ಚಿಕ್ಕಬಳ್ಳಾಪುರ: ಈ ಬಾರಿಯ ಚುನಾವಣೆಯಲ್ಲಿ (Karnataka Election) ಘಟಾನುಘಟಿ ನಾಯಕರು ಸೋತಿದ್ದಾರೆ. ಬಸವರಾಜ್ ಬೊಮ್ಮಾಯಿ (Basavaraj Bommai) ಮತ್ತು ಬಿಎಸ್ ಯಡಿಯೂರಪ್ಪ (BS Yediyuirappa) ಸಂಪುಟದಲ್ಲಿ ಸಚಿವರಾಗಿದ್ದ ಡಾ.ಕೆ.ಸುಧಾಕರ್ (Former Minster Dr K Sudhakar) ಅವರ ಮನೆಯನ್ನು ಸೋಲು ಸೇರಿಸಿದೆ. ಡಾ.ಕೆ.ಸುಧಾಕರ್ ಸೋಲಿನ ಹಿನ್ನೆಲೆ ಅವರ ಅಭಿಮಾನಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಅಭಿಮಾನಿ. ಚಿಕ್ಕಬಳ್ಳಾಪುರ ತಾಲೂಕಿನ ವಡ್ರೆಪಾಳ್ಯದ ಕೆರೆಗೆ ಜಿಗಿದು ವೆಂಕಟೇಶ್ ಪ್ರಾಣ ಬಿಟ್ಟಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕೋಟೆ ನಿವಾಸಿ ವೆಂಕಟೇಶ್ ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದರು. ಸೋಲಿನಿಂದ ನೊಂದಿದ್ದ ವೆಂಕಟೇಶ್ ಪ್ರಾಣ ಬಿಟ್ಟಿದ್ದಾರೆ.
ಸಾರಾ ಮಹೇಶ್ ಅಭಿಮಾನಿ ಆತ್ಮಹತ್ಯೆಗೆ ಯತ್ನ
ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಸೋಲಿನಿಂದ ನೊಂದ ಅಭಿಮಾನಿ ವೆಂಕಟೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರು ಜಿಲ್ಲೆ ಯ ಕೆ ಆರ್ ನಗರ ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ
ಹೊನ್ನಾಳಿ ವಿಧಾನಸಭಾ ಕ್ಷೇತ್ರದ (Honnali Constituency) ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿಯಲಾಗಿದೆ. 24 ವರ್ಷದ ಮಧು ಚಾಕು ಇರಿತಕ್ಕೊಳಗಾದ ಕಾಂಗ್ರೆಸ್ ಕಾರ್ಯಕರ್ತ.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ 2023 LIVE: ಸಿಎಂ ಕುರ್ಚಿ ಯಾರಿಗೆ? ಖರ್ಗೆ ನಿವಾಸದಲ್ಲಿ ಡಿಕೆಶಿ ಬ್ರದರ್ಸ್ ಮೀಟಿಂಗ್
ಸದ್ಯ ಮಧು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (Former MLA MP Renukacharya) ಅವರ ಬೆಂಬಲಿಗರಾದ ಪ್ರವೀಣ್ ಪ್ರಕಾಶ್ ತೀರ್ಥಲಿಂಗ ಸೇರಿ ಕೆಲ ಬಿಜೆಪಿ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ