• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Dinesh Gundurao: ಮಾಂಸಾಹಾರಿಗಳ ವೋಟ್ ಬೇಡ ಅನ್ನೋ ತಾಕತ್ತು ಬಿಜೆಪಿಗಿದೆಯೇ? ದಿನೇಶ್ ಗುಂಡೂರಾವ್ ಪ್ರಶ್ನೆ

Dinesh Gundurao: ಮಾಂಸಾಹಾರಿಗಳ ವೋಟ್ ಬೇಡ ಅನ್ನೋ ತಾಕತ್ತು ಬಿಜೆಪಿಗಿದೆಯೇ? ದಿನೇಶ್ ಗುಂಡೂರಾವ್ ಪ್ರಶ್ನೆ

ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್

ಈ ಸಂಬಂಧ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ (Former Minister Dinesh Gundurao), ಆಹಾರ ನಮ್ಮ ಹಕ್ಕು. ಇದನ್ನು ಕೇಳಲು BJPಯವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

 • Share this:

ಕೊಡಗು ಭೇಟಿ ನೀಡಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಅವರು ಮಾಂಸಾಹಾರ (Non veg Food) ಸೇವಿಸಿ ದೇವಸ್ಥಾನಕ್ಕೆ (Temple) ಭೇಟಿ ನೀಡಿದ್ದರು ಎಂದು ಬಿಜೆಪಿ ಆರೋಪಿಸುತ್ತಿದೆ. ಈ ಸಂಬಂಧ ಬಿಜೆಪಿ ಸಚಿವರು, ಶಾಸಕರು, ಸಂಸದರು (BJP Leaders) ಸೇರಿದಂತೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವಾಗ ಸಂಸದ ಪ್ರತಾಪ್ ಸಿಂಹ (MP Pratap Simha), 2017ರಲ್ಲಿ ನಾಟಿ ಕೋಳಿ ತಿಂದು ಚಾಮುಂಡೇಶ್ವರಿಗೆ (Goddess Chamundeshwari) ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ್ದರು. ಇದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ ಎಂದು ಹೇಳಿದ್ದರು. ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಮೈಸೂರಿನ ಮಾಜಿ ಮೇಯರ್ ರವಿಕುಮಾರ್ ಸಹ ಪುನರುಚ್ಚರಿಸಿದರು.


ಇದೀಗ ಕಾಂಗ್ರೆಸ್ ನಾಯಕರು (Congress Leaders) ತಮ್ಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಸಂಬಂಧ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ (Former Minister Dinesh Gundurao), ಆಹಾರ ನಮ್ಮ ಹಕ್ಕು. ಇದನ್ನು ಕೇಳಲು BJPಯವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.


ಊಟ ತನ್ನಿಚ್ಛೆ, ನೋಟ ಪರರಿಚ್ಛೆ ಅಲ್ಲವೇ?


ಮಾಂಸಾಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು BJPಯವರು ನಿರ್ಧರಿಸಬೇಕೆ? ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು BJPಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ, ನೋಟ ಪರರಿಚ್ಛೆ ಅಲ್ಲವೇ?
ಇದನ್ನೂ ಓದಿ:  Siddaramaiah: 2017ರಲ್ಲಿ ಮಾಂಸ ತಿಂದು ಮೈಸೂರು ದಸರಾ ಅಂಬಾರಿಗೆ ಪೂಜೆ ಮಾಡಿದ್ರಾ ಸಿದ್ದರಾಮಯ್ಯ!?


ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಭಕ್ತಿ ಶುದ್ಧವಾಗಿರಬೇಕು


ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ. ಭಕ್ತಿ ಶುದ್ಧವಾಗಿರಬೇಕು.‌


Former Minister Dinesh Gundurao speaks about non vegetarians vote challenges bjp in Tweets mrq
ಮಾಜಿ ಮೇಯರ್ ರವಿಕುಮಾರ್ ಹೇಳಿಕೆ


ಮದುವೆಯ ದಿನವೇ ಮಾಂಸಹಾರ ಮಾಡ್ತಾರೆ


ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ‌‌ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ. ಅದು ಅವರ ಆಹಾರ ಪದ್ದತಿ. ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಾಹಾರ ಮಾಡುತ್ತಾರೆ. C.T.ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು. ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಾಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ?


ಮಾಂಸಾಹಾರ ಸೇವನೆ ತಪ್ಪೇ?


ಸಿದ್ದರಾಮಯ್ಯ ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ. ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ. ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ವೋಟು ಹಾಕುವುದು ಬೇಡ ಎಂದು ಬಿಜೆಪಿ ಅವರು ಹೇಳಲಿ. ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.


ಸಿದ್ದು ಸುಲ್ತಾನ್ ಬಂದ್ರೆ ಹೆದರ್ತೀವಾ?; ಪ್ರತಾಪ್ ಸಿಂಹ


ಕೊಡಗಿಗೆ (kodagu) ಬಂದಾಗಲೇ ಹೆದರಲಿಲ್ಲ, ಸಿದ್ದು ಸುಲ್ತಾನ್ ಬಂದರೇ ಹೆದರುತ್ತೀವಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ (Kerala) ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.


Former Minister Dinesh Gundurao speaks about non vegetarians vote challenges bjp in Tweets mrq
ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ


ಇದನ್ನೂ ಓದಿ:  Siddaramaiah: ಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ ಏನ್ ತಪ್ಪು; ಸಿದ್ದರಾಮಯ್ಯ ಪರ ಮುತಾಲಿಕ್ ಬ್ಯಾಟ್

top videos


  ನಿಮ್ಮ ಶ್ರೀಮತಿ ಚಾಮುಂಡೇಶ್ವರಿ (Chamundeshwari Devi) ಭಕ್ತೆ ಅವರು ಸಹ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಕೇಳಿ ಎಂದಿದ್ದಾರೆ. ಒಂದು ವೇಳೆ ನಿಮ್ಮ ಶ್ರೀಮತಿ ಅವರು ಆ ರೀತಿ ಬಂದು ಹೇಳಿದ್ರೆ ನಾವು ಒಪ್ಪಿಕೊಳ್ಳುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದರು.

  First published: