HOME » NEWS » State » FORMER MINISTER ROSHAN BAIG STEALS SUPREME COURT ON ILLEGAL PROPERTY GAIN CASE RHHSN DBDEL

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ರೋಷನ್ ಬೇಗ್

ರೋಷನ್ ಬೇಗ್ ವಿರುದ್ಧ 2012ರಲ್ಲಿ ಅಬ್ದುಲ್ ಹಕ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ಪ್ರಕರಣ ದಾಖಲಾಗಿತ್ತು. ಅಂದಿನಿಂದ ನಿಧಾನಗತಿಯಲ್ಲಿ ತನಿಖೆ ನಡೆದು 2014ರಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ನಂತರ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೊಮ್ಮೆ ಅರ್ಜಿ ಹಾಕಲಾಗಿತ್ತು. ಇದೇ ಕಾರಣಕ್ಕೆ 2013ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದರೂ ರೋಷನ್ ಬೇಗ್ ಅವರನ್ನು ಮಂತ್ರಿ ಮಾಡಿರಲಿಲ್ಲ.

news18-kannada
Updated:December 15, 2020, 9:52 PM IST
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ರೋಷನ್ ಬೇಗ್
ಮಾಜಿ ಸಚಿವ ರೋಷನ್ ಬೇಗ್.
  • Share this:
ನವದೆಹಲಿ (ಡಿ. 15): ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಸುಪ್ರೀಂ ಕೋರ್ಟ್ ಮೆಟ್ಟಿಲು ತುಳಿದಿದ್ದಾರೆ. ಬುಧವಾರ ಈ ಅರ್ಜಿಯ ವಿಸ್ತ್ರತ ವಿಚಾರಣೆ ನಡೆಯಲಿದೆ.
ತಮ್ಮ ವಿರುದ್ಧದ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರೋಷನ್ ಬೇಗ್ ಸುಪ್ರೀಂ ಕೋರ್ಟ್ ಮೆಟ್ಟಿಲು ತುಳಿದಿದ್ದಾರೆ. ಮಂಗಳವಾರ ರೋಷನ್ ಬೇಗ್ ಅವರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಂಜಯ್ ಕಿಷನ್ ನೇತೃತ್ವದ ತ್ರಿಸದಸ್ಯ ಪೀಠವು ಬುಧವಾರ ವಿಸ್ತೃತ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರೋಷನ್ ಬೇಗ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಹಿನ್ನೆಲೆ ಮಾಜಿ ಸಚಿವ ರೋಷನ್ ಬೇಗ್ ಮತ್ತವರ ಕುಟುಂಬದವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ರದ್ದುಗೊಳಿಸುವಂತೆ ರೋಷನ್ ಬೇಗ್ ಮತ್ತವರ ಕುಟುಂಬಸ್ಥರು ರಾಜ್ಯ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ರಾಜ್ಯ ಹೈಕೋರ್ಟ್ ಇವರ ಅರ್ಜಿಯನ್ನು ವಜಾಗೊಳಿಸಿತ್ತು.

ರೋಷನ್ ಬೇಗ್, ಪತ್ನಿ ಸಬೀಹಾ ರೋಷನ್ ಹಾಗೂ ಪುತ್ರ ರುಮಾನ್ ಬೇಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟಿನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿತಲ್ಲದೆ ರೋಷನ್ ಬೇಗ್ ಮಾಜಿ ಸಚಿವರಾಗಿರುವ ಕಾರಣ ಅವರ ವಿರುದ್ಧ ವಿಚಾರಣೆ ಮುಂದುವರೆಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೇಳಿತ್ತು.

ಇದನ್ನು ಓದಿ: ನಾನು ಉಡಾಫೆ ರಾಜಕಾರಣಿ ಅಲ್ಲ, ‌ಕೊಟ್ಟ ಮಾತು ತಪ್ಪಿ ನಡೆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ; ಸಚಿವ ಸುಧಾಕರ್

ಇನ್ನೊಂದೆಡೆ ರೋಷನ್ ಬೇಗ್ ಮತ್ತು ಅವರ ಕುಟುಂಬದ ಸದಸ್ಯರು ಅಕ್ರಮ ಆಸ್ತಿ ಹೊಂದಿದ್ದಾರೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ರೋಷನ್ ಬೇಗ್ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ರೋಷನ್ ಬೇಗ್ ಮತ್ತವರ ಕುಟುಂಬದವರು ಶೇಕಡಾ 10ರಷ್ಟು ಮಾತ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಂದು ಬಿ ರಿಪೋರ್ಟಿನಲ್ಲಿ ತಿಳಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಅನ್ನು ತಿರಸ್ಕಿರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ರಾಜ್ಯ ಹೈಕೋರ್ಟ್ ಕೂಡ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಸರಿಯಾಗಿದೆ ಎಂದು ತನ್ನ ಆದೇಶದಲ್ಲಿ ಹೇಳಿತ್ತು‌. ಹಾಗಾಗಿ ಈ ರೋಷನ್ ಬೇಗ್ ಸುಪ್ರೀಂ ಕೋರ್ಟ್ ಮೆಟ್ಟಿಲು ತುಳಿದಿದ್ದಾರೆ.

ರೋಷನ್ ಬೇಗ್ ವಿರುದ್ಧ 2012ರಲ್ಲಿ ಅಬ್ದುಲ್ ಹಕ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ಪ್ರಕರಣ ದಾಖಲಾಗಿತ್ತು. ಅಂದಿನಿಂದ ನಿಧಾನಗತಿಯಲ್ಲಿ ತನಿಖೆ ನಡೆದು 2014ರಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ನಂತರ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೊಮ್ಮೆ ಅರ್ಜಿ ಹಾಕಲಾಗಿತ್ತು. ಇದೇ ಕಾರಣಕ್ಕೆ 2013ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದರೂ ರೋಷನ್ ಬೇಗ್ ಅವರನ್ನು ಮಂತ್ರಿ ಮಾಡಿರಲಿಲ್ಲ. ಈಗ ಇದೇ ಮೇ 5ರಂದು ಮತ್ತೊಮ್ಮೆ ಪ್ರಕರಣದ ತನಿಖೆ ನಡೆಯುತ್ತಿದೆ.
Published by: HR Ramesh
First published: December 15, 2020, 8:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories