• Home
  • »
  • News
  • »
  • state
  • »
  • GT Devegowda; ಜೆಡಿಎಸ್ ವರಿಷ್ಠರಿಗೆ ಶಾಸಕ ಜಿ.ಟಿ. ದೇವೇಗೌಡ ಶಾಕ್!

GT Devegowda; ಜೆಡಿಎಸ್ ವರಿಷ್ಠರಿಗೆ ಶಾಸಕ ಜಿ.ಟಿ. ದೇವೇಗೌಡ ಶಾಕ್!

ಶಾಸಕ ಜಿ.ಟಿ,ದೇವೇಗೌಡ

ಶಾಸಕ ಜಿ.ಟಿ,ದೇವೇಗೌಡ

ನವೆಂಬರ್ 9ರಂದು ಚಾಮುಂಡೇಶ್ವರಿ  ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯರನ್ನು ಸ್ವಾಗತಿಸಲು ಜಿ.ಟಿ.ದೇವೇಗೌಡರು ಸಿದ್ಧತೆ ನಡೆಸುತ್ತಿದ್ದಾರೆ. ಹಿನಕಲ್ ನಲ್ಲಿ ನಡೆಯುವ ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡರು ಮತ್ತು ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳಲಿದ್ದಾರೆ. ಇದಾದ ನಂತರ ಕೇರ್ಗಳ್ಳಿಯಲ್ಲಿ ನಡೆಯುವ ಕೆಂಚಪ್ಪ ಸಮುದಾಯ ಭವನ ಉದ್ಘಾಟನೆಯಲ್ಲೂ ಉಭಯ ನಾಯಕರು ಭೇಟಿಯಾಗಲಿದ್ದಾರೆ.

ಮುಂದೆ ಓದಿ ...
  • Share this:

ಮೈಸೂರು: ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ,ದೇವೇಗೌಡರು (GT Devegowda) ದಳಪತಿಗಳಿಗೆ ಶಾಕ್ ಕೊಟ್ಟಿದ್ದು, ಕಾಂಗ್ರೆಸ್ (Congress) ಸೇರುವುದು ಬಹುತೇಕ ಖಚಿತವಾಗಿದೆ. ಮೊದಲ ಹಂತವಾಗಿ ನವೆಂಬರ್ 9ರಂದು ಮಾಜಿ ಸಿಎಂ ಸಿದ್ದರಾಮಯ್ಯರ (Former CM Siddaramaiah) ಜೊತೆ ಜಿ.ಟಿ.ದೇವೇಗೌಡರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಚಾಮುಂಡೇಶ್ವರಿ (Chamundeshwari Constituency)ಕ್ಷೇತ್ರಕ್ಕೆ ಸಿದ್ದರಾಮಯ್ಯ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾರೆ . ಕೆಲ ದಿನಗಳ ಹಿಂದೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸಿದ್ದರು. ಈ ಸಮಾವೇಶದ ತಿರುಗೇಟು ನೀಡುವ ನಿಟ್ಟಿನಲ್ಲಿ ನವೆಂಬರ್ 9ರಂದು ಸಮಾವೇಶ ನಡೆಯಲಿದೆ ಎನ್ನಲಾಗಿದೆ.


ನವೆಂಬರ್ 9ರಂದು ಚಾಮುಂಡೇಶ್ವರಿ  ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯರನ್ನು ಸ್ವಾಗತಿಸಲು ಜಿ.ಟಿ.ದೇವೇಗೌಡರು ಸಿದ್ಧತೆ ನಡೆಸುತ್ತಿದ್ದಾರೆ. ಹಿನಕಲ್ ನಲ್ಲಿ ನಡೆಯುವ ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡರು ಮತ್ತು ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳಲಿದ್ದಾರೆ. ಇದಾದ ನಂತರ ಕೇರ್ಗಳ್ಳಿಯಲ್ಲಿ ನಡೆಯುವ ಕೆಂಚಪ್ಪ ಸಮುದಾಯ ಭವನ ಉದ್ಘಾಟನೆಯಲ್ಲೂ ಉಭಯ ನಾಯಕರು ಭೇಟಿಯಾಗಲಿದ್ದಾರೆ.


ಇದನ್ನೂ ಓದಿ:  ಗೆಳೆಯ ಜಿಟಿಡಿ ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ, ಆದರೆ, ಅವರ ಮಾತು ನಮ್ಮ ಕಾರ್ಯಕರ್ತರನ್ನು ಕೆರಳಿಸಿತು; ಸಿದ್ದರಾಮಯ್ಯ


ಜಿಟಿಡಿ ವಿರುದ್ಧ ಸೋಲು


ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ವರುಣಾ ಕ್ಷೇತ್ರವನ್ನು ಪುತ್ರ ಯತೀಂದ್ರ ಅವರಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇದೇ ಕ್ಷೇತ್ರದಿಂದ ಜೆಡಿಎಸ್ ನಿಂದ ಜಿ.ಟಿ.ದೇವೇಗೌಡರು ಕಣದಲ್ಲಿದ್ದರು. ಇತ್ತ ಸಿದ್ದರಾಮಯ್ಯನವರು ಬದಾಮಿಯಿಂದಲೂ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರು ಬದಾಮಿಯಲ್ಲಿ ಅಲ್ಪ ಮತಗಳ ಅಂತರದಲ್ಲಿ ಗೆದ್ದಿದ್ದರು.


ಸಿದ್ದರಾಮಯ್ಯರನ್ನ ಕಾಡಿದ ಸೋಲು


ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಸಿದ್ದರಾಮಯ್ಯನವರು ಹಲವು ಬಾರಿ ಚಾಮುಂಡೇಶ್ಗರಿಯ ಜನರು ನನ್ನನ್ನು ಕೈ ಹಿಡಿಯಲಿಲ್ಲ. ಅನ್ನಭಾಗ್ಯದಂತಹ ಅನೇಕ ಜನಪ್ರಿಯ ಯೋಜನೆಗಳನ್ನು ನೀಡಿದರೂ ನನ್ನನ್ನು ಸೋಲಿಸಿದರು. ಆದ್ರೆ ಬದಾಮಿ ಕ್ಷೇತ್ರದ ಜನ ನನ್ನ ಕೈ ಹಿಡಿದರು ಎಂದು ಹೇಳಿಕೊಂಡಿದ್ದರು.


JDSನಿಂದ ಅಂತರ ಕಾಯ್ದುಕೊಂಡ GTD


ಇತ್ತ ಮೈತ್ರಿ ಸರ್ಕಾರ ಪತನದ ಬಳಿಕ ಜೆಡಿಎಸ್ ನಿಂದ ಜಿ.ಟಿ.ದೇವೇಗೌಡರು ಪಕ್ಷ ಮತ್ತು ವರಿಷ್ಠರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಂದಲೂ ದೂರ ಉಳಿದುಕೊಂಡಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಬ್ಯಾನರ್ ನಲ್ಲಿ ಜಿಟಿಡಿ ಪುತ್ರನ ಫೋಟೋ ಹಾಕಲಾಗಿತ್ತು.


ಇದನ್ನೂ ಓದಿ:  'ಈವರೆಗೆ ಸಾಕಷ್ಟು ನೊಂದಿದ್ದೇನೆ, ಯಾರ ಹಂಗಿನಲ್ಲೂ ಬದುಕಿಲ್ಲ'; ರಾಜಕೀಯ ನಿವೃತ್ತಿ ಘೋಷಿಸಿದ ಜಿಟಿಡಿ


ಪುತ್ರನಿಗೆ ಟಿಕೆಟ್ ಕೇಳಿದ ಜಿಟಿಡಿ


ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಭಾರೀ ಅಂತರದಿಂದ ಸೋಲಿಸಿದ್ದ ಜಿ.ಟಿ. ದೇವೇಗೌಡ ಅವರು ತನ್ನೊಂದಿಗೆ ಮಾತುಕತೆ ನಡೆಸಿರುವ ಸುದ್ದಿಯನ್ನು ಸಿದ್ದರಾಮಯ್ಯ ಅವರು ಅಕ್ಟೋಬರ್ ನಲ್ಲಿ ಒಪ್ಪಿಕೊಂಡಿದ್ದರು. ಜಿಟಿಡಿ ನನ್ನ ಜೊತೆ ಮಾತನಾಡಿರುವುದು ಸತ್ಯ. ಅವರಿಗೆ ಹಾಗೂ ಅವರ ಮಗನಿಗೆ ಟಿಕೆಟ್ ಕೇಳಿದ್ದಾರೆ. ಡಿಕೆ ಶಿವಮಕುಮಾರ್ ಜೊತೆ ಮಾತನಾಡಿದ್ದಾರೆ. ಡಿಕೆ ಶಿವಕುಮಾರ್ ಮೂಲಕ ನನ್ನ ಜೊತೆಯೂ ಅವರು ಮಾತನಾಡಿದ್ದಾರೆ. ಅವರು ಇಂಥದ್ದೇ ಕ್ಷೇತ್ರದಲ್ಲಿ ಟಿಕೆಟ್ ಬೇಕು ಅಂತ ಕೇಳಿಲ್ಲ. ನಾನು ಈ ಬಗ್ಗೆ ರಣದೀಪ್ ಸುರ್ಜೆವಾಲ ಜೊತೆ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.


ದಳಪತಿಗಳ ವಿರುದ್ಧ ಜಿಟಿಡಿ ವಾಗ್ದಾಳಿ


ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿರುವ ಜಿ.ಟಿ.ದೇವೇಗೌಡರು ಸಮಯ ಸಿಕ್ಕಾಗೆಲ್ಲ ದಳಪತಿಗಳ ವಿರುದ್ಧ ಅಸಮಾಧಾನ ಹೊರ ಹಾಕುತ್ತಿರುತ್ತಾರೆ. ಸಂಪುಟ ಹಂಚಿಕೆ ವೇಳೆ ಉದ್ದೇಶಪೂರ್ವಕವಾಗಿಯೇ ತಮಗೆ ಉನ್ನತ ಶಿಕ್ಷಣ ಇಲಾಖೆ ನೀಡಲಾಗಿತ್ತು ಎಂದು ಆರೋಪಿಸಿದ್ದರು. ಮತ್ತೊಂದು ಕಡೆ ದಳಪತಿಗಳು ಜಿಟಿಡಿ ಅವರ ಹೆಸರು ಹೇಳದೇ ವಾಗ್ದಾಳಿ ನಡೆಸಿದ್ದುಂಟು, ನಾನು ಹಿರಿಯರ ಜೊತೆ ರಾಜಕೀಯ ಮಾಡಿದ್ದೇನೆ. 50 ವರ್ಷಗಳಿಂದ ರಾಜಕಾರಣದಲ್ಲಿ ಇದ್ದೇನೆ. ಇವತ್ತಿನ ಪರಿಸ್ಥಿತಿಯಲ್ಲಿ ರಾಜಕಾರಣ ಸಾಧ್ಯವಿಲ್ಲ. ನಾನು ಮಂತ್ರಿ ಆಗಿ ಆಯ್ತು, ರಾಜಕೀಯ ಸಾಕು. ನಾನು ಸಾಕಷ್ಟು ನೊಂದಿದ್ದೇನೆ ಎಂದು ಹೇಳಿ ಜಿ.ಟಿ.ದೇವೇಗೌಡರು ಚುನಾವಣಾ ರಾಜಕೀಯ ನಿವೃತ್ತಿಯನ್ನು 2019 ಆಗಸ್ಟ್ 4ರಂದು ಘೋಷಿಸಿದ್ದರು.

Published by:Mahmadrafik K
First published: