ಸರ್ಕಾರ ಕೊರೋನಾ ರೋಗಿಗಳ ಹೆಸರಲ್ಲಿ ಹಣ ಲೂಟಿ ಆರೋಪ; ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ 

ಭ್ರಷ್ಟಾಚಾರದ ಬಗ್ಗೆ ಸುಪ್ರಿಂ ಕೋರ್ಟ್ ಚೀಮಾರಿ ಹಾಕಿದೆ. ಕೇಂದ್ರದಲ್ಲಿರುವುದು ಒಂದು ಮೊಂಡ ಹಾಗೂ ಭಂಡ ಸರ್ಕಾರ. ಅದು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತದೆ. ಇವರಿಗೆ ಜನತೆಯ ಹಿತ ಬೇಕಾಗಿಲ್ಲ, ಬದಲಾಗಿ ಭಾವನಾತ್ಮಕವಾಗಿ ಜನರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.

news18-kannada
Updated:August 1, 2020, 3:49 PM IST
ಸರ್ಕಾರ ಕೊರೋನಾ ರೋಗಿಗಳ ಹೆಸರಲ್ಲಿ ಹಣ ಲೂಟಿ ಆರೋಪ; ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ 
ಮಾಜಿ ಸಚಿವ ರಮಾನಾಥ ರೈ
  • Share this:
ಕೊಡಗು(ಆ.01): ಕೋವಿಡ್ ರೋಗಿಗಳ ಹೆಸರಿನಲ್ಲಿ ಸರ್ಕಾರ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದ್ದು, ಕಿಟ್‌ಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದುಪ್ಪಟ್ಟು ಹಣ ಕೊಟ್ಟು ಆರೋಗ್ಯ ಉಪಕರಣಗಳನ್ನು ಖರೀದಿಸಲಾಗಿದೆ. ಇದರ ಬಗ್ಗೆ ಧ್ವನಿ ಎತ್ತಿದ ಬಳಿಕ ಸಚಿವರುಗಳು ದ್ವಂದ್ವ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಜಿಎಸ್​ಟಿ ಪರಿಹಾರದಲ್ಲಿಯೂ ಖೋತಾ; ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಬಿಜೆಪಿ ಸಂಸದರಿಗಿಲ್ಲವೇ?; ಪ್ರಿಯಾಂಕ್ ಖರ್ಗೆ ಕಿಡಿ

ಮುಂದುವರೆದ ಅವರು, ಭ್ರಷ್ಟಾಚಾರದ ಬಗ್ಗೆ ಸುಪ್ರಿಂ ಕೋರ್ಟ್ ಚೀಮಾರಿ ಹಾಕಿದೆ. ಕೇಂದ್ರದಲ್ಲಿರುವುದು ಒಂದು ಮೊಂಡ ಹಾಗೂ ಭಂಡ ಸರ್ಕಾರ. ಅದು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತದೆ. ಇವರಿಗೆ ಜನತೆಯ ಹಿತ ಬೇಕಾಗಿಲ್ಲ, ಬದಲಾಗಿ ಭಾವನಾತ್ಮಕವಾಗಿ ಜನರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ವಿರೋಧ ಪಕ್ಷದವರು ಒತ್ತಾಯಿಸಿದರು. ಸದನ ಸಮಿತಿಯಲ್ಲಿ ಸ್ಪೀಕರ್ ತನಿಖೆಗೆ ಅವಕಾಶ ಕೊಟ್ಟಿಲ್ಲ.‌ ಈ ಹಿಂದೆ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಗಳು ಕೇಳಿ ಬಂದಾಗ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಇದ್ದಾಗಲೂ ಕಾಂಗ್ರೆಸ್ 7 ಪ್ರಕರಣಗಳನ್ನು ಸಿಬಿಐ ತನಿಖೆಗೆ ಕೊಟ್ಟಿತ್ತು ಎಂದರು.

ಸರ್ಕಾರದ ಮೇಲೆ ಜನತೆಗೆ ಅಪ ನಂಬಿಕೆಗಳು ಬರಬಾರದು. ಆದ್ದರಿಂದ‌ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಬೇಕು. ಸತ್ಯ-ಅಸತ್ಯತೆಗಳು ರಾಜ್ಯದ ಜನತೆಗೆ ಗೊತ್ತಾಗಬೇಕು. ಒಂದು ವೇಳೆ ತನಿಖೆಗೆ ವಹಿಸದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರೈ ಎಚ್ಚರಿಕೆ ನೀಡಿದ್ದಾರೆ.‌
Published by: Latha CG
First published: August 1, 2020, 3:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading