ಸಂಸದ ತೇಜಸ್ವಿ ಸೂರ್ಯ ಪ್ರವಾಹ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಲಿ; ಮಾಜಿ ಸಚಿವ ಹೆಚ್.ಕೆ. ಪಾಟೀಲ್​​

ಅನರ್ಹ ಶಾಸಕರು ಕಾನೂನು ಬಾಹಿರ ಕೆಲಸ ಮಾಡಿದ್ದಾರೆ. ರಾಜ್ಯ ದ್ರೋಹ, ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಆಗಬೇಕು. ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿಯುವ ವಿಶ್ವಾಸವಿದೆ

G Hareeshkumar | news18-kannada
Updated:September 23, 2019, 8:12 PM IST
ಸಂಸದ ತೇಜಸ್ವಿ ಸೂರ್ಯ ಪ್ರವಾಹ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಲಿ; ಮಾಜಿ ಸಚಿವ ಹೆಚ್.ಕೆ. ಪಾಟೀಲ್​​
ಸಂಸದ ತೇಜಸ್ವಿ ಸೂರ್ಯ ಹಾಗೂ ಮಾಜಿ ಸಚಿವ ಹೆಚ್​ ಕೆ ಪಾಟೀಲ್​​​
  • Share this:
ವಿಜಯಪುರ (ಸೆ. 23 ): ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಕ್ಷಣವೇ ಪ್ರವಾಹ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು. ಕ್ಷಮೆ ಕೇಳದಿದ್ದರೆ ತೇಜಸ್ವಿ ಸೂರ್ಯ ಸಂತ್ರಸ್ತರ ಆಕ್ರೋಶ ಎದುರಿಸಬೇಕಾಗುತ್ತದೆ. ಸಂತ್ರಸ್ತರ ಬಗ್ಗೆ ಬೇಜವಾಬ್ದಾರಿ ಹೇಳಿಕೆ‌ ನೀಡಿ ಕನ್ನಡಿಗರಿಗೆ ಅಗೌರವ ತೋರಿದ್ದಾರೆ ಎಂದು ಮಾಜಿ ಸಚಿವ ಹೆಚ್. ಕೆ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಎಷ್ಟು ಕಾಳಜಿ ಇಟ್ಟುಕೊಂಡಿದ್ದಾರೆ ಎನ್ನುವುದು ಈ ಹೇಳಿಕೆಯಿಂದ ಗೊತ್ತಾಗುತ್ತೆ. ಬೆಳಗಾವಿಯಲ್ಲಿ ಕುಳಿತು ಹೀಗೆ ಹೇಳುತ್ತಾರೆ, ದಿಲ್ಲಿಯಲ್ಲಿ ಇವರು ಹೈಕಮಾಂಡ್​​ಗೆ ಏನು ಹೇಳಿರಬೇಡ? ಎಂದು ಪ್ರಶ್ನಿಸಿದ ಹೆಚ್. ಕೆ. ಪಾಟೀಲ, ಇನ್ನು ಪ್ರಧಾನಿ ಮೋದಿ ಎದುರು ಏನು ಹೇಳಿರಬೇಕು? ಮೋದಿ ರಾಜ್ಯಕ್ಕೆ ಭೇಟಿ ಕೊಡದೆ ಇರೋದಕ್ಕೆ ತೇಜಸ್ವಿ ಸೂರ್ಯ ಕಾರಣ? ತೇಜಸ್ವಿ ಸೂರ್ಯ ಮೋದಿಗೆ ಮಿಸ್ ಗೈಡ್ ಮಾಡಿದ್ದಾರೆ ಎಂದೂ ಹೆಚ್. ಕೆ. ಪಾಟೀಲ್​​ ಆರೋಪಿಸಿದರು.

ಅನರ್ಹ ಶಾಸಕರ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅನರ್ಹ ಶಾಸಕರ ಮುಂದಿನ ನಡೆಯ ಬಗ್ಗೆ ಗೊತ್ತಾಗುತ್ತಿಲ್ಲ. ಅನರ್ಹ ಶಾಸಕರು ಪಕ್ಷ ದ್ರೋಹ ಮಾಡಿದ್ದಾರೆ.  ಅನರ್ಹ ಶಾಸಕರು ಕಾನೂನು ಬಾಹಿರ ಕೆಲಸ ಮಾಡಿದ್ದಾರೆ. ರಾಜ್ಯ ದ್ರೋಹ, ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಆಗಬೇಕು. ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ :  ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರದ ನೆರವಿನ ಅವಶ್ಯಕತೆ ಇಲ್ಲ : ಸಂಸದ ತೇಜಸ್ವಿ ಸೂರ್ಯ

ವಿಧಾನ ಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಈಗಾಗಲೇ ಆಗಬೇಕಿತ್ತು ಎಂದು ಹೇಳಿದ ಹೆಚ್. ಕೆ. ಪಾಟೀಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್​​ಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಗೆ ಪ್ರವಾಹ ಸಂಸತ್ರಸ್ತರ ಶಾಪ ತಟ್ಟಲಿದೆ : ಎಂ ಬಿ ಪಾಟೀಲ್​​​

ಅನರ್ಹ ಶಾಸಕರು ಮತ್ತು ಬಿಜೆಪಿಗೆ ಪ್ರವಾಹ ಸಂಸತ್ರಸ್ತರ ಶಾಪ ತಟ್ಟಲಿದೆ. ಅನರ್ಹ ಶಾಸಕರು ಜನತೆ, ಸಂತ್ರಸ್ತರಿಗೆ ಮೋಸ ಮಾಡಿದ್ದಾರೆ. ಕಾಗವಾಡ, ಅಥಣಿ ಮತ್ತು ಗೋಕಾಕ್​​ ಅನರ್ಹ ಶಾಸಕರಿಗೆ ಸಂತ್ರಸ್ತರ ಶಾಪ ತಟ್ಟೊದು ಗ್ಯಾರಂಟಿ. ತೀರ್ಪು ಏನೇ ಬರಲಿ. ಕಾನೂನು ಗೌರವಿಸಬೇಕು. ಚುನಾವಣೆಯಲ್ಲಿ ಖಂಡಿತ ಗೆಲ್ಲುತ್ತೇವೆ ಎಂದರು.
First published:September 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ