• Home
  • »
  • News
  • »
  • state
  • »
  • Karnataka Politics: ಕಾಂಗ್ರೆಸ್ ಕಡೆ ಮುಖ ಮಾಡಿದ ಮಾಜಿ ಶಾಸಕ ಹೆಚ್ ನಿಂಗಪ್ಪ ಜೆಡಿಎಸ್​ಗೆ ರಾಜೀನಾಮೆ!

Karnataka Politics: ಕಾಂಗ್ರೆಸ್ ಕಡೆ ಮುಖ ಮಾಡಿದ ಮಾಜಿ ಶಾಸಕ ಹೆಚ್ ನಿಂಗಪ್ಪ ಜೆಡಿಎಸ್​ಗೆ ರಾಜೀನಾಮೆ!

ಮಾಜಿ ಶಾಸಕ ಹೆಚ್ ನಿಂಗಪ್ಪ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಮುಂದೆ ಅವರು ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳಬಹುದೆಂದು ಅಂದಾಜಿಸಲಾಗಿದೆ.

ಮಾಜಿ ಶಾಸಕ ಹೆಚ್ ನಿಂಗಪ್ಪ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಮುಂದೆ ಅವರು ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳಬಹುದೆಂದು ಅಂದಾಜಿಸಲಾಗಿದೆ.

ಮಾಜಿ ಶಾಸಕ ಹೆಚ್ ನಿಂಗಪ್ಪ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಮುಂದೆ ಅವರು ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳಬಹುದೆಂದು ಅಂದಾಜಿಸಲಾಗಿದೆ.

  • News18 Kannada
  • Last Updated :
  • Bangalore [Bangalore], India
  • Share this:

ತುಮಕೂರು(ನ.15): ಕರ್ನಾಟಕ ಚುನಾವಣೆ (Karnataka Assembly Elections) ಸಮೀಪಿಸುತ್ತಿದೆ. ಹೀಗಿರುವಾಗ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ರಾಜಕೀಯ ಮುಖಂಡರ ಕೆಸರೆರಚಾಟ ಎಗ್ಗಿಲ್ಲದೆ ಮುಂದುವರೆದಿದೆ. ಇನ್ನು ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರು ಪಕ್ಷ ಬದಲಾಯಿಸುವುದೂ ಸಾಮಾನ್ಯ. ಸದ್ಯ ಈ ನಡೆ ಕರ್ನಾಟಕ ರಾಜಕೀಯ ವಲಯದಲ್ಲೂ ಆರಂಭವಾಗಿದೆ. ಹೌದು ಮಾಜಿ ಶಾಸಕ ಹೆಚ್ ನಿಂಗಪ್ಪ (Former MLA H Ningappa) ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಮುಂದೆ ಅವರು ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳಬಹುದೆಂದು ಅಂದಾಜಿಸಲಾಗಿದೆ.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂಗೆ ಮಾಜಿ ಶಾಸಕ ಹೆಚ್ ನಿಂಗಪ್ಪ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಶಾಸಕರಾ ಆಯ್ಕೆಯಾಗಿದ್ದ ನಿಂಗಪ್ಪ, ಬಳಿಕ 2013ರಲ್ಲಿ ಜೆಡಿಎಸ್ನಿಂದ ಟಿಕೆಟ್ ಸಿಗದಿದ್ದ ಕಾರಣಕ್ಕೆ ಕೆಜೆಪಿಗೆ ಸೇರ್ಪಡೆಗೊಂಡು ಸ್ಪರ್ಧಿಸಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದ ಹೆಚ್ ನಿಂಗಪ್ಪ, ಮತ್ತೆ ಕಳೆದ 2018 ರಲ್ಲಿ ಜೆಡಿಎಸ್ ಗೆ ಮರಳಿದ್ದರು.


ಇದನ್ನೂ ಓದಿ: Siddaramaiah: ಕೋಲಾರದಲ್ಲಿ ಮಾಜಿ ಸಿಎಂ ಸ್ಪರ್ಧೆ ಫಿಕ್ಸ್​! ಮತ್ತೆ ನಾಮಿನೇಷನ್​ ಮಾಡಲು ಬರ್ತಾರಂತೆ ಸಿದ್ದರಾಮಯ್ಯ
ಪಕ್ಷದ ಬಗ್ಗೆ ಅಸಮಾಧಾನ


2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಿಂಗಪ್ಪ ಮತ್ತೆ ಜೆಡಿಎಸ್‌ಗೆ ವಾಪಸ್ ಆಗಿದ್ದರು. ಆದರೆ ಡಿ. ಸಿ. ಗೌರಿಶಂಕರ್ ಜೆಡಿಎಸ್ ಟಿಕೆಟ್ ಪಡೆದು ಕಣಕ್ಕಿಳಿದು, ಗೆಲುವು ಕಂಡರು. ಹೀಗಿರುವಾಗ ಕುಮಾರಸ್ವಾಮಿ ನಿಂಗಪ್ಪ ಅವರಿಗೆ ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಂದು ನೇಮಿಸಿ ಆದೇಶ ಪತ್ರ ನೀಡಿದ್ದರು‌. ಆದರೆ ಆ ಆದೇಶ ಕೇವಲ ಪತ್ರವಾಗಿಯೇ ಉಳಿಯಿತು ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪಕ್ಷದ ಎಲ್ಲಾ ಚಟುವಟಿಕೆಗಳಿಂದ ನನ್ನ ದೂರ ಇಟ್ಟಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published by:Precilla Olivia Dias
First published: