಾರದಲ್ಲಿ 40 ಸಾವಿರ ಕೋಟಿ ರೂಪಾಯಿ ಸಾಲ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪನವರ ಕಾಲದಲ್ಲಿ 52918 ಕೋಟಿ ಸಾಲ ತೆಗೆದುಕೊಳ್ಳಲಾಗಿದೆ. ಈಗ ಮತ್ತೆ ಸಾಲ‌ ಮಾಡಲು ಹೊರಟಿದ್ದು, ಖಂಡನೀಯ. ಈ ಹಿಂದೆ‌ ಅಭಿವೃದ್ಧಿಗೋಸ್ಕರ ಸಾಲ ತೆಗೆದುಕೊಳ್ಳಲಾಗುತ್ತಿತ್ತು. ಈಗ ಇವರು ವೇತನ ನೀಡಲಿಕ್ಕೆ ಸಾಲ ತೆಗೆದುಕೊಳ್ಳುತ್ತಿದ್ದಾರೆ ಎಂದರು.

ಬಿ.ಎಸ್​ ಯಡಿಯೂರಪ್ಪನವರ ಸರ್ಕಾರ ನಾಚಿಗೇಡಿನ ಸರ್ಕಾರ. ದುರಾಡಳಿತ, ದುಂದು ವೆಚ್ಚ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ಅನುದಾನ ಬರುತ್ತಿಲ್ಲ. ಯಡಿಯೂರಪ್ಪನವರು ದೆಹಲಿಗೆ ಹೋಗಿದ್ದು, ಅಭಿವೃದ್ಧಿ ಬಗ್ಗೆ ಮಾತನಾಡಲಿಕ್ಕೆ ಅಲ್ಲಾ. ಬದಲಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು‌ ಎಂದರು.

ಹೀಗೆ ಮುಂದುವರಿದ ಬಸವರಾಜ ರಾಯರೆಡ್ಡಿ, ಯಡಿಯೂರಪ್ಪ ಮತ್ತವರ ಮಕ್ಕಳು ಭ್ರಷ್ಟಾಚಾರ ಮಾಡಿದ್ದಾರೆ. ಇವರು ಅಧಿಕಾರವನ್ನ ಬಿಟ್ಟು ಹೋಗುವುದೇ ಒಳ್ಳೆಯದು. ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳು ಶಾಮೀಲಾಗಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಒಂದು ವೇಳೆ ಡ್ರಗ್ಸ್ ಜಾಲದಲ್ಲಿ ಕಾಂಗ್ರೆಸ್ ನಾಯಕರ ಹೆಸರು ಕೇಳಿ ಬಂದ್ರೆ ಅಂತಹವರನ್ನು ಪಕ್ಷದಿಂದ ಕಿತ್ತು ಹಾಕಿ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಒತ್ತಾಯ ಮಾಡುತ್ತೇನೆ ಎಂದರು.

ಗ್ರಾಮ ಪಂಚಾಯತ್ ನೌಕರರ ಬಾಕಿಯಿರುವ ಸಂಬಳವನ್ನು ಬಿಡುಗಡೆ ಮಾಡಬೇಕು. ಇದರೊಂದಿಗೆ ವಿವಿಧ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದು ಈಡೇರಿಸದಿದ್ದರೆ ಸೆಪ್ಟೆಂಬರ್ 21ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದಿದ್ದಾರೆ.‌

ಇದನ್ನೂ ಓದಿ: ಸಾಮಾನ್ಯರಿಗೊಂದು ನ್ಯಾಯ, ಸೆಲೆಬ್ರಿಟಿಗೊಂದು ನ್ಯಾಯ! ಪರಪ್ಪನ ಅಗ್ರಹಾರದಲ್ಲಿ ರಾಗಿಣಿ, ಸಂಜನಾಗೆ ರಾಜ ಮರ್ಯಾದೆ?

ನೌಕರರ ಸಂಬಳ ಪಾವತಿಸಲು ವಿವಿಧ ಯೋಜನೆಗಳ ಹಣ ಕ್ರೋಡಿಕರಿಸಿ ಮಂಜೂರಾತಿ ನೀಡಬೇಕು. ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಬಡ್ತಿ ನೀಡಬೇಕು. ಸಿಬ್ಬಂದಿಗಳಿಗೆ ಪೆನ್ಷನ್ ಮಂಜೂರು ಮಾಡಬೇಕು. ವೈದ್ಯಕೀಯ ವೆಚ್ಚ ಒದಗಿಸಬೇಕು. ಸೇವಾ ನಿಯಮಾವಳಿ ತಿದ್ದುಪಡಿ ಪರಿಶೀಲಿಸಿ ಆದೇಶ ಹೊರಡಿಸಬೇಕು ಎಂದರು.ಪಂಪ್ ಆಪರೇಟರ್‌ಗಳಿಗೆ ಅರ್ಧ ಸಂಬಳ ನೀಡುವ ನಿರ್ಧಾರ ಕೈಬಿಡಬೇಕು. ಗ್ರಾಮ ಪಂಚಾಯತ್ ನೌಕರರ ಎಲ್ಲಾ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಸಿಎಂ ಸೂಕ್ತ‌ ಕ್ರಮ ಕೈಗೊಳ್ಳದಿದ್ದರೆ ಧರಣಿ ಪ್ರಾರಂಭಿಸಲಾಗುವುದು ಎಂದರು.
Published by: Ganesh Nachikethu
First published: September 19, 2020, 8:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading