ಹೈಕಮಾಂಡ್​​ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ: ಮಾಜಿ ಸಚಿವ ಸತೀಶ್​​ ಜಾರಕಿಹೊಳಿ

ಇನ್ನು, ಕಾಂಗ್ರೆಸ್​​ನಲ್ಲಿ ಯಾವುದೇ ಬಣ ಅಂತೇನಿಲ್ಲ. ಪಕ್ಷದ ಬಲವರ್ಧನೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕಷ್ಟ ಕಾಲದಲ್ಲಿಯೂ‌ ಪಕ್ಷದ ಪರವಾಗಿರಬೇಕು.‌ ಮುಂದಿನ ‌ಚುನಾವಣೆಗೆ ತಯಾರಾಗುತ್ತಿದ್ದೇವೆ ಎಂದು ತಿಳಿಸಿದರು.

news18-kannada
Updated:January 5, 2020, 6:45 PM IST
ಹೈಕಮಾಂಡ್​​ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ: ಮಾಜಿ ಸಚಿವ ಸತೀಶ್​​ ಜಾರಕಿಹೊಳಿ
ಸತೀಶ್​ ಜಾರಕಿಹೊಳಿ
  • Share this:
ಬೆಳಗಾವಿ(ಜ.05): ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಹೀನಾಯ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ ಶಾಸಕಾಂಗ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಂತೆಯೇ ದಿನೇಶ್​ ಗುಂಡೂರಾವ್​​ ಕೂಡ ಸೋಲಿನ ನೈತಿಕ ಜವಾಬ್ದಾರಿ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರ ರಾಜೀನಾಮೆ ಅಂಗೀಕಾರ ಆಗುವ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನಕ್ಕೆ ಹೈಕಮಾಂಡ್​​ ಬಳಿ ಕಾಂಗ್ರೆಸ್​​ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್​​, ಎಚ್​​. ಕೆ ಪಾಟೀಲ್​​, ಕೆ. ಎಚ್ ಮುನಿಯಪ್ಪ​​ ಕೆಪಿಸಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಕೆ. ಎಚ್​​ ಮುನಿಯಪ್ಪ ಬೆಂಬಲಕ್ಕೆ ಬಿ.ಕೆ ಹರಿಪ್ರಸಾದ್​​ ನಿಂತಿದ್ದು, ಎಚ್​.ಕೆ ಪಾಟೀಲ್​​ ಬೆನ್ನಿಗೆ ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ್​​ ಖರ್ಗೆ ನಿಂತಿದ್ಧಾರೆ. ಈಗಾಗಲೇ ರಾಹುಲ್​​ ಭೇಟಿಗೆ ಯತ್ನಿಸಿದರೂ ವಿಫಲವಾಗಿದ್ದು, ಸೋನಿಯಾ ಗಾಂಧಿ ಅವರನ್ನಾದರೂ ಭೇಟಿಯಾಗಬೇಕೆಂದು ಮುಂದಾಗಿದ್ದಾರೆ. ಇವರ ಜತೆಗೆ ಬೆಳಗಾವಿಯ ಪ್ರಭಾವಿ ಶಾಸಕ ಸತೀಶ್ ಜಾರಕಿಹೊಳಿ ಕೂಡ ಕೆಪಿಸಿಸಿ ಸ್ಥಾನ ಆಕಾಂಕ್ಷಿಯಾಗಿದ್ದಾರೆ.

ಹೌದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎನ್ನುವ ಮೂಲಕ ಸತೀಶ್​​​ ಜಾರಕಿಹೊಳಿ ತಮ್ಮ ಮನದಾಳದ ಆಸೆ ಬಿಚ್ಚಿಟ್ಟಿದ್ಧಾರೆ. ಇಂದು ನಗರದಲ್ಲಿ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್​​ ಜಾರಕಿಹೊಳಿ, ನಾನು ಕಾಂಗ್ರೆಸ್​​ ಶಿಸ್ತಿನ ಸಿಪಾಯಿ. ಹೈಕಮಾಂಡ್ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಕಾಂಗ್ರೆಸ್​​ ಉಪಚುನಾವಣೆಯಲ್ಲಿ ಸೋತಿದೆ. ಇಂತಹ ಸಂದರ್ಭದಲ್ಲಿ ಪಕ್ಷ ಕಟ್ಟುವುದು ಅತ್ಯಂತ ಮುಖ್ಯವಾಗಿದೆ. ಯಾರಿಗೆ ಕೆಪಿಸಿಸಿ ಅಧ್ಯಕ್ಷ ನೀಡಬೇಕು ಎಂಬುದು ಹೈಕಮಾಂಡ್ ಬಿಟ್ಟದ್ದು. ಯಾರಿಗೆ ಜವಾಬ್ದಾರಿ ನೀಡಿದರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ನಿರ್ಣಯ ಮಾಡಿದ್ದೇವೆ ಎಂದರು.

ಕೆಪಿಸಿಸಿಗೆ 4 ಕಾರ್ಯಾಧ್ಯಕ್ಷ ಹುದ್ದೆ ನೀಡುವ ವಿಚಾರವಾಗಿ ಶೀಘ್ರದಲ್ಲಿಯೇ ಸಭೆ ಕರೆಯಲಿದ್ದಾರೆ. ಆಗ ಹೈಕಮಾಂಡ್​​​​ ಅಭ್ಯರ್ಥಿಗಳ ಪ್ರಾದೇಶಿಕತೆ ಮತ್ತು ಜಾತಿ ಲೆಕ್ಕಚಾರವೂ ಪರಿಗಣಿಸಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ಸೋಮಶೇಖರ್​​ ಬಂಧನವಾಗಬೇಕು: ಕಾಂಗ್ರೆಸ್​ ಆಗ್ರಹ

ಇನ್ನು, ಕಾಂಗ್ರೆಸ್​​ನಲ್ಲಿ ಯಾವುದೇ ಬಣ ಅಂತೇನಿಲ್ಲ. ಪಕ್ಷದ ಬಲವರ್ಧನೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕಷ್ಟ ಕಾಲದಲ್ಲಿಯೂ‌ ಪಕ್ಷದ ಪರವಾಗಿರಬೇಕು.‌ ಮುಂದಿನ ‌ಚುನಾವಣೆಗೆ ತಯಾರಾಗುತ್ತಿದ್ದೇವೆ' ಎಂದು ತಿಳಿಸಿದರು.

ನನಗೆ ಅಧಿಕಾರ ಮುಖ್ಯ ಅಲ್ಲ, ಸದ್ಯ  ಶಾಸಕನಿದ್ದೇನೆ ಅಷ್ಟೆ. ಇದು ಇಲ್ಲದೇ ಹೊಗಿದರೆ ಇನ್ನೂ 10ರಷ್ಟು ಕೆಲಸ ಮಾಡುತ್ತಿದ್ದೆ. ಶಾಸಕನಾಗಿರೋದರಿಂದ ಕೈ ಕಟ್ಟಿದ ಹಾಗೆ ಆಗಿದೆ. ನನಗೆ ಸೋಲಿನ ಭಯ ಇಲ್ಲವೇ ಇಲ್ಲ. ನಾನು ಜೀವಂತ ಇರೋವರೆಗೆ ಯಮಕನಮರಡಿ ಕ್ಷೇತ್ರದ ಶಾಸಕನಾಗಿ ಇರುತ್ತೇನೆ. ನಾನು ಬುದ್ಧ, ಬಸವ, ಅಂಬೇಡ್ಕರ್ ಅನುಯಾಯಿ. ಯಾವುದೇ ವ್ಯಕ್ತಿಗೆ ಹೆದುರುವ ಪ್ರಶ್ನೆ ಇಲ್ಲ ಎಂದರು.
First published:January 5, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ