HOME » NEWS » State » FORMER MINISTER MB PATIL WROTE A LETTER TO CM BS YEDIYURAPPA TO DISCUSS KRISHNA RIVER WATER DISTRIBUTION ISSUE SCT

ಕೃಷ್ಣಾ ನದಿ ನೀರು ಹಂಚಿಕೆಗೆ ಹೊಸ ನ್ಯಾಯಾಧಿಕರಣ ರಚನೆ ಚರ್ಚೆ ಹಿನ್ನೆಲೆ; ಸಿಎಂಗೆ ಪತ್ರ ಬರೆದ ಎಂ.ಬಿ. ಪಾಟೀಲ್

ಬ್ರಿಜೇಶ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ತೀರ್ಪು ನೀಡಿದ್ದು, ನೀರು ಮರು ಹಂಚಿಕೆ ಆ ಎರಡೂ ರಾಜ್ಯಗಳಿಗೆ ಮಾತ್ರ ಸೀಮಿತವಾಗಿದೆ ಎಂದು ನ್ಯಾಯಾಧಿಕರಣ ತೀರ್ಪು ನೀಡಿದೆ.  ಅಲ್ಲದೆ, ಸುಪ್ರೀಂಕೋರ್ಟಿನಲ್ಲಿ ಕೇಂದ್ರ ಸರಕಾರ ಕೂಡ ಇದೇ ನಿಲುವಿನಡಿ ಅಫಿಡವಿಟ್ ಮೂಲಕ ಸಲ್ಲಿಸಿದೆ. 

news18-kannada
Updated:October 9, 2020, 7:58 AM IST
ಕೃಷ್ಣಾ ನದಿ ನೀರು ಹಂಚಿಕೆಗೆ ಹೊಸ ನ್ಯಾಯಾಧಿಕರಣ ರಚನೆ ಚರ್ಚೆ ಹಿನ್ನೆಲೆ; ಸಿಎಂಗೆ ಪತ್ರ ಬರೆದ ಎಂ.ಬಿ. ಪಾಟೀಲ್
ಎಂಬಿ ಪಾಟೀಲ್
  • Share this:
ವಿಜಯಪುರ (ಅ. 9): ಕೃಷ್ಣಾ ನದಿ ನೀರು ಮರು ಹಂಚಿಕೆಗೆ ಹೊಸ ನ್ಯಾಯಾಧಿಕರಣ ರಚನೆ ಕುರಿತು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯ ರಾಜ್ಯದಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸ ಒದಗಿಸಿವೆ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆ ಮಾಜಿ ಸಚಿವ ಎಂ. ಬಿ. ಪಾಟೀಲ ಈ ಕುರಿತು ಚರ್ಚಿಸಲು ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಎಂ. ಬಿ. ಪಾಟೀಲ, ಕೂಡಲೇ ಸಿಎಂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೊಸ ನ್ಯಾಯಾಧಿಕರಣದ ರಚನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಿಂದ ಉತ್ಸುಕತೆ ವ್ಯಕ್ತವಾಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸಿಎಂಗಳ ಜೊತೆ ಕೇಂದ್ರ ಜಲಸಂಪನ್ಮೂಲ ಸಚಿವರು ನಡೆಸಿರುವ ಸಭೆ ರಾಜ್ಯದ ಪಾಲಿಗೆ ಆತಂಕ ಮೂಡಿಸಿದೆ.  ಈ ವಿಷಯದಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿಕೆ ಗೊಂದಲಮಯವಾಗಿದೆ.  ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ಕುರಿತು ತಮಗೆ ಅನ್ಯಾಯವಾಗಿದೆ ಎಂದು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ವಿಭಜನೆಯಾದ ಬಳಿಕ ಸುಪ್ರಿಂ ಕೋರ್ಟ್ ಮತ್ತು ನ್ಯಾಯಾಧಿಕರಣದಲ್ಲಿ ಮೊಕದ್ದಮೆ ದಾಖಲು ಮಾಡಿವೆ.

ಇದು ಆ ಎರಡೂ ರಾಜ್ಯಗಳ ನಡುವಿನ ಆಂತರಿಕ ವ್ಯಾಜ್ಯ. ಈ ಕುರಿತು ನ್ಯಾಯಾಧಿಕರಣ ಈಗಾಗಲೇ ತೀರ್ಪು ನೀಡಿದೆ.  ರಾಜ್ಯಗಳ ಪುನರ್ ವಿಂಗಡನೆ ಕಾಯ್ದೆ ಸೆಕ್ಷನ್ 80ರ ಪ್ರಕಾರ ಬ್ರಿಜೇಶ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ತೀರ್ಪು ನೀಡಿದ್ದು, ನೀರು ಮರು ಹಂಚಿಕೆ ಆ ಎರಡೂ ರಾಜ್ಯಗಳಿಗೆ ಮಾತ್ರ ಸೀಮಿತವಾಗಿದೆ ಎಂದು ನ್ಯಾಯಾಧಿಕರಣ ತೀರ್ಪು ನೀಡಿದೆ.  ಅಲ್ಲದೆ, ಸುಪ್ರೀಂಕೋರ್ಟಿನಲ್ಲಿ ಕೇಂದ್ರ ಸರಕಾರ ಕೂಡ ಇದೇ ನಿಲುವಿನಡಿ ಅಫಿಡವಿಟ್ ಮೂಲಕ ಸಲ್ಲಿಸಿದೆ.  ಆದ್ದರಿಂದ ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ನೀರಿನ ಮರು ಹಂಚಿಕೆ ಆ ಎರಡು ರಾಜ್ಯಗಳಿಗೆ ಸೀಮಿತವಾಗಿದೆ ಎಂದು ಎಂ. ಬಿ. ಪಾಟೀಲ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರಳ ದಸರಾಗ್ಯಾಕೆ 15 ಕೋಟಿ? ಮೈಸೂರಿನಲ್ಲಿ ಸರ್ಕಾರದ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

ಇದು ಕರ್ನಾಟಕಕ್ಕೆ ಸಂಬಂಧಿಸಿಲ್ಲ.  ಈ ಹಂತದಲ್ಲಿ ಕೇಂದ್ರ ಸಚಿವರಿಂದ ಕರ್ನಾಟಕದ ಹಿತಕ್ಕೆ ಧಕ್ಕೆ ತರುವ ಯತ್ನ ನಡೆಯುತ್ತಿದೆ.  ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಸಿಎಂಗಳ ಸಭೆ ಕರ್ನಾಟಕದ ಹಿತಕ್ಕೆ ಅನುಮಾನಕ್ಕೆಡೆ ಮಾಡಿದೆ.  ಆದ್ದರಿಂದ ಮುಖ್ಯಮಂತ್ರಿ ಸಿಎಂ ಬಿ.‌ ಎಸ್. ಯಡಿಯೂರಪ್ಪ ಇದನ್ನು ಗಂಭೀರವಾಗಿ ಪರಿಗಣಿಸಸಬೇಕು.  ಅಲ್ಲದೇ, ಮುಖ್ಯಮಂತ್ರಿಗಳು ಕೂಡಲೇ ಸರ್ವಪಕ್ಷ ಸಭೆ ಕರೆದು ಕೇಂದ್ರ ಸರಕಾರಕ್ಕೆ ಕರ್ನಾಟಕದ ಪರವಾಗಿ ಮನವರಿಕೆ ಮಾಡಿ ಕೊಡಬೇಕು.  ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯ ಪ್ರವೃತ್ತರಾಗಬೇಕು.  ಅಲ್ಲದೇ, ಕರ್ನಾಟಕದ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಎಂ. ಬಿ. ಪಾಟೀಲ ಆಗ್ರಹಿಸಿದ್ದಾರೆ.
Youtube Video

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಕೇಂದ್ರ ರಸಗೊಬ್ಬರ ಸಚಿವ ಸದಾನಂದ ಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ, ಜಲಸಂಪನ್ಮೂಲ‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಎಂ. ಬಿ. ಪಾಟೀಲ ತಾವು ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಪ್ರತಿಯನ್ನು ಕಳುಹಿಸಿದ್ದಾರೆ.
Published by: Sushma Chakre
First published: October 9, 2020, 7:58 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories